AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಶಾನ್ ಕಿಶನ್ ಸಿಡಿಲಬ್ಬರ: ಸ್ಪರ್ಧಾತ್ಮಕ ಮೊತ್ತ ಕಲೆಹಾಕಿದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಟಿ20 ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡದ ವಿರುದ್ಧ ಪಾಕಿಸ್ತಾನ್ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಫೈನಲ್​ಗೆ ಪ್ರವೇಶಿಸಿದೆ. ಇದೀಗ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಲಗ್ಗೆಯಿಡಲಿದೆ.

ಇಶಾನ್ ಕಿಶನ್ ಸಿಡಿಲಬ್ಬರ: ಸ್ಪರ್ಧಾತ್ಮಕ ಮೊತ್ತ ಕಲೆಹಾಕಿದ ಟೀಮ್ ಇಂಡಿಯಾ
Ishan Kishan Image Credit source: BCCI
ಝಾಹಿರ್ ಯೂಸುಫ್
|

Updated on: Oct 01, 2026 | 11:25 AM

Share

ಏಷ್ಯನ್ ಗೇಮ್ಸ್​ ಟಿ20 ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 169 ರನ್ ಕಲೆಹಾಕಿದೆ. ಜಪಾನ್​ನ ನಿಶ್ಶಿನ್​ನಲ್ಲಿರುವ ಕೊರೋಗಿ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಾಚ್ಚಿಗೆ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 7 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಸಂಜು ಸ್ಯಾಮ್ಸನ್ ಕೂಡ 7 ರನ್​ ಬಾರಿಸಿ ಇನಿಂಗ್ಸ್​ ಅಂತ್ಯಗೊಳಿಸಿದರು. ಆದರೆ ಮತ್ತೊಂದೆಡೆ ವೈಭವ್ ಸೂರ್ಯವಂಶಿ 21 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 8 ಫೋರ್​ಗಳೊಂದಿಗೆ 38 ರನ್​ಗಳ ಕೊಡುಗೆ ನೀಡಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಶ್ರೇಯಸ್ ಅಯ್ಯರ್ 13 ಎಸೆತಗಳಲ್ಲಿ 13 ರನ್​ಗಳಿಸಲಷ್ಟೇ ಶಕ್ತರಾದರು.

ಇದಾಗ್ಯೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬಳಿಕ ಕೂಡ ಅಬ್ಬರ ಮುಂದುವರೆಸಿದ ಇಶಾನ್ 46 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 80 ರನ್ ಬಾರಿಸಿದರು. ಇಶಾನ್ ಕಿಶನ್ ಅವರ ಈ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 169 ರನ್​ ಕಲೆಹಾಕಿದೆ. ಈ ಮೂಲಕ ಶ್ರೀಲಂಕಾ ತಂಡಕ್ಕೆ 170 ರನ್​ಗಳ ಗುರಿ ನೀಡಿದೆ.

ಶ್ರೀಲಂಕಾ (ಪ್ಲೇಯಿಂಗ್ XI): ಲಸಿತ್ ಕ್ರೂಸ್ಪುಲ್ಲೆ, ಸಿನೆತ್ ಜಯವರ್ದನ, ಸೋಹನ್ ಡಿ ಲಿವೇರಾ (ವಿಕೆಟ್ ಕೀಪರ್), ಅಶೇನ್ ಬಂಡಾರ, ಸಹನ್ ಅರಾಚ್ಚಿಗೆ (ನಾಯಕ), ನುವಾನಿಡು ಫೆರ್ನಾಂಡೊ, ಚಾಮಿಕಾ ಕರುಣಾರತ್ನೆ, ವನುಜಾ ಸಹನ್, ವಿಜಯಕಾಂತ್ ವ್ಯಾಸಕಾಂತ್, ತರಿಂದು ರತ್ನಾಯಕೆ, ಬಿನೂರ ಫೆರ್ನಾಂಡೊ.

ಇದನ್ನೂ ಓದಿ: ಒಂದಲ್ಲ, ಎರಡಲ್ಲ… ಬರೋಬ್ಬರಿ 7 ಭರ್ಜರಿ ದಾಖಲೆ ಬರೆದ ಶುಭ್​ಮನ್ ಗಿಲ್

ಭಾರತ (ಆಡುವ XI): ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್, ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಜಸ್​ಪ್ರೀತ್ ಬುಮ್ರಾ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More