ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮುಗಿದಿದೆ. ಮುಂದೇನು ಎಂಬ ಕ್ರಿಕೆಟ್ ಪ್ರೇಮಿಗಳ ಪ್ರಶ್ನೆಗೆ ಭಾರತ-ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ (India vs South Africa T20Is Series). ಮುಂದಿನ ತಿಂಗಳಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಭಾರತದಲ್ಲೇ ನಡೆಯಲಿರುವ ಈ ಸರಣಿ ಒಂದು ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿರುವುದು ವಿಶೇಷ. ಹೀಗಾಗಿ ಐಪಿಎಲ್ ಅನ್ನು ಸ್ಟೇಡಿಯಂನಲ್ಲಿ ಕಣ್ತುಂಬಿಕೊಳ್ಳಲು ಸಾಧ್ಯವಾಗದ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿ20 ಪಂದ್ಯವನ್ನು ವೀಕ್ಷಿಸಬಹುದು.
ಈ ಸರಣಿಯು ಜೂನ್ 9 ರಂದು ಆರಂಭವಾಗಲಿದ್ದು, ಅಂತಿಮ ಪಂದ್ಯ ಜೂನ್ 19 ರಂದು ನಡೆಯಲಿದೆ. ಈಗಾಗಲೇ ಸರಣಿಗಾಗಿ ಭಾರತ ಯುವ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇನ್ನು ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ತಂಡವನ್ನು ಕನ್ನಡಿಗ ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಗೆ ಟೀಮ್ ಇಂಡಿಯಾ ಹೀಗಿದೆ.
ಟೀಮ್ ಇಂಡಿಯಾ ಟಿ20 ತಂಡ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷ್ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.
ದಕ್ಷಿಣ ಆಫ್ರಿಕಾ ಟಿ20 ತಂಡ ಹೀಗಿದೆ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ, ವಾಯ್ನೆ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡಾ, ತಬ್ರೇಝ್ ಶಮ್ಸಿ, ಸ್ಟೀಸ್ಟನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಯಾನ್ಸೆನ್
ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಹೀಗಿದೆ:
ಜೂನ್ 9- ಮೊದಲ T20I ಪಂದ್ಯ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)
12 ಜೂನ್- 2 ನೇ T20I ಪಂದ್ಯ (ಬಾರಾಬತಿ ಸ್ಟೇಡಿಯಂ, ಕಟಕ್)
ಜೂನ್ 14- 3ನೇ T20I ಪಂದ್ಯ (ಡಾ. ವೈಎಸ್‌ಆರ್ ರೆಡ್ಡಿ ಸ್ಟೇಡಿಯಂ, ವಿಶಾಖಪಟ್ಟಣಂ)
ಜೂನ್ 17- 4 ನೇ T20I ಪಂದ್ಯ (ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ರಾಜ್ಕೋಟ್)
ಜೂನ್ 19- 5 ನೇ T20I ಪಂದ್ಯ (ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)
ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಶುರುವಾಗಲಿದೆ. ಇನ್ನು ಈ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್ಗಳಲ್ಲಿ ಮತ್ತು ಡಿಸ್ನಿ + ಹಾಟ್ಸ್ಟಾರ್ನಲ್ಲಿ ವೀಕ್ಷಿಸಬಹುದು.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:33 pm, Mon, 30 May 22