AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಪಡಿಕ್ಕಲ್, ಜುರೇಲ್ ಶತಕ; ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿದ ಭಾರತ

India vs Sri Lanka 2nd Test: ಕೊಲಂಬೊದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಭಾರತ ಟಾಸ್ ಗೆದ್ದು 503/9ಕ್ಕೆ ಡಿಕ್ಲೇರ್ ಮಾಡಿದೆ. ದೇವದತ್ ಪಡಿಕ್ಕಲ್ ಮತ್ತು ಧ್ರುವ್ ಜುರೇಲ್ ಶತಕ ಸಿಡಿಸಿದರೆ, ಶುಭ್​ಮನ್ ಗಿಲ್ ಮತ್ತು ರಿಷಭ್ ಪಂತ್ ಅರ್ಧಶತಕ ಗಳಿಸಿದರು. ಲಂಕಾ ಪರ ಅಸಿತಾ ಫೆರ್ನಾಂಡೋ 4 ವಿಕೆಟ್ ಪಡೆದರು.

IND vs SL: ಪಡಿಕ್ಕಲ್, ಜುರೇಲ್ ಶತಕ; ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿದ ಭಾರತ
Ind Vs Sl
ಪೃಥ್ವಿಶಂಕರ
|

Updated on:Aug 24, 2026 | 5:40 PM

Share

ಕೊಲಂಬೊದಲ್ಲಿ (Colombo Test) ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ (India vs Sri Lanka) 9 ವಿಕೆಟ್ ನಷ್ಟಕ್ಕೆ ಬರೋಬ್ಬರಿ 503 ರನ್ ಕಲೆಹಾಕಿ ತನ್ನ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ತಂಡದ ಪರ ದೇವದತ್ ಪಡಿಕ್ಕಲ್ (Devdutt Padikkal) ಹಾಗೂ ಧ್ರುವ್ ಜುರೇಲ್ ( Dhruv Jurel) ಶತಕ ಬಾರಿಸಿದರೆ, ನಾಯಕ ಶುಭ್​ಮನ್ ಗಿಲ್ ಹಾಗೂ ರಿಷಭ್ ಪಂತ್ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇತ್ತ ಲಂಕಾ ಪರ ಅಸಿತಾ ಫೆರ್ನಾಂಡೋ ಅತ್ಯಧಿಕ 4 ವಿಕೆಟ್ ಕಬಳಿಸಿದರೆ, ಕೇಶರ ನುವಂತ 2, ಲಹಿರು ಕುಮಾರ ಹಾಗೂ ಪ್ರಬಾತ್ ಜಯಸೂರ್ಯ ತಲಾ 1 ವಿಕೆಟ್ ಪಡೆದರು.

ಪಂತ್- ಜುರೇಲ್ ಜೊತೆಯಾಟ

ಮೊದಲ ದಿನದಂದು 5 ವಿಕೆಟ್‌ಗಳನ್ನು ಕಳೆದುಕೊಂಡು 300 ರನ್ ಕಲೆಹಾಕಿದ್ದ ಟೀಂ ಇಂಡಿಯಾ ಎರಡನೇ ದಿನದಂದು ಇಲ್ಲಿಂದ ತನ್ನ ಇನ್ನಿಂಗ್ಸ್ ಮುಂದುವರೆಸಿತು. ಆದರೆ ಎರಡನೇ ದಿನದಾಟದ ಮೊದಲ ಸೆಷನ್​ನ ಆರಂಭದಲ್ಲೇ ಯುವ ಆಟಗಾರ ಸರಾಂಶ್ ಜೈನ್ 6 ರನ್​ಗಳಿಗೆ ಔಟಾದರು. ಹೀಗಾಗಿ ಗಾಯದಿಂದಾಗಿ ಮೊದಲ ದಿನ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ್ದ ರಿಷಭ್ ಪಂತ್ ಬ್ಯಾಟಿಂಗ್​ಗೆ ಬಂದರು. ಪಂತ್​ಗೆ ಸಾಥ್ ನೀಡಿದ ಜುರೇಲ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಇಬ್ಬರು ಅರ್ಧಶತಕ ಬಾರಿಸುವುದರೊಂದಿಗೆ ತಂಡವನ್ನು 400 ರನ್​ಗಳ ಗಡಿ ದಾಟಿಸಿದರು. ಹೀಗಾಗಿ ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ 6 ವಿಕೆಟ್‌ ಕಳೆದುಕೊಂಡು 419 ರನ್ ಕಲೆಹಾಕಿತು. ರಿಷಭ್ ಪಂತ್ 63 ರನ್‌ ಮತ್ತು ಧ್ರುವ್ ಜುರೆಲ್ 59 ರನ್‌ ಬಾರಿಸಿ ಅಜೇಯರಾಗಿ ಉಳಿದಿದ್ದಲ್ಲದೆ 112 ರನ್‌ಗಳ ಜೊತೆಯಾಟವನ್ನು ನಿರ್ಮಿಸಿದರು.

ಜುರೇಲ್ ಶತಕಕ್ಕೆ ಮಳೆ ಅಡ್ಡಿ

ಎರಡನೇ ಸೆಷನ್ ಆರಂಭದಲ್ಲೇ ತಂಡ ತನ್ನ 7ನೇ ವಿಕೆಟ್ ಕಳೆದುಕೊಂಡಿತು. ರಿಷಭ್ ಪಂತ್ ಮೊದಲ ಎಸೆತದಲ್ಲೇ ಔಟಾದರು. ಮಾನವ್ ಸುತಾರ್ ಕೂಡ 18 ರನ್​ಗಳ ಕಾಣಿಕೆ ನೀಡಿ ಪೆವಿಲಿಯನ್ ಸೇರಿಕೊಂಡರು. ಆದಾಗ್ಯೂ ಒಂದು ತುದಿಯಲ್ಲಿ ತಾಳ್ಮೆಯ ಇನ್ನಿಂಗ್ಸ್ ಕಟ್ಟುತ್ತಿದ್ದ ಜುರೇಲ್​ಗೆ ಸಿರಾಜ್ ಸಾಥ್ ನೀಡಿದರು. ಆದರೆ ಜುರೇಲ್ ಶತಕದ ಸಮೀಪದಲ್ಲಿದ್ದಾಗ ಮಳೆ ಆಟಕ್ಕೆ ಅಡ್ಡಿಪಡಿಸಿತು. ಇದರಿಂದ ಅಂಪೈರ್​ಗಳು ಚಹಾ ವಿರಾಮವನ್ನು ಘೋಷಿಸಿದರು. ಮಳೆ ನಿಂತ ಬಳಿಕ ಮೂರನೇ ಸೆಷನ್ ಆರಂಭವಾಯಿತು.

IND vs SL: ಯಶಸ್ವಿ ಜೈಸ್ವಾಲ್​ಗೆ ಡಬಲ್ ಶಾಕ್ ನೀಡಿದ ಐಸಿಸಿ; ಲಂಕಾ ವೇಗಿ ವಿರುದ್ಧವೂ ಕ್ರಮ

ಶತಕ ಪೂರೈಸಿದ ಜುರೇಲ್

ಮೂರನೇ ಸೆಷನ್​ನಲ್ಲಿ ತಮ್ಮ ಆಟ ಮುಂದುವರೆಸಿದ ಜುರೇಲ್ ಶತಕ ಬಾರಿಸಲು ಕೊಂಚ ಹೆಚ್ಚು ಸಮಯವನ್ನೇ ತೆಗೆದುಕೊಂಡರು. 99 ರನ್​ಗಳಿಂದ 100 ರನ್ ಪೂರೈಸಲು ಜುರೇಲ್ ಬರೋಬ್ಬರಿ 13 ಎಸೆತಗಳನ್ನು ತೆಗೆದುಕೊಂಡರು. ಜುರೇಲ್ ಶತಕದ ಬಳಿಕ ಸಿರಾಜ್ ವಿಕೆಟ್ ಪತನವಾಯಿತು. ನಂತರ ಬಂದ ಪ್ರಸಿದ್ಧ್ ಕೃಷ್ಣ ಬೌಂಡರಿ ಬಾರಿಸುವ ಮೂಲಕ ತಂಡವನ್ನು 500 ರನ್​ಗಳ ಗಡಿ ದಾಟಿಸಿದರು. ಕೂಡಲೇ ನಾಯಕ ಶುಭ್​ಮನ್ ಗಿಲ್ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Mon, 24 August 26

Follow Us
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ