
ಒಂದು ತಿಂಗಳ ದೀರ್ಘ ವಿರಾಮದ ನಂತರ ಟೀಂ ಇಂಡಿಯಾ ಮತ್ತೆ ಅಖಾಡಕ್ಕಿಳಿಯುತ್ತಿದೆ. ಭಾರತ ಹಾಗೂ ಶ್ರೀಲಂಕಾ (India vs Sri Lanka ) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಳೆಯಿಂದ ಅಂದರೆ ಆಗಸ್ಟ್ 15 ರಿಂದ ಆರಂಭವಾಗುತ್ತಿದೆ. ಈ ಟೆಸ್ಟ್ ಪಂದ್ಯ ಟೀಂ ಇಂಡಿಯಾ ಪಾಲಿಗೆ ಐತಿಹಾಸಿಕ ಪಂದ್ಯವಾಗಿದೆ. ಏಕೆಂದರೆ ಟೀಂ ಇಂಡಿಯಾಕ್ಕೆ ಇದು 600ನೇ ಟೆಸ್ಟ್ ಪಂದ್ಯವಾಗಿದೆ. ಟೆಸ್ಟ್ ಇತಿಹಾಸದಲ್ಲಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡಿದ ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ಕೂಡ ಸ್ಥಾನ ಪಡೆದಿದೆ. ಅಲ್ಲದೆ 600 ಟೆಸ್ಟ್ ಪಂದ್ಯಗಳನ್ನಾಡಿದ ಮೂರನೇ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಲಿದೆ. ಹೀಗಾಗಿ ಈ ಐತಿಹಾಸಿಕ ಪಂದ್ಯವನ್ನು ಗೆದ್ದು ಸ್ಮರಣೀಯವಾಗಿಸಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಆದರೆ ಅದಕ್ಕೂ ಮುನ್ನ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭವಾಗಲಿದೆ ಮತ್ತು ಯಾವ ಚಾನೆಲ್ನಲ್ಲಿ ವೀಕ್ಷಿಸಬಹುದು ಎಂಬುದರ ಪೂರ್ಣ ವಿವರವನ್ನು ನೋಡೋಣ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರ ಶನಿವಾರ ಆರಂಭವಾಗಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವು ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಬೆಳಿಗ್ಗೆ 9:30 ಕ್ಕೆ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ನೀವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ನೀವು ಸೋನಿ ಲಿವ್ ಅಪ್ಲಿಕೇಶನ್ ಬಳಸಿ ನಿಮ್ಮ ಮೊಬೈಲ್‌ನಲ್ಲಿ ವೀಕ್ಷಿಸಬಹುದು.
IND vs SL: ಶೇ. 82 ರಷ್ಟು ಮಳೆ..! ಗಾಲೆ ಟೆಸ್ಟ್ ಮೊದಲ ದಿನದಾಟ ನಡೆಯುವುದು ಅನುಮಾನ
ಟೆಸ್ಟ್ ಸರಣಿಗೆ ಭಾರತ ತಂಡ: ಶುಭ್ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ ಪಡಿಕ್ಕಲ್, ಸರನ್ಶ್ ಜೈನ್, ಔಕಿಬ್ ನಬಿ, ಸರ್ಫರಾಜ್ ಖಾನ್.
ಗಾಲೆ ಟೆಸ್ಟ್ ಪಂದ್ಯಕ್ಕೆ ತಂಡ: ಧನಂಜಯ ಡಿ ಸಿಲ್ವ(ನಾಯಕ), ಲಹಿರು ಉದಾನ, ನಿಶಾನ್ ಮದುಷ್ಕ, ಕಮಿಂದು ಮೆಂಡಿಸ್, ದಿನೇಶ್ ಚಾಂಡಿಮಲ್, ಪಸಿಂದು ಸೂರಿಯಬಂಡಾರ, ಸೋನಾಲ್ ದಿನುಶಾ, ನಿರೋಶನ್ ಡಿಕ್ವೆಲ್ಲಾ, ರಮೇಶ್ ಮೆಂಡಿಸ್, ಪ್ರಭಾತ್ ಜಯಸೂರ್ಯ, ಕೇಶರ ನುವಂತ, ಮಿಲನ್ ರತ್ನಾಯಕೆ, ಅಸಿತ ಫೆರ್ನಾಂಡೋ, ಲಹಿರು ಕುಮಾರ, ವಿಶ್ವ ಫೆರ್ನಾಂಡೋ, ದಿಲ್ಶನ್ ಮಧುಶಂಕ.
Published On - 9:48 pm, Fri, 14 August 26