ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಎರಡೂ ತಂಡಗಳು ಸರಣಿಯಲ್ಲಿ ಮುನ್ನಡೆ ಸಾಧಿಸುವ ಇರಾದೆಯಲ್ಲಿವೆ. ಇದಕ್ಕೂ ಮುನ್ನ ಉಭಯ ತಂಡಗಳ ನಡುವೆ ನಡೆದ ಮೊದಲ ಏಕದಿನ ಪಂದ್ಯ ಟೈ ಆಗಿತ್ತು. ಹೀಗಾಗಿ ಇಂದಿನ ಪಂದ್ಯವನ್ನು ಗೆದ್ದ ತಂಡ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲಿದೆ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಎಂದಿನಂತೆ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಶ್ರೀಲಂಕಾ ಈ ಪಂದ್ಯಕ್ಕೆ ಆಡುವ ಹನ್ನೊಂದರ ಬಳಗದಲ್ಲಿ ಎರಡು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ತಂಡದ ಸ್ಟಾರ್ ಲೆಗ್ ಸ್ಪಿನ್ನರ್ ವನಿಂದು ಹಸರಂಗ ಗಾಯದ ಸಮಸ್ಯೆಯಿಂದ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಜೆಫ್ರಿ ವೆಂಡರ್ಸೆ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಕಾಮಿಂದು ಮೆಂಡಿಸ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
🚨 Toss and Team Update 🚨
Sri Lanka elect to bat in the 2nd ODI.
A look at #TeamIndia‘s Playing XI 👌👌
Follow the Match ▶️ https://t.co/KTwPVvTBCB#SLvIND pic.twitter.com/nEQPhAqP3T
— BCCI (@BCCI) August 4, 2024
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕಾ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದಿರ ಸಮರವಿಕ್ರಮ, ಚರಿತ್ ಅಸಲಂಕಾ (ನಾಯಕ), ಕಾಮಿಂದು ಮೆಂಡಿಸ್, ಜನಿತ್ ಲಿಯಾನಗೆ, ದುನಿತ್ ವೆಲಾಲಗೆ, ಅಕಿಲಾ ಧನಂಜಯ್, ಅಸಿತ್ ಫೆರ್ನಾಂಡೋ, ಜೆಫ್ರಿ ವಾಂಡರ್ಸೆ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್.
ಏಕದಿನದಲ್ಲಿ ಕಳೆದ 3 ವರ್ಷಗಳಿಂದ ಭಾರತ ತಂಡ ಶ್ರೀಲಂಕಾ ವಿರುದ್ಧ ಸೋತಿಲ್ಲ. ಜುಲೈ 2021 ರಲ್ಲಿ ಶ್ರೀಲಂಕಾ ಕೊನೆಯ ಬಾರಿಗೆ ಭಾರತವನ್ನು ಏಕದಿನದಲ್ಲಿ ಸೋಲಿಸಿತ್ತು. ಆ ಪಂದ್ಯ ಕೂಡ ಕೊಲಂಬೊದಲ್ಲಿ ನಡೆದಿತ್ತು. ಇದೀಗ ಭಾರತ ತನ್ನ ಗೆಲುವಿನ ದಾಖಲೆಯನ್ನು ಮುಂದುವರೆಸಲು ಬಯಸಿದರೆ, ಇತ್ತ ಶ್ರೀಲಂಕಾ ಏಕದಿನದಲ್ಲಿ ತನ್ನ ಸೋಲಿನ ಸರಣಿಯನ್ನು ಮುರಿಯುವ ಇರಾದೆಯಲ್ಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:16 pm, Sun, 4 August 24