AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ವಿಶ್ವ ದಾಖಲೆಯ ಹೊಸ್ತಿಲಲ್ಲಿ ಟೀಮ್ ಇಂಡಿಯಾ: ಇಂದಿನ ಪಂದ್ಯ ಗೆದ್ದರೆ ಏನಾಗಲಿದೆ ಗೊತ್ತೇ?

ವಿಶ್ವ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿ ಟೀಮ್ ಇಂಡಿಯಾವಿದೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದು ತಂಡದ ವಿರುದ್ಧ ಅತಿ ಹೆಚ್ಚು ಜಯ ಸಾಧಿಸಿದ ಟೀಮ್​ಗಳ ಸಾಲಿನಲ್ಲಿ ಭಾರತ, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡ ಜಂಟಿ ಸ್ಥಾನದಲ್ಲಿದೆ.

IND vs SL: ವಿಶ್ವ ದಾಖಲೆಯ ಹೊಸ್ತಿಲಲ್ಲಿ ಟೀಮ್ ಇಂಡಿಯಾ: ಇಂದಿನ ಪಂದ್ಯ ಗೆದ್ದರೆ ಏನಾಗಲಿದೆ ಗೊತ್ತೇ?
Team India
TV9 Web
| Edited By: |

Updated on: Jul 20, 2021 | 7:51 AM

Share

ಕೊಲಂಬೊದ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಶ್ರೀಲಂಕಾ (India vs Sri lanka) ಪ್ರವಾಸವನ್ನು ಭರ್ಜರಿಯಾಗಿ ಆರಂಭಿಸಿತು. ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಲಂಕಾನ್ನರ ವಿರುದ್ಧ ಭಾರತದ 92ನೇ ಜಯವಾಗಿದೆ. ಅಲ್ಲದೆ 2007 ರಿಂದ ಸತತವಾಗಿ ಲಂಕಾ ವಿರುದ್ಧ ಸರಣಿ ಜಯ ಸಾಧಿಸುತ್ತಾ ಬಂದಿರುವ ಭಾರತ ಈ ಸರಣಿಯನ್ನೂ ವಶಪಡಿಸಿಕೊಂಡರೆ ಸತತವಾಗಿ ಶ್ರೀಲಂಕಾ ವಿರುದ್ಧ 9ನೇ ಸರಣಿ ಗೆದ್ದಂತಾಗುತ್ತದೆ. ಇದಲ್ಲದೆ ಮತ್ತೊಂದು ವಿಶ್ವ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿ ಟೀಮ್ ಇಂಡಿಯಾವಿದೆ (Team India).

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದು ತಂಡದ ವಿರುದ್ಧ ಅತಿ ಹೆಚ್ಚು ಜಯ ಸಾಧಿಸಿದ ಟೀಮ್​ಗಳ ಸಾಲಿನಲ್ಲಿ ಭಾರತ, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡ ಜಂಟಿ ಸ್ಥಾನದಲ್ಲಿದೆ. ಭಾರತ ಮತ್ತು ಪಾಕಿಸ್ತಾನ ಲಂಕಾ ವಿರುದ್ಧ ಒಟ್ಟು 92 ಪಂದ್ಯಗಳನ್ನು ಗೆದ್ದಿದೆ. ಇತ್ತ ಆಸ್ಟ್ರೇಲಿಯಾ ಕೂಡ ನ್ಯೂಜಿಲೆಂಡ್ ವಿರುದ್ಧ 92 ಏಕದಿನ ಪಂದ್ಯಗಳನ್ನು ಗೆದ್ದ ಪಟ್ಟಿಯಲ್ಲಿದೆ.

ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಲಂಕಾ ವಿರುದ್ಧ 93 ಏಕದಿನ ಪಂದ್ಯ ಗೆದ್ದ ಸಾಧನೆ ಮಾಡಲಿದೆ. ಈ ಮೂಲಕ ಒಂದು ತಂಡದ ವಿರುದ್ಧ ಅತಿ ಹೆಚ್ಚು ಪಂದ್ಯವನ್ನು ಗೆದ್ದ ಟೀಮ್ ಭಾರತ ಆಗಲಿದ್ದು, ಇದು ವಿಶ್ವ ದಾಖಲೆಯಾಗಲಿದೆ. ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧವೂ ಭಾರತ 55 ಏಕದಿನ ಪಂದ್ಯ ಗೆದ್ದ ಸಾಧನೆ ಹೊಂದಿದೆ.

ಮೊದಲ ಪಂದ್ಯದಲ್ಲಿ 7 ವಿಕೆಟ್​ಗಳಿಂದ ಗೆದ್ದು ವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಇಂದಿನ ಪಂದ್ಯವನ್ನೂ ಜಯಿಸಿ ಸರಣಿ ವಶಪಡಿಸಿಕೊಳ್ಳುವ ಪ್ಲಾನ್​ನಲ್ಲಿದೆ. ಇತ್ತ ಸಿಂಹಳೀಯರಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆದ್ದರೆ ಮಾತ್ರ ಸರಣಿ ಆಸೆ ಜೀವಂತವಾಗಿರಲಿದೆ. ಹೀಗಾಗಿ ಪ್ರೇಮದಾಸ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯವಾಗುವ ಎಲ್ಲಾ ಲಕ್ಷಣಗಳಿವೆ.

ಈ ಪಂದ್ಯ ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಮಧ್ಯಾಹ್ನ 2.30 ಕ್ಕೆ ನಡೆಯಲಿದೆ. ಸೋನಿ ಸಿಕ್ಸ್, ಸೋನಿ ಸಿಕ್ಸ್ ಎಚ್ಡಿ, ಸೋನಿ ಟೆನ್ 3, ಸೋನಿ ಟೆನ್ 3 ಎಚ್ಡಿ ಯಲ್ಲಿ ಪಂದ್ಯವನ್ನು ಲೈವ್ ವೀಕ್ಷಿಸಬಹುದು.

ತಂಡಗಳು:

ಭಾರತ: ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್-ಕೀಪರ್), ಕೆ ಗೌತಮ್, ಕ್ರುನಾಲ್ ಪಾಂಡ್ಯ, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಹರ್, ಕುಲದೀಪ್ ಯಾದವ್, ನವದೀಪ್ ಸೈನಿ, ಚೇತನ್ ಸಕರಿಯಾ, ಯಜುವೇಂದ್ರ ಚಹಾಲ್.

ಶ್ರೀಲಂಕಾ: ದಾಸುನ್ ಶಾನಕಾ (ನಾಯಕ), ಧನಂಜಯ ಡಿ ಸಿಲ್ವಾ (ಉಪನಾಯಕ), ಅವಿಷ್ಕಾ ಫರ್ನಾಂಡೊ, ಭನುಕಾ ರಾಜಪಕ್ಸೆ, ಪಾತುಮ್ ನಿಸ್ಸಂಕ, ಚರಿತ್ ಅಸಲಂಕಾ, ವನಿಂದು ಹಸರಂಗ, ಆಶೆನ್ ಬಂಡರಾ, ಮಿನೋಡ್ ಭನುಕಾ, ಲಹಿರು ಉದಾರ, ಚಮೇಮರಾಮಾನಾ ಲಕ್ಷನ್ ಸಂದಕನ್, ಅಕಿಲಾ ಧನಂಜಯ, ಶಿರನ್ ಫರ್ನಾಂಡೊ, ಧನಂಜಯ ಲಕ್ಷನ್, ಇಶಾನ್ ಜಯರತ್ನ, ಪ್ರವೀಣ್ ಜಯವಿಕ್ರೆಮಾ, ಅಸಿಥಾ ಫರ್ನಾಂಡೊ, ಕಸುನ್ ರಾಜಿತಾ, ಲಹೀರು ಕುಮಾರ, ಇಸುರು ಉದಾನ.

IND vs SL: ಇಂದು ಎರಡನೇ ಏಕದಿನ: ಭಾರತ ಪರ ಪದಾರ್ಪಣೆ ಮಾಡಲಿದ್ದಾರೆ ಈ ಆಟಗಾರ?

IND vs SL: ಕೃನಾಲ್ ಪಾಂಡ್ಯ ವರ್ತನೆಯಲ್ಲಿ ಸಖತ್ ಬದಲಾವಣೆ! ಇದು ರಾಹುಲ್ ದ್ರಾವಿಡ್ ಎಫೆಕ್ಟ್ ಎಂದ ನೆಟ್ಟಿಗರು; ವಿಡಿಯೋ

(India vs Sri Lanka 2nd ODI Team India eye win to surpass Australia and Pakistan create world record)

Follow Us
TV9 Web
TV9 Web

TV9 Kannada

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್