AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa: ಓಮಿಕ್ರಾನ್ ಭೀತಿ: ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ

India tour of South Africa: ಭಾರತ- ದಕ್ಷಿಣ ಆಫ್ರಿಕಾ ಸರಣಿಯನ್ನು ಒಂದು ವಾರಗಳ ಕಾಲ ಮುಂದೂಡಲಾಗಿದೆ ಎಂದು ವರದಿಯಾಗಿದೆ. ಹೀಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾ ಆಯ್ಕೆ ಪ್ರಕ್ರಿಯೆಯನ್ನು ಭಾರತೀಯ ಸರ್ಕಾರದ ನಿರ್ಧಾರದ ನಂತರ ನಡೆಸಲಿದೆಯಂತೆ.

India vs South Africa: ಓಮಿಕ್ರಾನ್ ಭೀತಿ: ಭಾರತ ಕ್ರಿಕೆಟ್ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ
India vs South Africa
TV9 Web
| Updated By: Vinay Bhat|

Updated on:Dec 02, 2021 | 11:59 AM

Share

ನ್ಯೂಜಿಲೆಂಡ್‌ ವಿರುದ್ಧದ ಸ್ವದೇಶಿ ಸರಣಿ ಮುಗಿದ ಬಳಿಕ ಭಾರತ ಕ್ರಿಕೆಟ್‌ ತಂಡ ದಕ್ಷಿಣ ಆಫ್ರಿಕಾಕ್ಕೆ (India vs South Africa) ತೆರಳಬೇಕಿತ್ತು. ಆದರೆ, ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಹೊಸ ತಳಿ ಓಮಿಕ್ರಾನ್ (Omicron) ಭೀತಿ ದಿನದಿಂದ ದಿನಕ್ಕೆ ಏರುತ್ತಿರುವ ಕಾರಣ ಭಾರತ- ದಕ್ಷಿಣ ಆಫ್ರಿಕಾ (IND vs SA) ಸರಣಿಯನ್ನು ಒಂದು ವಾರಗಳ ಕಾಲ ಮುಂದೂಡಲಾಗಿದೆ ಎಂದು ವರದಿಯಾಗಿದೆ. ಹೀಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾ (Team India) ಆಯ್ಕೆ ಪ್ರಕ್ರಿಯೆಯನ್ನು ಭಾರತೀಯ ಸರ್ಕಾರದ (Indian Government) ನಿರ್ಧಾರದ ನಂತರ ನಡೆಸಲಿದೆಯಂತೆ. ದಕ್ಷಿಣ ಆಫ್ರಿಕಾ ಪ್ರವಾಸ ಪೂರ್ವನಿರ್ಧರಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಗಂಗೂಲಿ ಎರಡು ದಿನಗಳ ಹಿಂದೆ ಹೇಳಿದ್ದರು. ಹೊಸ ರೂಪಾಂತರದ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪ್ರವಾಸದ ಬಗ್ಗೆ ನಿರ್ಧರಿಸಲು ಇನ್ನೂ ಸಮಯವಿದೆ. ಮೊದಲ ಟೆಸ್ಟ್ ಡಿಸೆಂಬರ್ 17 ರಿಂದ ನಡೆಯಲಿದೆ. ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆಂದು ಗಂಗೂಲಿ (Sourav Ganguly) ಹೇಳಿಕೆ ನೀಡಿದ್ದರು. ಆದರೆ, ಸದ್ಯ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದ್ದು ಪ್ರವಾಸವನ್ನು ಒಂದು ವಾರಗಳ ಕಾಲ ಮುಂದೂಡಲಾಗಿದೆಯಂತೆ.

ಭಾರತ, ಡಿಸೆಂಬರ್ 3 ರಿಂದ ಮುಂಬೈನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಆಡಲಿದೆ. ನಂತರ ತಂಡ  ಚಾರ್ಟರ್ಡ್ ವಿಮಾನದಲ್ಲಿ ಡಿಸೆಂಬರ್ 8 ಅಥವಾ 9 ರಂದು ಜೋಹಾನ್ಸ್ ಬರ್ಗ್‌ಗೆ ತೆರಳಬೇಕಿತ್ತು. ಡಿಸೆಂಬರ್ 17 ರಿಂದ ಪ್ರಾರಂಭವಾಗ ಬೇಕಿದ್ದ ಪ್ರವಾಸದಲ್ಲಿ ಭಾರತ 3 ಟೆಸ್ಟ್, 3 ಏಕದಿನ ಪಂದ್ಯ ಮತ್ತು 4 ಟಿ-20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಬೇಕಿತ್ತು.

ಈ ಪ್ರವಾಸಕ್ಕಾಗಿ ಭಾರತ ತಂಡ ಸುಮಾರು ಒಂದೂವರೆ ತಿಂಗಳ ಕಾಲ ದಕ್ಷಿಣ ಆಫ್ರಿಕಾದಲ್ಲಿ ಇರಲಿದೆ. ಈ ಪಂದ್ಯಗಳು ಜೋಹಾನ್ಸ್‌ಬರ್ಗ್, ಸೆಂಚುರಿಯನ್, ಪರ್ಲ್ ಮತ್ತು ಕೇಪ್ ಟೌನ್‌ನಲ್ಲಿ ನಾಲ್ಕು ಸ್ಥಳಗಳಲ್ಲಿ ನಡೆಯಲಿವೆ. ಆದರೆ  ಆಫ್ರಿಕನ್ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ಇವು ಬದಲಾಗುವಂತೆ ಕಾಣುತ್ತಿದೆ.

ಇದರ ನಡುವೆ ದಕ್ಷಿಣ ಆಫ್ರಿಕಾ ಸರಕಾರ ಈ ಬಗ್ಗೆ ಭಾರತೀಯ ಕ್ರಿಕೆಟ್​ಗೆ ಅಭಯ ಸೂಚಿಸಿದೆ. ಟೀಮ್ ಇಂಡಿಯಾ ಉಳಿದುಕೊಳ್ಳಲು ಅತ್ಯಂತ ಸುರಕ್ಷಿತ ಬಯೋ ಬಬಲ್‌ ವಾತಾವರಣದ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದೆ. “ಟೀಮ್ ಇಂಡಿಯಾ ಆಟಗಾರರ ಆರೋಗ್ಯ ಮತ್ತು ರಕ್ಷಣೆ ಸಲುವಾಗಿ ದಕ್ಷಿಣ ಆಫ್ರಿಕಾ ಸಕಲ ವ್ಯವಸ್ಥೆಯನ್ನು ಕಲ್ಪಿಸಲಿದೆ. ದಕ್ಷಿಣ ಆಫ್ರಿಕಾ, ಭಾರತ ‘ಎ’ ತಂಡ ಮತ್ತು ಟೀಮ್ ಇಂಡಿಯಾ ಆಟಗಾರರಿಗೆ ಸಂಪೂರ್ಣ ಸುರಕ್ಷಿತವಾದ ಬಯೋ ಸೆಕ್ಯೂರ್‌ ವಾತಾವರಣ ನಿರ್ಮಾಣ ಮಾಡಲಾಗುವುದು. ಭಾರತ ‘ಎ’ ತಂಡವನ್ನು ಹಿಂಪಡೆಯದೆ ಬಿಸಿಸಿಐ ಉತ್ತಮ ಒಗ್ಗಟ್ಟನ್ನು ಪ್ರದರ್ಶಿಸಿದೆ,” ಎಂದು ದಕ್ಷಿಣ ಆಫ್ರಿಕಾದ ವಿದೇಶಾಂಗ ಸಚಿವಾಲಯದ ಅಧಿಕಾರಿ ಹೇಳಿದ್ದಾರೆ.

India vs New Zealand Test: 2ನೇ ಟೆಸ್ಟ್​ಗೆ ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ: ಭಾರತದ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ

Virat Kohli: ವಿರಾಟ್ ಕೊಹ್ಲಿ ಸ್ಥಾನಕ್ಕಾಗಿ 2ನೇ ಟೆಸ್ಟ್​ನಿಂದ ಹೊರಗುಳಿಯಲಿದ್ದಾರೆ ಈ ಸ್ಟಾರ್ ಬ್ಯಾಟರ್: ಯಾರು ಗೊತ್ತಾ?

(India vs South Africa Team India upcoming tour of South Africa has been reportedly postponed by a week)

Published On - 11:59 am, Thu, 2 December 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!