AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ; ಭಾರತ ತಂಡಕ್ಕೆ ರಿಷಭ್ ಪಂತ್ ರಿಟರ್ನ್

India vs South Africa Test at Eden Gardens: ಭಾರತ ಮತ್ತು ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಮಹತ್ವದ ಪಂದ್ಯ 15 ವರ್ಷಗಳ ನಂತರ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಐತಿಹಾಸಿಕವಾಗಿ ಭಾರತ 2-1 ಮುನ್ನಡೆ ಸಾಧಿಸಿದೆ. 25 ವರ್ಷಗಳಿಂದ ಭಾರತದಲ್ಲಿ ಸರಣಿ ಗೆಲ್ಲಲು ದಕ್ಷಿಣ ಆಫ್ರಿಕಾ ಕಾಯುತ್ತಿದೆ. ಪ್ರಸ್ತುತ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದೆ, ಭಾರತ ಮೊದಲು ಬೌಲಿಂಗ್ ಮಾಡಲಿದೆ. ಉಭಯ ತಂಡಗಳ ದಾಖಲೆಗಳು ರೋಚಕ ಕದನಕ್ಕೆ ಸಾಕ್ಷಿಯಾಗಲಿವೆ.

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ; ಭಾರತ ತಂಡಕ್ಕೆ ರಿಷಭ್ ಪಂತ್ ರಿಟರ್ನ್
Ind Vs Sa
ಪೃಥ್ವಿಶಂಕರ
|

Updated on:Nov 14, 2025 | 9:24 AM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ತಂಡಗಳು 15 ವರ್ಷಗಳ ನಂತರ ಈಡನ್ ಗಾರ್ಡನ್ಸ್‌ನಲ್ಲಿ ಟೆಸ್ಟ್ ಪಂದ್ಯವನ್ನು ಆಡುತ್ತಿವೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯವು 1996 ರಲ್ಲಿ ಈ ಮೈದಾನದಲ್ಲಿ ನಡೆದಿತ್ತು. ಅಂದಿನಿಂದ, 2010 ರವರೆಗೆ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರು ಟೆಸ್ಟ್ ಪಂದ್ಯಗಳು ಈಡನ್ ಗಾರ್ಡನ್ಸ್‌ನಲ್ಲಿ (Eden Gardens) ನಡೆದಿದ್ದು, ಇದರಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. 2000 ಇಸವಿಯಿಂದ ದಕ್ಷಿಣ ಆಫ್ರಿಕಾ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಇದರರ್ಥ ಸರಣಿ ಗೆಲುವಿಗಾಗಿ ಹರಿಣಗಳ ಕಾಯುವಿಕೆ 25 ವರ್ಷಗಳಿಂದ ಮುಂದುವರೆದಿದೆ. ಈ ಅಂಕಿಅಂಶಗಳನ್ನು ಗಮನಿಸಿದರೆ, ಪ್ರಸ್ತುತ ಸರಣಿಯಲ್ಲಿ ಭಾರತಕ್ಕೆ ಸ್ವಲ್ಪ ಮುನ್ನಡೆ ಇದೆ.

ಟಾಸ್ ಗೆದ್ದ ದಕ್ಷಿಣ ಆಫ್ರಿಕಾ

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬ ಬವುಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ಆಫ್ರಿಕಾ ತಂಡದ ಸ್ಟಾರ್ ವೇಗದ ಕಗಿಸೊ ರಬಾಡ ಈ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ಕಾರ್ಬಿನ್ ಬಾಷ್ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆದಿದ್ದಾರೆ. ಏತನ್ಮಧ್ಯೆ, ಭಾರತದ ಪ್ಲೇಯಿಂಗ್-11 ರಲ್ಲಿ ಎರಡು ಬದಲಾವಣೆಗಳಿವೆ. ರಿಷಭ್ ಪಂತ್ ತಂಡಕ್ಕೆ ಮರಳಿದ್ದು, ನಿತೀಶ್ ರೆಡ್ಡಿ ಬದಲಿಗೆ ಆಡಲಿದ್ದಾರೆ. ಪಂತ್ ಜೊತೆಗೆ ಅಕ್ಷರ್ ಪಟೇಲ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದರರ್ಥ ಟೀಂ ಇಂಡಿಯಾ ನಾಲ್ಕು ಸ್ಪಿನ್ನರ್‌ಗಳೊಂದಿಗೆ ಆಡುತ್ತಿದೆ, ಅವರಲ್ಲಿ ಮೂವರು ಆಲ್‌ರೌಂಡರ್‌ಗಳಿದ್ದಾರೆ. ಸಾಯಿ ಸುದರ್ಶನ್ ಈ ಪಂದ್ಯವನ್ನು ಆಡುತ್ತಿಲ್ಲವಾದುದ್ದರಿಂದ ಸುಂದರ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು.

IND vs SA: ಮೊದಲ ಟೆಸ್ಟ್​ಗೂ ಮುನ್ನ ಧ್ರುವ್ ಜುರೆಲ್​ಗೆ ಸಿಹಿ ಸುದ್ದಿ ನೀಡಿದ ಕೋಚ್

ಉಭಯ ತಂಡಗಳ ಟೆಸ್ಟ್ ದಾಖಲೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 45 ನೇ ಟೆಸ್ಟ್ ಪಂದ್ಯ ಇದಾಗಿದೆ . ಈ ಮೊದಲು ಆಡಿರುವ 44 ಟೆಸ್ಟ್‌ಗಳಲ್ಲಿ ಭಾರತ 16 ರಲ್ಲಿ ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 18 ರಲ್ಲಿ ಗೆದ್ದಿದೆ. ಹತ್ತು ಟೆಸ್ಟ್‌ಗಳು ಡ್ರಾದಲ್ಲಿ ಕೊನೆಗೊಂಡಿವೆ. ಹಾಗೆಯೇ ಇದು ಭಾರತದ ನೆಲದಲ್ಲಿ ಈ ಎರಡೂ ತಂಡಗಳ ನಡುವಿನ 20 ನೇ ಟೆಸ್ಟ್ ಪಂದ್ಯವಾಗಲಿದೆ. ಈ ಹಿಂದೆ ಆಡಿದ 19 ಟೆಸ್ಟ್‌ಗಳಲ್ಲಿ ಭಾರತ 11 ರಲ್ಲಿ ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ ಐದು ಪಂದ್ಯಗಳನ್ನು ಗೆದ್ದಿದೆ. ಮೂರು ಟೆಸ್ಟ್‌ಗಳು ಡ್ರಾದಲ್ಲಿ ಕೊನೆಗೊಂಡಿವೆ.

ಉಭಯ ತಂಡಗಳು

ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶುಭ್​ಮನ್ ಗಿಲ್(ನಾಯಕ), ರಿಷಭ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ತೆಂಬ ಬವುಮಾ (ನಾಯಕ), ಟೋನಿ ಡಿ ಜೊರ್ಜಿ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಸೈಮನ್ ಹಾರ್ಮರ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್ ಮತ್ತು ಕೇಶವ್ ಮಹಾರಾಜ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 am, Fri, 14 November 25

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ