Virat Kohli: ಕೇಪ್​ ಟೌನ್​ನಲ್ಲಿ ಕಿಂಗ್​ ಕೊಹ್ಲಿ ಕಂಬ್ಯಾಕ್: 2 ವಿಶೇಷ ದಾಖಲೆಗಳ ಮೇಲೆ ಕಣ್ಣು

| Updated By: ಝಾಹಿರ್ ಯೂಸುಫ್

Updated on: Jan 10, 2022 | 2:42 PM

india vs south africa: ಕೊಹ್ಲಿ ಟೆಸ್ಟ್​ ಕ್ರಿಕೆಟ್​ನಲ್ಲಿ ಇದುವರೆ 7,854 ಟೆಸ್ಟ್ ರನ್‌ಗಳನ್ನು ಕಲೆಹಾಕಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 32ನೇ ಸ್ಥಾನ ಅಲಂಕರಿಸಿದ್ದಾರೆ.

Virat Kohli: ಕೇಪ್​ ಟೌನ್​ನಲ್ಲಿ ಕಿಂಗ್​ ಕೊಹ್ಲಿ ಕಂಬ್ಯಾಕ್: 2 ವಿಶೇಷ ದಾಖಲೆಗಳ ಮೇಲೆ ಕಣ್ಣು
virat kohli
Follow us on

ಭಾರತ ಮತ್ತು ದಕ್ಷಿಣ ಆಫ್ರಿಕಾ (india vs south africa) ನಡುವಣ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೇಪ್​ಟೌನ್​ನಲ್ಲಿ ನಡೆಯಲಿದೆ​. 3 ಪಂದ್ಯಗಳ ಸರಣಿಯ ಮೊದಲ ಟೆಸ್ಟ್‌ನಲ್ಲಿ ಭಾರತ ಗೆದ್ದಿದ್ದರೆ, ಎರಡನೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ಜಯ ಸಾಧಿಸಿತ್ತು. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (virat kohli) ಗಾಯದ ಕಾರಣ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಜನವರಿ 11 ರಿಂದ ಕೇಪ್ ಟೌನ್‌ನಲ್ಲಿ ನಡೆಯಲಿರುವ ಸರಣಿಯ ಮೂರನೇ ಮತ್ತು ನಿರ್ಣಾಯಕ ಟೆಸ್ಟ್‌ನಲ್ಲಿ ಮರಳಲು ಸಿದ್ಧರಾಗಿದ್ದಾರೆ. ಕೇಪ್ ಟೌನ್ ಟೆಸ್ಟ್ ಕೊಹ್ಲಿಗೆ 99ನೇ ಟೆಸ್ಟ್ ಪಂದ್ಯ ಎಂಬುದು ವಿಶೇಷ. ಈ ಪಂದ್ಯದಲ್ಲಿ ವಿಶೇಷ ಮೈಲುಗಲ್ಲನ್ನು ಮುಟ್ಟುವ ವಿಶ್ವಾಸದಲ್ಲಿದ್ದಾರೆ ಕೊಹ್ಲಿ.

ಕೊಹ್ಲಿ ಟೆಸ್ಟ್​ ಕ್ರಿಕೆಟ್​ನಲ್ಲಿ ಇದುವರೆ 7,854 ಟೆಸ್ಟ್ ರನ್‌ಗಳನ್ನು ಕಲೆಹಾಕಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 32ನೇ ಸ್ಥಾನ ಅಲಂಕರಿಸಿದ್ದಾರೆ. ಇದಾಗ್ಯೂ 2019 ರಿಂದ, ವಿರಾಟ್ ಕೊಹ್ಲಿ ಯಾವುದೇ ಸ್ವರೂಪದಲ್ಲಿ ಶತಕ ಗಳಿಸಿಲ್ಲ ಎಂಬುದು ವಿಶೇಷ. ಆದರೆ ಈ ಬಾರಿ ಕೊಹ್ಲಿ ಬ್ಯಾಟ್​ನಿಂದ ಶತಕ ಮೂಡಿಬಂದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ವಿಶೇಷ ಮೈಲುಗಲ್ಲು ತಲುಪಲಿದ್ದಾರೆ.

ಕೇಪ್ ಟೌನ್ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ 146 ರನ್ ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದರೆ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 8,000 ರನ್ ಗಡಿ ದಾಟಿದ 31ನೇ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಆರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ , ರಾಹುಲ್ ದ್ರಾವಿಡ್, ಸುನಿಲ್ ಗವಾಸ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ವೀರೇಂದ್ರ ಸೆಹ್ವಾಗ್ ಈ ಸಾಧನೆ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಶತಕ ಸಿಡಿಸಿದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿರುವ ಅಲನ್ ಬಾರ್ಡರ್ ಮತ್ತು ಗ್ರೇಮ್ ಸ್ಮಿತ್ ಅವರನ್ನು ಹಿಂದಿಕ್ಕಲಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ 51 ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟಿನಲ್ಲಿ ಕೇಪ್​ ಟೌನ್ ಟೆಸ್ಟ್ ಮೂಲಕ ವಿರಾಟ್ ಕೊಹ್ಲಿ ಭರ್ಜರಿ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದು, ಒಂದು ಭರ್ಜರಿ ಇನಿಂಗ್ಸ್​ ಮೂಲಕ ಎರಡು ಮೈಲುಗಲ್ಲನ್ನು ತಲುಪಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(india vs south africa: virat kohli eyes breaching the 8000 run mark in cape town test)