IND vs SL, 1st T20I, LIVE Streaming: ವರ್ಷದ ಮೊದಲ ಸರಣಿಗೆ ಹಾರ್ದಿಕ್ ಪಡೆ ಸಜ್ಜು; ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
IND vs SL, 1st T20I, LIVE Streaming: ಖಾಯಂ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವದ ಜವಬ್ದಾರಿ ಹಾರ್ದಿಕ್ ಪಾಂಡ್ಯ ಮೇಲೆ ಬಿದ್ದಿದೆ.
ಕೊನೆಯದಾಗಿ ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿಯನ್ನು ಗೆದ್ದು 2022ರ ವರ್ಷವನ್ನು ಗೆಲುವಿನೊಂದಿಗೆ ಕೊನೆಗೊಳಿಸಿದ್ದ ಟೀಂ ಇಂಡಿಯಾ ಇದೀಗ ಶ್ರೀಲಂಕಾ (India vs Sri lanka) ವಿರುದ್ಧದ ಟಿ20 ಸರಣಿಯೊಂದಿಗೆ ಹೊಸ ವರ್ಷವನ್ನು ಆರಂಭಿಸುತ್ತಿದೆ. ಈ ಉಭಯ ತಂಡಗಳ ನಡುವಣ ಮೊದಲ ಟಿ20 ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium in Mumbai) ಮಂಗಳವಾರ ನಡೆಯಲಿದೆ. ಲಂಕಾ ವಿರುದ್ಧದ ಟಿ20 ಸರಣಿಯಿಂದ ರೋಹಿತ್ ಶರ್ಮಾ (Rohit Sharma), ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ರಂತಹ ಅನುಭವಿಗಳಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಖಾಯಂ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವದ ಜವಬ್ದಾರಿ ಹಾರ್ದಿಕ್ ಪಾಂಡ್ಯ (Hardik Pandya) ಮೇಲೆ ಬಿದ್ದಿದೆ. ಈ ಹಿಂದೆ ಪಾಂಡ್ಯ ನಾಯಕತ್ವದಲ್ಲಿ ಭಾರತ, ನ್ಯೂಜಿಲೆಂಡ್ ವಿರುದ್ಧ ತನ್ನ ಕೊನೆಯ ಟಿ20 ಸರಣಿಯನ್ನು ಗೆದ್ದುಕೊಂಡಿತ್ತು. ಪ್ರಸ್ತುತ ಅದ್ಭುತ ಫಾರ್ಮ್‌ನಲ್ಲಿರುವ ಏಷ್ಯನ್ ಚಾಂಪಿಯನ್‌ಗಳನ್ನು ಯುವ ಟೀಂ ಇಂಡಿಯಾ ಎದುರಿಸಲು ಸಜ್ಜಾಗುತ್ತಿದೆ
ಲಂಕಾ ಪ್ರೀಮಿಯರ್ ಲೀಗ್ ಆಡಿದ ಬಳಿಕ ಶ್ರೀಲಂಕಾ ತಂಡ ಭಾರತಕ್ಕೆ ಕಾಲಿಟ್ಟಿದೆ. ಹೀಗಾಗಿ ಲಂಕಾ ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಇತ್ತ ಟೀಂ ಇಂಡಿಯಾ ತನ್ನ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಮೂಲಕ ಯುವ ತಂಡವನ್ನು ಆಯ್ಕೆ ಮಾಡಿದೆ. ಹಾರ್ದಿಕ್ ಪಾಂಡ್ಯ ತಂಡದ ನಾಯಕನಾದರೆ, ಸೂರ್ಯಕುಮಾರ್ ಯಾದವ್ಗೆ ಉಪನಾಯಕತ್ವದ ಪಟ್ಟ ಕಟ್ಟಲಾಗಿದೆ.
#TeamIndia squad for three-match T20I series against Sri Lanka.#INDvSL @mastercardindia pic.twitter.com/iXNqsMkL0Q
— BCCI (@BCCI) December 27, 2022
Hardik Pandya: ನಾಯಕನಾದ ಬಳಿಕ ಹಾರ್ದಿಕ್ ಪಾಂಡ್ಯಗೆ ಟ್ವಿಟರ್ನಿಂದ ಸಿಕ್ತು ‘ಗೋಲ್ಡ್’ ಗಿಫ್ಟ್!
ಪಂದ್ಯದ ಬಗೆಗಿನ ಪೂರ್ಣ ಮಾಹಿತಿ ಇಲ್ಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಮಂಗಳವಾರ, ಜನವರಿ 3 ರಂದು ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಯಾವಾಗ ಆರಂಭವಾಗಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಟಾಸ್ 6.30ಕ್ಕೆ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯದ ನೇರ ಪ್ರಸಾರ ಯಾವ ಚಾನೆಲ್ನಲ್ಲಿ ಇರಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಇರಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:10 pm, Mon, 2 January 23