India vs Sri lanka: ದೀಪಕ್​ ಚಹರ್​ ಆಟಕ್ಕೆ ಮಂಡಿಯೂರಿದ ಶ್ರೀಲಂಕಾ; ಟೀಂ ಇಂಡಿಯಾಗೆ ಸರಣಿ

276 ರನ್​ಗಳ ಗುರಿಯನ್ನು ಬೆನ್ನತ್ತಿದ ಭಾರತ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ತಂಡದ ಮೊತ್ತ 28 ಆಗಿದ್ದ ವೇಳೆ ಆರಂಭಿಕ ಆಟಗಾರ ಪೃಥ್ವಿ ಶಾ (13) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ರಜಿತಾ ಎಸೆತದಲ್ಲಿ ಇಶಾನ್ ಕಿಶನ್ (1) ಕ್ಲೀನ್ ಬೌಲ್ಡ್ ಆಗುವ ಮೂಲಕ ನಿರಾಸೆ ಮೂಡಿಸಿದರು.

India vs Sri lanka: ದೀಪಕ್​ ಚಹರ್​ ಆಟಕ್ಕೆ ಮಂಡಿಯೂರಿದ ಶ್ರೀಲಂಕಾ; ಟೀಂ ಇಂಡಿಯಾಗೆ ಸರಣಿ
ದೀಪಕ್​ ಚಹಾರ್​ ಆಟಕ್ಕೆ ಮಂಡಿಯೂರಿದ ಶ್ರೀಲಂಕಾ; ಟೀಂ ಇಂಡಿಯಾಗೆ ಸರಣಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 20, 2021 | 11:26 PM

ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ತಂಡವು ರೋಚಕ ಜಯ ಸಾಧಿಸಿದೆ. ಶ್ರೀಲಂಕಾ ನೀಡಿದ 276 ರನ್​ಗಳ ಗುರಿಯನ್ನು ಬೆನ್ನತ್ತಿದ ಭಾರತ ಮೂರು ವಿಕೆಟ್​ ಇರುವಾಗಲೇ ಗೆದ್ದಿದೆ. ಈ ಮೂಲಕ ಎರಡು ಪಂದ್ಯಗಳನ್ನು ಗೆದ್ದು ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ. 

ಇದಕ್ಕೂ ಮುನ್ನ ಟಾಸ್ ಗೆದ್ದ ಶ್ರೀಲಂಕಾ ನಾಯಕ ದಸುನ್ ಶನಕಾ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಅವಿಷ್ಕ ಫರ್ನಾಂಡೊ ಹಾಗೂ ಮಿನೋದ್ ಭಾನುಕಾ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್​ಗೆ 77 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು. ಆದರೆ 37 ರನ್​ ಬಾರಿಸಿ ಅರ್ಧಶತಕದತ್ತ ದಾಪುಗಾಲಿಡುತ್ತಿದ್ದ ಮಿನೋದ್​​ಗೆ ಪೆವಿಲಿಯನ್ ಹಾದಿ ತೋರಿಸಿದ ಚಹಲ್ ಭಾರತಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

ಮರು ಎಸೆತದಲ್ಲೇ ಭಾನುಕಾ ರಾಜಪಕ್ಸೆಯನ್ನು ಶೂನ್ಯಕ್ಕೆ ಔಟ್ ಮಾಡಿದ ಚಹಲ್ ಶ್ರೀಲಂಕಾಗೆ ಆಘಾತ ನೀಡಿದರು. ಈ ವೇಳೆ ಧನಂಜಯ ಡಿಸಿಲ್ವಾ ಜೊತೆಗೂಡಿದ ಅವಿಷ್ಕಾ ಫರ್ನಾಂಡೊ ಉತ್ತಮ ಬ್ಯಾಟಿಂಗ್ ನಡೆಸಿದರು. 71 ಎಸೆತಗಳನ್ನು ಎದುರಿಸಿದ ಅವಿಷ್ಕಾ 4 ಬೌಂಡರಿ ಹಾಗೂ 1 ಸಿಕ್ಸರ್​ನೊಂದಿಗೆ 50 ರನ್ ಬಾರಿಸಿದರು. ಅರ್ಧಶತಕದ ಬೆನ್ನಲ್ಲೇ ಭುವನೇಶ್ವರ್ ಕುಮಾರ್ ಓವರ್​ನಲ್ಲಿ ಕೃನಾಲ್ ಪಾಂಡ್ಯಗೆ ಕ್ಯಾಚ್ ನೀಡಿ ಅವಿಷ್ಕಾ ನಿರ್ಗಮಿಸಿದರು.

ಇನ್ನು ತಂಡದ ಮೊತ್ತ 134 ಆಗಿದ್ದ ವೇಳೆ ಮತ್ತೊಮ್ಮೆ ದಾಳಿಗಿಳಿದ ದೀಪಕ್ ಚಹರ್ ಧನಂಜಯ್ ಡಿಸಿಲ್ವಾ (32) ವಿಕೆಟ್ ಪಡೆದು ಭಾರತಕ್ಕೆ 4ನೇ ಯಶಸ್ಸು ತಂದುಕೊಟ್ಟರು. ಇನ್ನು ಲಂಕಾ ನಾಯಕ ದಸುನ್ ಶಕನಾ (16) ರನ್ನು ಕ್ಲೀನ್ ಬೌಲ್ಡ್ ಮಾಡಿದ ಚಹಲ್ ಮತ್ತೊಮ್ಮೆ ಸ್ಪಿನ್ ಮೋಡಿ ತೋರಿಸಿದರು. ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ಚರಿತ್ ಅಸಲಂಕಾ ಟೀಮ್ ಇಂಡಿಯಾ ಬೌಲರುಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದರು. ಅದರಂತೆ 68 ಎಸೆತಗಳನ್ನು ಎದುರಿಸಿದ ಚರಿತ್ 6 ಬೌಂಡರಿಗಳೊಂದಿಗೆ 65 ರನ್ ಬಾರಿಸಿದರು. ಅಲ್ಲದೆ ತಂಡದ ಮೊತ್ತವನ್ನು 250ರ ಗಡಿದಾಟಿಸಿ ಭುವನೇಶ್ವರ್ ಕುಮಾರ್​ಗೆ ವಿಕೆಟ್ ಒಪ್ಪಿಸಿದರು. ಅಂತಿಮ ಓವರ್​ಗಳ ವೇಳೆ ಬಿರುಸಿನ ಬ್ಯಾಟಿಂಗ್ ನಡೆಸಿದ ಚಮಿಕ ಕರುಣರತ್ನೆ 33 ಎಸೆತಗಳಲ್ಲಿ 44 ರನ್ ಬಾರಿಸುವ ಮೂಲಕ 50 ಓವರ್​ಗಳಲ್ಲಿ ಶ್ರೀಲಂಕಾ ಮೊತ್ತವನ್ನು 9 ವಿಕೆಟ್ ನಷ್ಟಕ್ಕೆ 275ಕ್ಕೆ ತಂದು ನಿಲ್ಲಿಸಿದರು. ಟೀಮ್ ಇಂಡಿಯಾ ಪರ ಯುಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್ ತಲಾ 3 ವಿಕೆಟ್ ಪಡೆದು ಮಿಂಚಿದರೆ, ದೀಪಕ್ ಚಹರ್ 2 ವಿಕೆಟ್ ಕಬಳಿಸಿ ಗಮನ ಸೆಳೆದರು.

276 ರನ್​ಗಳ ಗುರಿಯನ್ನು ಬೆನ್ನತ್ತಿದ ಭಾರತ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ತಂಡದ ಮೊತ್ತ 28 ಆಗಿದ್ದ ವೇಳೆ ಆರಂಭಿಕ ಆಟಗಾರ ಪೃಥ್ವಿ ಶಾ (13) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ರಜಿತಾ ಎಸೆತದಲ್ಲಿ ಇಶಾನ್ ಕಿಶನ್ (1) ಕ್ಲೀನ್ ಬೌಲ್ಡ್ ಆಗುವ ಮೂಲಕ ನಿರಾಸೆ ಮೂಡಿಸಿದರು. ಈ ವೇಳೆ ಜೊತೆಗೂಡಿದ ಶಿಖರ್ ಧವನ್-ಮನೀಶ್ ಪಾಂಡೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ತಂಡದ ಮೊತ್ತ 65 ಆಗಿದ್ದ ವೇಳೆ ಹಸರಂಗ ಎಸೆತವನ್ನು ಗುರುತಿಸಲು ವಿಫಲರಾದ ಶಿಖರ್ ಧವನ್ (29) ಎಲ್​ಬಿಡಬ್ಲ್ಯೂ ಆಗಿ ಹೊರ ನಡೆದರು.

4ನೇ ವಿಕೆಟ್​ಗೆ ಮನೀಶ್ ಪಾಂಡೆ ಜೊತೆಯಾದ ಸೂರ್ಯಕುಮಾರ್ ಯಾದವ್ ಉತ್ತಮವಾಗಿ ಬ್ಯಾಟ್ ಬೀಸಿದರು. ಈ ಹಂತದಲ್ಲಿ 31 ಎಸೆತಗಳಲ್ಲಿ 37 ರನ್​ ಬಾರಿಸಿ ಭರವಸೆ ಮೂಡಿಸಿದ್ದ ಮನೀಶ್ ಪಾಂಡೆ ರನೌಟ್ ಆಗುವ ಮೂಲಕ ಪೆವಿಲಿಯನ್ ಕಡೆ ಮುಖ ಮಾಡಿದರು. ಇನ್ನು ಬಂದ ವೇಗದಲ್ಲೇ ಶೂನ್ಯದೊಂದಿಗೆ ಹಾರ್ದಿಕ್ ಪಾಂಡ್ಯ ಹಿಂತಿರುಗಿದರು. ಇದಾಗ್ಯೂ ಸೂರ್ಯಕುಮಾರ್ ಯಾದವ್ ಹೋರಾಟ ಮುಂದುವರೆದಿತ್ತು. ಅದರಂತೆ 42 ಎಸೆತಗಳಲ್ಲಿ ಚೊಚ್ಚಲ ಅರ್ಧಶತಕ ಪೂರೈಸಿ ಬ್ಯಾಟ್ ಮೇಲೆತ್ತಿದರು. ಹಾಫ್ ಸೆಂಚುರಿ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್​ (53) ಸಂದಕನ್ ಎಸೆತದಲ್ಲಿ ಎಲ್​ಬಿಗೆ ಬಲಿಯಾದರು.

35 ರನ್​ಗಳನ್ನು ಬಾರಿಸಿದ ಕೃನಾಲ್ ಪಾಂಡ್ಯ ಕೆಲ ಹೊತ್ತು ಪ್ರತಿರೋಧ ತೋರಿದರಾದರೂ ತಂಡದ ಮೊತ್ತ 193 ಆಗಿದ್ದ ವೇಳೆ ಹಸರಂಗ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಕೊನೆಯ 9 ಓವರ್​ನಲ್ಲಿ ಭಾರತಕ್ಕೆ ಗೆಲ್ಲಲು 60 ರನ್​ಗಳ ಅವಶ್ಯಕತೆಯಿತ್ತು. 8ನೇ ವಿಕೆಟ್​ಗೆ ಜೊತೆಯಾದ ದೀಪಕ್ ಚಹರ್ ಹಾಗೂ ಭುವನೇಶ್ವರ್ ಕುಮಾರ್ ಗೆಲುವಿಗಾಗಿ ನಡೆಸಿದ ಹೋರಾಟ ಯಶಸ್ವಿಯಾಗಿದೆ. ದೀಪಕ್​ ಚಹಾರ್​ 69 ರನ್​ ಬಾರಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ  ಪಾತ್ರವಹಿಸಿದರು.

ಉಭಯ ತಂಡಗಳು ಹೀಗಿವೆ:- ಭಾರತ: ಶ್ರೀಲಂಕಾ (ಪ್ಲೇಯಿಂಗ್ ಇಲೆವೆನ್): ಅವಿಷ್ಕಾ ಫರ್ನಾಂಡೊ, ಮಿನೋದ್ ಭನುಕಾ (ವಿಕೆಟ್ ಕೀಪರ್), ಭನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶನಕಾ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣರತ್ನೆ, ಕಸುನ್ ರಾಜಿತಾ, ದುಶಮಂತ್ ಚಮೀರಾ, ಲಕ್ಷನ್ ಸನ್ದಕನ್

ಶ್ರೀಲಂಕಾ ಭಾರತ (ಪ್ಲೇಯಿಂಗ್ ಇಲೆವೆನ್): ಪೃಥ್ವಿ ಶಾ, ಶಿಖರ್ ಧವನ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್

Published On - 11:25 pm, Tue, 20 July 21

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು