AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಟಾಸ್ ಗೆದ್ದ ಲಂಕಾ ಪರ ಮೊಹಮ್ಮದ್ ಶಿರಾಜ್​ ಪದಾರ್ಪಣೆ; ಭಾರತ ತಂಡದಲ್ಲಿ ಹಲವು ಬದಲಾವಣೆ

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಮೊದಲ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ಸಜ್ಜಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

IND vs SL: ಟಾಸ್ ಗೆದ್ದ ಲಂಕಾ ಪರ ಮೊಹಮ್ಮದ್ ಶಿರಾಜ್​ ಪದಾರ್ಪಣೆ; ಭಾರತ ತಂಡದಲ್ಲಿ ಹಲವು ಬದಲಾವಣೆ
ಭಾರತ- ಶ್ರೀಲಂಕಾ
ಪೃಥ್ವಿಶಂಕರ
|

Updated on:Aug 02, 2024 | 2:31 PM

Share

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಮೊದಲ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ಸಜ್ಜಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಅದರಂತೆ ಶ್ರೀಲಂಕಾ ಪರ ಮೊಹಮ್ಮದ್ ಶಿರಾಜ್ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರೆ. ಇತ್ತ ಟೀಂ ಇಂಡಿಯಾದಲ್ಲಿ ರಿಷಬ್ ಪಂತ್ ಬದಲಿಗೆ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಆಯ್ಕೆ ಮಾಡಲಾಗಿದೆ. ಜೊತೆಗೆ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು, ಶಿವಂ ದುಬೆ ಕೂಡ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದಿದ್ದಾರೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಅವಿಷ್ಕಾ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದಿರ ಸಮರವಿಕ್ರಮ, ಚರಿತ್ ಅಸಲಂಕಾ (ನಾಯಕ), ಜನಿತ್ ಲಿಯಾನಗೆ, ವನಿಂದು ಹಸರಂಗಾ, ದುನಿತ್ ವೆಲಾಲಗೆ, ಅಕಿಲಾ ಧನಂಜಯ್, ಅಸಿತ ಫೆರ್ನಾಂಡೋ, ಮೊಹಮ್ಮದ್ ಶಿರಾಜ್.

ಚಾಂಪಿಯನ್ಸ್ ಟ್ರೋಫಿಗೆ ಸಿದ್ಧತೆ ಆರಂಭ

ಈ ಸರಣಿಯೊಂದಿಗೆ ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿಗೆ ಸಿದ್ಧತೆ ಆರಂಭಿಸಲಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ 9 ಪಂದ್ಯಗಳನ್ನು ಆಡಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಪ್ರತಿಯೊಂದು ಪಂದ್ಯವೂ ಮಹತ್ವದ್ದಾಗಿದೆ. ಈ ಕಾರಣಕ್ಕೆ ಈ ಸರಣಿಗೂ ಮುನ್ನ ವಿರಾಮಕ್ಕೆ ತೆರಳಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರನ್ನೂ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಟೀಂ ಇಂಡಿಯಾದ ಪ್ರಾಬಲ್ಯ

ಭಾರತ ಮತ್ತು ಶ್ರೀಲಂಕಾ ನಡುವೆ ಇದುವರೆಗೆ 168 ಏಕದಿನ ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಟೀಂ ಇಂಡಿಯಾ 99 ಪಂದ್ಯಗಳಲ್ಲಿ ಶ್ರೀಲಂಕಾವನ್ನು ಸೋಲಿಸಿದರೆ, ಶ್ರೀಲಂಕಾ ತಂಡವು ಕೇವಲ 57 ಪಂದ್ಯಗಳನ್ನು ಗೆಲ್ಲಲು ಶಕ್ತವಾಗಿದೆ. ಉಳಿದಂತೆ 1 ಪಂದ್ಯ ಡ್ರಾದಲ್ಲಿ ಕೊನೆಗೊಂಡಿದ್ದರೆ,  11 ಪಂದ್ಯಗಳೂ ರದ್ದಾಗಿವೆ. ಮತ್ತೊಂದೆಡೆ, ಟೀಂ ಇಂಡಿಯಾ ಶ್ರೀಲಂಕಾದಲ್ಲಿ ಇದುವರೆಗೆ 66 ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 32 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, 28 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಇದಲ್ಲದೇ 6 ಪಂದ್ಯಗಳು ರದ್ದಾಗಿವೆ.

ಗೆಲುವಿನ ಶತಕ

ಶ್ರೀಲಂಕಾ ವಿರುದ್ಧ 100 ಏಕದಿನ ಪಂದ್ಯಗಳನ್ನು ಗೆಲ್ಲಲು ಟೀಂ ಇಂಡಿಯಾಕ್ಕೆ ಈಗ ಕೇವಲ 1 ಗೆಲುವಿನ ಅಗತ್ಯವಿದೆ. ಭಾರತ ತಂಡ ಇದುವರೆಗೆ 100 ಏಕದಿನ ಪಂದ್ಯಗಳಲ್ಲಿ ಯಾವುದೇ ತಂಡವನ್ನು ಸೋಲಿಸಿಲ್ಲ. ಆದ್ದರಿಂದ ಇಂದಿನ ಪಂದ್ಯವನ್ನು ಭಾರತ ಗೆದ್ದರೆ ಇದು ಐತಿಹಾಸಿಕ ಸಾಧನೆಯಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:11 pm, Fri, 2 August 24