
ಬರೋಬ್ಬರಿ 2 ವರ್ಷಗಳ ಬಳಿಕ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಆಡಲು ಸಜ್ಜಾಗುತ್ತಿದೆ. ಆದರೆ ಈ ಬಾರಿ ಭಾರತ ತಂಡ ಎದುರಿಸುತ್ತಿರುವುದು ವಿಶ್ವ ಚಾಂಪಿಯನ್ ಸೌತ್ ಆಫ್ರಿಕಾ ತಂಡವನ್ನು. ಅಂದರೆ 2025 ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಸೌತ್ ಆಫ್ರಿಕಾ ತಂಡ ಟೀಮ್ ಇಂಡಿಯಾವನ್ನು ಎದುರಿಸುತ್ತಿದೆ. ಹೀಗಾಗಿಯೇ ಈ ಸರಣಿಯು ಮಹತ್ವ ಪಡೆದುಕೊಂಡಿದೆ.
ಅದರಲ್ಲೂ ಭಾರತ ತಂಡ ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಗೆದ್ದು 6 ವರ್ಷಗಳಾಗಿವೆ. ಕೊನೆಯ ಬಾರಿಗೆ ಟೀಮ್ ಇಂಡಿಯಾ ಆಫ್ರಿಕನ್ನರ ವಿರುದ್ಧ ಟೆಸ್ಟ್ ಸರಣಿ ಗೆದ್ದಿದ್ದು 2019 ರಲ್ಲಿ. ಅಂದು ಭಾರತ ತಂಡದ ನಾಯಕರಾಗಿದ್ದ ವಿರಾಟ್ ಕೊಹ್ಲಿ ಈಗ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿದ್ದಾರೆ.
ಇದೀಗ ಹಾಲಿ ಟೆಸ್ಟ್ ಚಾಂಪಿಯನ್ ಸೌತ್ ಆಫ್ರಿಕಾ ತಂಡವನ್ನು ಎದುರಿಸಲು ಯಂಗ್ ಇಂಡಿಯಾ ಸಜ್ಜಾಗುತ್ತಿದೆ. ಅದು ಸಹ ಶುಭ್ಮನ್ ಗಿಲ್ ನಾಯಕತ್ವದಲ್ಲಿ. ಹೀಗಾಗಿಯೇ ಈ ಬಾರಿಯ ಮುಖಾಮುಖಿ ಮತ್ತಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಇನ್ನು ಈ ಸರಣಿಯಲ್ಲಿ ಒಟ್ಟು 2 ಪಂದ್ಯಗಳನ್ನಾಡಲಿದ್ದು, ಈ ಪಂದ್ಯಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
| ದಿನಾಂಕ | ಪಂದ್ಯ | ಸ್ಥಳ | ತಂಡಗಳು | ಸಮಯ (IST) |
| ನವೆಂಬರ್ 14 2025 | 1ನೇ ಟೆಸ್ಟ್ | ಈಡನ್ ಗಾರ್ಡನ್ಸ್, ಕೋಲ್ಕತ್ತಾ | ಭಾರತ vs ಸೌತ್ ಆಫ್ರಿಕಾ | ಬೆಳಗ್ಗೆ 9:30 |
| ನವೆಂಬರ್ 22 2025 | 2ನೇ ಟೆಸ್ಟ್ | ಬರ್ಸಪಾರ ಕ್ರಿಕೆಟ್ ಕ್ರೀಡಾಂಗಣ, ಗುವಾಹಟಿ | ಭಾರತ vs ಸೌತ್ ಆಫ್ರಿಕಾ | ಬೆಳಿಗ್ಗೆ 9:00 |
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್.
ಇದನ್ನೂ ಓದಿ: RCB ನಾಯಕ ರಜತ್ ಪಾಟಿದಾರ್ 4 ತಿಂಗಳು ಕಣಕ್ಕಿಳಿಯುವಂತಿಲ್ಲ..!
ಸೌತ್ ಆಫ್ರಿಕಾ ಟೆಸ್ಟ್ ತಂಡ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಐಡೆನ್ ಮಾರ್ಕ್ರಾಮ್, ಜುಬೇರ್ ಹಮ್ಝ, ಡೆವಾಲ್ಡ್ ಬ್ರೆವಿಸ್, ಸೆನುರಾನ್ ಮುತ್ತುಸಾಮಿ, ಕಾರ್ಬಿನ್ ಬಾಷ್, ಮಾರ್ಕೊ ಯಾನ್ಸೆನ್, ವಿಯಾನ್ ಮುಲ್ಡರ್, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ನೆ, ರಯಾನ್ ರಿಕೆಲ್ಟನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಸೈಮನ್ ಹಾರ್ಮರ್.