India vs South Africa: ಭಾರತ- ದಕ್ಷಿಣ ಆಫ್ರಿಕಾ ಸರಣಿ ಯಾವಾಗ?, ಯಾವುದರಲ್ಲಿ ಲೈವ್, ಎಷ್ಟು ಗಂಟೆಗೆ?: ಇಲ್ಲಿದೆ ಎಲ್ಲ ಮಾಹಿತಿ
India tour of SA: ಭಾರತ ದಕ್ಷಿಣ ಆಫ್ರಿಕಾ ನಡುವಣ ಬಹುನಿರೀಕ್ಷಿತ ಏಕದಿನ ಮತ್ತು ಟೆಸ್ಟ್ ಸರಣಿ ಯಾವಾಗ ಆರಂಭ?, ಯಾವುದರಲ್ಲಿ ನೇರಪ್ರಸಾರ?, ಎಷ್ಟು ಗಂಟೆಗೆ ಶುರು?, ಉಭಯ ತಂಡಗಳು ಹೇಗಿದೆ? ಎಲ್ಲ ಮಾಹಿತಿ ಇಲ್ಲಿದೆ ನೋಡಿ.

ಹರಿಣಗಳ ನಾಡಿನಲ್ಲಿ ಐತಿಹಾಸಿಕ ಸಾಧನೆ ಮಾಡಲು ದಕ್ಷಿಣ ಆಫ್ರಿಕಾಕ್ಕೆ (India vs South Africa) ತೆರಳಿರುವ ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಭಾರತ ಟೆಸ್ಟ್ ತಂಡ (India Test Squad) ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಹೌದು, ಆಫ್ರಿಕಾ ನೆಲದಲ್ಲಿ ಮೊಟ್ಟಮೊದಲ ಟೆಸ್ಟ್ ಸರಣಿ ಗೆಲ್ಲುವ ಇರಾದೆಯಲ್ಲಿ ಹರಿಣಗಳ ನಾಡಿಗೆ ಕಾಲಿಟ್ಟಿರುವ ಟೀಮ್ ಇಂಡಿಯಾ (Team India) ಮೇಲೆ ಸಾಕಷ್ಟು ನಂಬಿಕೆ ಇಡಲಾಗಿದೆ. ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮೂರು ಪಂದ್ಯಗಳ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಆಡಲಿದೆ. ಏಕದಿನ ತಂಡವನ್ನು ರೋಹಿತ್ ಶರ್ಮಾ(Rohit Sharma) ಮುನ್ನಡೆಸಲಿದ್ದಾರೆ. ಆದರೆ, ಗಾಯದ ಸಮಸ್ಯೆಯ ಕಾರಣ ರೋಹಿತ್ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ. ಏಕದಿನ ಸರಣಿ ಆರಂಭದ ವೇಳೆಗೆ ರೋಹಿತ್ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ಇದೆ. ಹಾಗಾದ್ರೆ ಈ ಬಹುನಿರೀಕ್ಷಿತ ಇಂಡೋ-ಆಫ್ರಿಕಾ ಕದನ ಯಾವಾಗ ಆರಂಭ?, ಯಾವುದರಲ್ಲಿ ನೇರಪ್ರಸಾರ?, ಎಷ್ಟು ಗಂಟೆಗೆ ಶುರು?, ಎಲ್ಲ ಮಾಹಿತಿ ಇಲ್ಲಿದೆ.
ತವರಿನಲ್ಲಿ ನ್ಯೂಜಿಲೆಂಡ್ ವಿರುದ್ದ ಟೆಸ್ಟ್ ಸರಣಿ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಟೆಸ್ಟ್ ಕ್ರಿಕೆಟ್ ತಂಡವು, ಹರಿಣಗಳ ನಾಡಿನಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸುತ್ತಾ ಎಂಬುದು ಕುತೂಹಲ. ಸಾಕಷ್ಟು ವಿವಾದಗಳಿಗೆ ಗುರಿಯಾಗಿರುವ ಕೊಹ್ಲಿಗೂ ಇದು ಮಹತ್ವದ ಟೆಸ್ಟ್ ಸರಣಿಯಾಗಿದೆ. ರೋಹಿತ್ ಶರ್ಮಾ ಬದಲಿಗೆ ಪ್ರಿಯಾಂಕ್ ಪಾಂಚಲ್ ಟೀಮ್ ಇಂಡಿಯಾದಲ್ಲಿ ಮೊದಲ ಬಾರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಶುಭ್ಮನ್ ಹಾಗೂ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಕನ್ನಡದ ಜೋಡಿಯಾದ ಮಯಾಂಕ್ ಅಗರ್‌ವಾಲ್ ಹಾಗೂ ಕೆಎಲ್ ರಾಹುಲ್ ಟೆಸ್ಟ್ ಆರಂಭಿಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಫಾರ್ಮ್ ಕೊರತೆ ಅನುಭವಿಸುತ್ತಿರುವ ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ್ ಪೂಜಾರ ಅವರ ಪಾಲಿಗೆ ಈ ಸರಣಿ ಸಾಕಷ್ಟು ಮಹತ್ವದ್ದೆನಿಸಿದೆ.
ಪಂದ್ಯ ನಡೆಯಲಿರುವ ಸ್ಥಳ:
ಸೆಂಚೂರಿಯನ್, ಜೋಹಾನ್ಸ್ಬರ್ಗ್, ಕೇಪ್ಟೌನ್ ಮತ್ತು ಪಾರ್ಲ್ ನಗರಗಳಲ್ಲಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ಸರಣಿಗಳ ಪಂದ್ಯಗಳು ನಡೆಯಲಿವೆ. ಕೇಪ್ಟೌನ್ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ಒಂದು ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳು ನಿಗದಿಯಾಗಿವೆ. ಪಾರ್ಲ್ ನಗರದ ಬೋಲ್ಯಾಂಡ್ ಪಾರ್ಕ್ ಸ್ಟೇಡಿಯಂನಲ್ಲಿ ಎರಡು ಏಕದಿನ ಪಂದ್ಯಗಳು ನಡೆಯಲಿವೆ.
ವೇಳಾಪಟ್ಟಿ:
ಟೆಸ್ಟ್ ಸರಣಿ:
1) ಡಿ. 26-30: ಸೂಪರ್ ಸ್ಪೋರ್ಟ್ ಪಾರ್ಕ್, ಸೆಂಚೂರಿಯನ್
2) ಜ. 3-7: ವಾಂಡರರ್ಸ್, ಜೋಹಾನ್ಸ್ಬರ್ಗ್
3) ಜ. 11-15: ನ್ಯೂಲ್ಯಾಂಡ್ಸ್, ಕೇಪ್ ಟೌನ್
ಏಕದಿನ ಸರಣಿ:
1) ಜ. 19: ಬೋಲ್ಯಾಂಡ್ ಪಾರ್ಕ್, ಪಾರ್ಲ್
2) ಜ. 21: ಬೋಲ್ಯಾಂಡ್ ಪಾರ್ಕ್, ಪಾರ್ಲ್
3) ಜ. 23: ನ್ಯೂಲೆಂಡ್ಸ್, ಕೇಪ್ ಟೌನ್
ಸಮಯ:
ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ. ಮೂರನೇ ಟೆಸ್ಟ್ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ. ಎಲ್ಲ ಏಕದಿನ ಪಂದ್ಯಗಳು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.
ನೇರಪ್ರಸಾರ:
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎಲ್ಲ ಪಂದ್ಯಗಳು ಸ್ಟಾರ್ ಸ್ಫೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಕಾಣಲಿದೆ. ಡಿಸ್ನಿ+ ಹಾಟ್ಸ್ಟಾರ್ನಲ್ಲೂ ಲೈವ್ ಸ್ಟ್ರೀಮ್ ಆಗಲಿದೆ.
ತಂಡಗಳು:
ಭಾರತ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್.ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಪ್ರಿಯಾಂಕ್ ಪಾಂಚಾಲ್.
ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾಯಕ), ತೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕಗಿಸೊ ರಬಾಡ, ಸರೆಲ್ ಎರ್ವೀ, ಬ್ಯೂರಾನ್ ಹೆಂಡ್ರಿಕ್ಸ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಅನ್ರಿಕ್ ನೋಕಿಯಾ, ಕೀಗನ್ ಪೀಟರ್ಸನ್, ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ, ಮಾರ್ಕೊ ಜಾನ್ಸೆನ್, ಗ್ಲೆಂಟನ್ ಸ್ಟೌರ್ಮನ್, ಪ್ರೆನೆಲನ್ ಸುಬ್ರಾಯೆನ್, ಸಿಸಂಡಾ ಮಗಾಲಾ, ರಿಯಾನ್ ರಿಕೆಲ್ಟನ್, ಡುವಾನ್ನೆ ಒಲಿವಿಯರ್.
India vs South Africa: ಆಫ್ರಿಕಾ ಪಿಚ್ನಲ್ಲಿ ಮುಂದುವರೆದ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಇಲ್ಲಿವೆ ಫೋಟೋ
(India vs South Africa Test and ODI Series Schedule squads telecast and live streaming Here is the all details)
