India vs Sri Lanka 2nd T20 Playing 11: ಕನ್ನಡಿಗನಿಗೆ ಚೊಚ್ಚಲ ಅವಕಾಶ: ಭಾರತ ಪ್ಲೇಯಿಂಗ್ ಇಲೆವೆನ್ ಹೀಗಿದೆ
India vs Sri Lanka 2nd T20 Playing 11:
ಕೊರೋನಾಂತಕದ ನಡುವೆಯೂ ಭಾರತ-ಶ್ರೀಲಂಕಾ ನಡುವಣ 2ನೇ ಟಿ20 ಪಂದ್ಯ ಶುರುವಾಗಿದೆ. ಟಾಸ್ ಗೆದ್ದಿರುವ ಶ್ರೀಲಂಕಾ ನಾಯಕ ದಸುನ್ ಶನಕಾ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ತಂಡದಲ್ಲಿ 4 ಹೊಸಮುಖಗಳಿಗೆ ಅವಕಾಶ ನೀಡಲಾಗಿದ್ದು, ಅದರಂತೆ ಈ ಪಂದ್ಯದ ಮೂಲಕ ಕನ್ನಡಿಗ ದೇವದತ್ ಪಡಿಕ್ಕಲ್ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ್ದಾರೆ. ಹಾಗೆಯೇ ಅವರ ಜೊತೆ ಮತ್ತೋರ್ವ ಆರಂಭಿಕನಾಗಿ ರುತುರಾಜ್ ಗಾಯಕ್ವಾಡ್, ನಿತೀಶ್ ರಾಣಾ ಹಾಗೂ ಚೇತನ್ ಸಕರಿಯಾ ಕೂಡ ಚೊಚ್ಚಲ ಅವಕಾಶ ಪಡೆದಿದ್ದಾರೆ. ಮಂಗಳವಾರ ನಡೆಯಬೇಕಿದ್ದ ಈ ಪಂದ್ಯವು ಕೊರೋನಾಂತಕದ ಕಾರಣ ಇಂದಿಗೆ ಮುಂದೂಡಲಾಗಿತ್ತು. ಟೀಮ್ ಇಂಡಿಯಾ ಆಲ್ರೌಂಡರ್ ಕೃನಾಲ್ ಪಾಂಡ್ಯ ಅವರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರದ ಪಂದ್ಯವನ್ನು ರದ್ದುಪಡಿಸಲಾಗಿತ್ತು. ಅಷ್ಟೇ ಅಲ್ಲದೆ ಪಾಂಡ್ಯ ಜೊತೆ ನೇರ ಸಂಪರ್ಕ ಹೊಂದಿದ್ದ ಆಟಗಾರರನ್ನು ಐಸೋಲೇಷನ್ಗೆ ಒಳಪಡಿಸಲಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಮನೀಶ್ ಪಾಂಡೆ ಮತ್ತು ಇಶಾನ್ ಕಿಶನ್ ಕಣಕ್ಕಿಳಿಯುತ್ತಿಲ್ಲ.
ಇವರ ಬದಲಿಗೆ ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ನಿತೀಶ್ ರಾಣಾ, ಕುಲದೀಪ್ ಯಾದವ್, ರಾಹುಲ್ ಚಹರ್, ಚೇತನ್ ಸಕಾರಿಯಾ ಅವಕಾಶ ಪಡೆದಿದ್ದಾರೆ. ಆರಂಭಿಕರಾಗಿ ಶಿಖರ್ ಧವನ್ ಜೊತೆ ದೇವದತ್ ಪಡಿಕ್ಕಲ್ ಅಥವಾ ರುತುರಾಜ್ ಕಣಕ್ಕಿಳಿಯಲಿದ್ದು, 3ನೇ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಆಡಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ನಿತೀಶ್ ರಾಣಾ ಬ್ಯಾಟ್ ಬೀಸಲಿದ್ದಾರೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ (Team India Playing 11) ಹೀಗಿದೆ: ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ನವದೀಪ್ ಸೈನಿ, ಚೇತನ್ ಸಕಾರಿಯಾ, ರಾಹುಲ್ ಚಹರ್
ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್..!
ಇದನ್ನೂ ಓದಿ: ಸೂರ್ಯಕುಮಾರ್ ಯಾದವ್ಗೆ ಅವಕಾಶ ಕೈತಪ್ಪುವ ಆತಂಕ
(India vs Sri Lanka 2nd T20 Playing 11)