IND vs SL: ದುಬೆ ಬದಲಿಗೆ ಪರಾಗ್‌ಗೆ ಅವಕಾಶ; ಎರಡನೇ ಏಕದಿನ ಪಂದ್ಯಕ್ಕೆ ತಂಡ ಬದಲಿಸ್ತಾರಾ ರೋಹಿತ್?
IND vs SL: ಆದರೆ ಕೊಲಂಬೊ ಪಿಚ್ ವೇಗದ ಬೌಲರ್ಗಳಿಗಿಂತ ಸ್ಪಿನ್ ಬೌಲರ್ಗಳಿಗೆ ಹೆಚ್ಚು ನೆರವಾಗುವುದರಿಂದ ಶಿವಂ ದುಬೆ ಬದಲಿಗೆ ಬಲಗೈ ಆಲ್‌ರೌಂಡರ್ ರಿಯಾನ್ ಪರಾಗ್‌ಗೆ ಅವಕಾಶ ನೀಡಬಹುದು. ರಿಯಾನ್ ಪರಾಗ್ ಟಿ20 ಸರಣಿಯಲ್ಲಿ ಬ್ಯಾಟಿಂಗ್ ಜೊತೆಗೆ ಬೌಲಿಂಗ್‌ನಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದರು.
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಟೈ ಆಗಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿತ್ತು. ಭಾರತ ತಂಡಕ್ಕೆ 50 ಓವರ್‌ಗಳಲ್ಲಿ 231 ರನ್‌ಗಳ ಗುರಿ ತಲುಪಲು ಸಾಧ್ಯವಾಗಲಿಲ್ಲ. ಅದಕ್ಕಿಂತ ಮಿಗಿಲಾಗಿ 14 ಎಸೆತಗಳಲ್ಲಿ ಟೀಂ ಇಂಡಿಯಾ ಗೆಲ್ಲಲು ಕೇವಲ ಒಂದು ರನ್ ಗಳಿಸಬೇಕಿತ್ತು, ಆದರೆ ಇದು ಕೂಡ ಸಾಧ್ಯವಾಗಲಿಲ್ಲ. ಈ ಆಘಾತದ ನಡುವೆ ಇದೀಗ ಈ ಸರಣಿಯ ಎರಡನೇ ಪಂದ್ಯ ಭಾನುವಾರ ಕೊಲಂಬೊದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಕಳಪೆ ಬ್ಯಾಟಿಂಗ್ ನಂತರ ಎರಡನೇ ಏಕದಿನ ಪಂದ್ಯದಲ್ಲಿ ಆಡುವ ಹನ್ನೊಂದರಲ್ಲಿ ಕೆಲವು ಬದಲಾವಣೆಗಳಾಗಬಹುದನ್ನು ಕಾಣಬಹುದಾಗಿದೆ.
ಭಾರತದ ಬ್ಯಾಟಿಂಗ್ ಬಗ್ಗೆ ಮಾತನಾಡುವುದಾದರೆ, ನಾಯಕ ರೋಹಿತ್ ಶರ್ಮಾ ಹೊರತುಪಡಿಸಿ, ಯಾವುದೇ ಬ್ಯಾಟ್ಸ್‌ಮನ್ ಉತ್ತಮ ಆರಂಭದ ಲಾಭವನ್ನು ಪಡೆಯಲು ಸಾಧ್ಯವಾಗಲಿಲ್ಲ. ರೋಹಿತ್ 58 ರನ್ ಬಾರಿಸಿದ್ದನ್ನು ಬಿಟ್ಟರೆ, ಅಕ್ಷರ್ ಪಟೇಲ್ 33, ಕೆಎಲ್ ರಾಹುಲ್ 31, ಶಿವಂ ದುಬೆ 25 ಮತ್ತು ಶ್ರೇಯಸ್ ಅಯ್ಯರ್ 23 ರನ್, ವಿರಾಟ್ ಕೊಹ್ಲಿ 24 ರನ್ ಮತ್ತು ಶುಭ್ಮನ್ ಗಿಲ್ 16 ರನ್ ಬಾರಿಸಿದರಾದರೂ, ಈ ಆರಂಭವನ್ನು ಬಿಗ್ ಇನ್ನಿಂಗ್ಸ್ ಆಗಿ ಬದಲಿಸುವಲ್ಲಿ ವಿಫಲರಾದರು. ಅದಾಗ್ಯೂ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ.
ದುಬೆ ಬದಲಿಗೆ ಪರಾಗ್‌ಗೆ ಅವಕಾಶ?
ಆದರೆ ಕೊಲಂಬೊ ಪಿಚ್ ವೇಗದ ಬೌಲರ್ಗಳಿಗಿಂತ ಸ್ಪಿನ್ ಬೌಲರ್ಗಳಿಗೆ ಹೆಚ್ಚು ನೆರವಾಗುವುದರಿಂದ ಶಿವಂ ದುಬೆ ಬದಲಿಗೆ ಬಲಗೈ ಆಲ್‌ರೌಂಡರ್ ರಿಯಾನ್ ಪರಾಗ್‌ಗೆ ಅವಕಾಶ ನೀಡಬಹುದು. ರಿಯಾನ್ ಪರಾಗ್ ಟಿ20 ಸರಣಿಯಲ್ಲಿ ಬ್ಯಾಟಿಂಗ್ ಜೊತೆಗೆ ಬೌಲಿಂಗ್‌ನಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದರು. ಅವರು ಇನ್ನೂ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿಲ್ಲ. ಹೀಗಾಗಿ ಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಪರಾಗ್‌ಗೆ ಪದಾರ್ಪಣೆ ಮಾಡುವ ಅವಕಾಶ ಸಿಕ್ಕರೆ ಅವರು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುವುದಲ್ಲದೆ ಸ್ಪಿನ್ ಬೌಲರ್ ಆಗಿ ತಂಡಕ್ಕೆ ನೆರವಾಗಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಬದಲಾವಣೆ
ಮೊದಲ ಪಂದ್ಯದಲ್ಲಿ ಭಾರತ ತಂಡ 7 ಬೌಲರ್ಗಳನ್ನು ಬಳಸಿತ್ತು. ಶುಭ್ಮನ್ ಗಿಲ್ ಹೊರತುಪಡಿಸಿ, ಎಲ್ಲರೂ 4 ಅಥವಾ ಅದಕ್ಕಿಂತ ಹೆಚ್ಚು ಓವರ್‌ಗಳನ್ನು ಬೌಲ್ ಮಾಡಿದ್ದರು. ಪ್ರತಿಯೊಬ್ಬ ಬೌಲರ್‌ಗೂ ಒಂದೊಂದು ವಿಕೆಟ್ ಸಿಕ್ಕಿತ್ತು. ಅರ್ಷದೀಪ್ ಸಿಂಗ್ ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದಿದ್ದರೆ, ಮೊಹಮ್ಮದ್ ಸಿರಾಜ್, ಶಿವಂ ದುಬೆ, ಕುಲ್ದೀಪ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ತಲಾ 1 ವಿಕೆಟ್ ಪಡೆದಿದ್ದರು. ಹೀಗಾಗಿ ಈ ಪ್ರದರ್ಶನವನ್ನು ಗಮನಿಸಿದ್ದರೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ.
ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶಿವಂ ದುಬೆ/ ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ