IND vs SL, 2nd ODI, Live Streaming: ಭಾರತ ಗೆದ್ದರೆ ಸರಣಿ ಕೈವಶ; 2ನೇ ಪಂದ್ಯ ಎಷ್ಟು ಗಂಟೆಗೆ ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
IND vs SL, 2nd ODI, Live Streaming: ಇನ್ನು ಈ ಉಭಯ ದೇಶಗಳ ಮುಖಾಮುಖಿ ವರದಿ ನೋಡುವುದಾದರೆ, ಇಲ್ಲಿಯವರೆಗೆ ಭಾರತ ಮತ್ತು ಶ್ರೀಲಂಕಾ 163 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಅದರಲ್ಲಿ ಭಾರತ 94 ಪಂದ್ಯಗಳಲ್ಲಿ ಗೆದ್ದಿದ್ದರೆ, ಶ್ರೀಲಂಕಾ 57 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಸದ್ಯ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಈ ಮೊದಲು ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದಲ್ಲಿ ಲಂಕಾ ವಿರುದ್ಧದ (India vs Sri Lanka) ಟಿ20 ಸರಣಿ ಗೆದ್ದು ಬೀಗಿತ್ತು. ಇದಾದ ಬಳಿಕ ಏಕದಿನ ಸರಣಿಯ ಮೊದಲ ಪಂದ್ಯವನ್ನು ಗೆದ್ದು ಶುಭಾರಂಭ ಮಾಡಿದೆ. ನಾಯಕ ರೋಹಿತ್ ಶರ್ಮಾ (Rohit Sharma) ಅವರ 83 ರನ್‌ಗಳ ಅದ್ಭುತ ಇನ್ನಿಂಗ್ಸ್ ಹಾಗೂ ವಿರಾಟ್ ಕೊಹ್ಲಿಯ (Virat Kohli) 113 ರನ್‌ಗಳ ಮಿಂಚಿನ ಇನ್ನಿಂಗ್ಸ್ ನೆರವಿನಿಂದಾಗಿ ಟೀಂ ಇಂಡಿಯಾ (Team India), 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು 67 ರನ್‌ಗಳಿಂದ ಗೆದ್ದುಕೊಂಡಿತ್ತು. ಇದೀಗ ಈ ಉಭಯ ದೇಶಗಳ ನಡುವಿನ ಎರಡನೇ ಏಕದಿನ ಪಂದ್ಯ ಗುರುವಾರ ಕೋಲ್ಕತ್ತಾದಲ್ಲಿ ನಡೆಯಲಿದೆ.
ಇನ್ನು ಈ ಉಭಯ ದೇಶಗಳ ಮುಖಾಮುಖಿ ವರದಿ ನೋಡುವುದಾದರೆ, ಇಲ್ಲಿಯವರೆಗೆ ಭಾರತ ಮತ್ತು ಶ್ರೀಲಂಕಾ 163 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಅದರಲ್ಲಿ ಭಾರತ 94 ಪಂದ್ಯಗಳಲ್ಲಿ ಗೆದ್ದಿದ್ದರೆ, ಶ್ರೀಲಂಕಾ 57 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಡ್ರಾದಲ್ಲಿ ಕೊನೆಗೊಂಡಿದ್ದರೆ, 11 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ. ಇದಲ್ಲದೇ ತವರು ನೆಲದಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 37 ಬಾರಿ ಗೆದ್ದಿದ್ದರೆ, ಮತ್ತೊಂದೆಡೆ, ಶ್ರೀಲಂಕಾದಲ್ಲಿ ಭಾರತ 30 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
IND v SL: ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾದಿಂದ ಹೊರಬಿದ್ದ ಜಸ್ಪ್ರೀತ್ ಬುಮ್ರಾ..!
ಎರಡನೇ ಏಕದಿನ ಪಂದ್ಯದ ಪೂರ್ಣ ಮಾಹಿತಿ ಇಲ್ಲಿದೆ
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯ ಗುರುವಾರ (ಜನವರಿ 12) ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯ ಎಲ್ಲಿ ನಡೆಯುತ್ತದೆ?
ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಏಕದಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ 2 ನೇ ಏಕದಿನ ಪಂದ್ಯ ಯಾವಾಗ ಆರಂಭವಾಗುತ್ತದೆ?
ಭಾರತ ಮತ್ತು ಶ್ರೀಲಂಕಾ ನಡುವಿನ 2 ನೇ ಏಕದಿನ ಪಂದ್ಯ ಮಧ್ಯಾಹ್ನ 1.30 ಕ್ಕೆ ಪ್ರಾರಂಭವಾಗಲಿದೆ. ಪಂದ್ಯಕ್ಕೂ ಮುನ್ನ 1 ಗಂಟೆಗೆ ಟಾಸ್ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ 2 ನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ಭಾರತ ಮತ್ತು ಶ್ರೀಲಂಕಾ ನಡುವಿನ 2 ನೇ ಏಕದಿನ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲಭ್ಯವಿರುತ್ತದೆ. ಇನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದಾಗಿದೆ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಲೋಕೇಶ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್ , ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಅರ್ಶ್ದೀಪ್ ಸಿಂಗ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:05 pm, Wed, 11 January 23