ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಸುದೀರ್ಘ ಸರಣಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಹರಿಣಗಳ ನಾಡಿಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಇಂದಿನಿಂದ ಅಭ್ಯಾಸ ಶುರುಮಾಡಲಿದ್ದಾರೆ. ಆಫ್ರಿಕಾ ವಿರುದ್ಧ ಭಾರತ ಮೊದಲಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ನಂತರ ಕೆಎಲ್ ರಾಹುಲ್ ನಾಯಕತ್ವದಲ್ಲಿ ಮೂರು ಏಕದಿನ ಮತ್ತು ರೋಹಿತ್ ಶರ್ಮಾ ಕ್ಯಾಪ್ಟನ್ಸಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಹಾಗಾದರೆ, ಇಂಡೋ-ಆಫ್ರಿಕಾ ಪ್ರಥಮ ಟಿ20 ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ. ಇಲ್ಲಿದೆ ನೋಡಿ ಮಾಹಿತಿ.
ಭಾರತ- ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ಯಾವಾಗ?
ಡಿಸೆಂಬರ್ 10 ಭಾನುವಾರದಂದು ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಟಿ20 ಪಂದ್ಯ ನಡೆಯಲಿದೆ.
ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ಎಲ್ಲಿ ಆಡಲಾಗುತ್ತದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ಡರ್ಬನ್ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ನಡೆಯಲಿದೆ.
Big Bash League: ಬಿಗ್ ಬ್ಯಾಷ್ ಲೀಗ್ನಲ್ಲಿ ಜೆಟ್ಪ್ಯಾಕ್ ಶೋ: ಐಪಿಎಲ್ನಲ್ಲಿ ಇದೆಲ್ಲ ಇಲ್ಲ ಎಂದ ಫ್ಯಾನ್ಸ್
ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ.
ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ಹಾಗೂ ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 9:30ಕ್ಕೆ ಆರಂಭವಾಗಲಿದೆ.
ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ಹಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.
ದಕ್ಷಿಣ ಆಫ್ರಿಕಾ ಟಿ20 ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಮ್ಯಾಥ್ಯೂ ಬ್ರಿಟ್ಜ್ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್,ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ಲಿಜಾದ್ ವಿಲಿಯಮ್ಸ್. ಲುಂಗಿ ಎನ್‌ಗಿಡಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ