AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 5 ದಿನವೂ ಮಳೆ; ಎರಡನೇ ಟೆಸ್ಟ್ ನಡೆಯುವುದು ಅನುಮಾನ..!

India vs Sri Lanka 2nd Test: ಭಾರತ-ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯ ಕೊಲಂಬೊದಲ್ಲಿ ನಡೆಯಲಿದ್ದು, ಮೊದಲ ಟೆಸ್ಟ್ ಗೆದ್ದ ಭಾರತ ಸರಣಿ ಗೆಲುವಿಗೆ ಕಾತರಿಸುತ್ತಿದೆ. ಆದರೆ, ಹವಾಮಾನ ಇಲಾಖೆಯ ವರದಿ ಪ್ರಕಾರ ಪಂದ್ಯದ ಐದು ದಿನವೂ ಭಾರೀ ಮಳೆಯಾಗುವ ಸಂಭವವಿದೆ. ಇದು ಉಭಯ ತಂಡಗಳಿಗೂ ಆತಂಕ ಮೂಡಿಸಿದ್ದು, ಪಂದ್ಯದ ಸಂಪೂರ್ಣ ಆಟಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ.

IND vs SL: 5 ದಿನವೂ ಮಳೆ; ಎರಡನೇ ಟೆಸ್ಟ್ ನಡೆಯುವುದು ಅನುಮಾನ..!
Ind Vs Sl
ಪೃಥ್ವಿಶಂಕರ
|

Updated on:Aug 22, 2026 | 6:25 PM

Share

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಎರಡನೇ ಟೆಸ್ಟ್ ಪಂದ್ಯವು ಭಾನುವಾರದಿಂದ ಕೊಲಂಬೊದ (Colombo Test) ಸಿಂಹಳೀಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಟೆಸ್ಟ್ ಗೆದ್ದಿರುವ ಟೀಂ ಇಂಡಿಯಾ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ, ಇತ್ತ ಆತಿಥೇಯ ಶ್ರೀಲಂಕಾ ಸರಣಿ ಸೋಲಿನಿಂದ ಪಾರಾಗಲು ನೋಡುತ್ತಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ವರದಿ (Weather report) ಉಭಯ ತಂಡಗಳನ್ನು ಆತಂಕಕ್ಕೆ ದೂಡಿದೆ. ಏಕೆಂದರೆ ಮೊದಲ ಟೆಸ್ಟ್​ನಂತೆಯೇ ಎರಡನೇ ಟೆಸ್ಟ್​ಗೂ ಮಳೆ ಅಡ್ಡಿಪಡಿಸಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಗಾಲೆ ಟೆಸ್ಟ್​ನ ಮೊದಲ ದಿನದಂದು ಆಟಕ್ಕೆ ಮಳೆ ಕೊಂಚ ಅಡ್ಡಿ ಪಡಿಸಿತ್ತು. ಆದರೆ ಎರಡನೇ ದಿನದಾಟದಂದು ಮೊದಲ ಸೆಷನ್ ಮಳೆಗಾಹುತಿಯಾಗಿತ್ತು. ಉಳಿದಂತೆ ಟೆಸ್ಟ್ ಪಂದ್ಯ ಯಾವುದೇ ಅಡೆತಡೆಗಳಿಲ್ಲದೆ ಮುಗಿದು ಹೋಗಿತ್ತು. ಇದೀಗ ಎರಡನೇ ಟೆಸ್ಟ್​ಗೆ ಉಭಯ ತಂಡಗಳು ಸಜ್ಜಾಗಿರುವ ಹವಾಮಾನ ಇಲಾಖೆ ನೀಡಿರುವ ವರದಿ ಟೆಸ್ಟ್ ಪಂದ್ಯ ನಡೆಯುವುದರ ಬಗ್ಗೆ ಅನುಮಾನ ಹುಟ್ಟುಹಾಕಿದೆ. ಹವಾಮಾನ ಇಲಾಖೆಯ ಪ್ರಕಾರ, ಎರಡನೇ ಟೆಸ್ಟ್ ಪಂದ್ಯದ ಐದು ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಐದು ದಿನಗಳ ಹವಾಮಾನ ವರದಿ

ಟೆಸ್ಟ್ ಪಂದ್ಯದ ಮೊದಲ ದಿನದಂದು ಮಳೆಯಾಗುವ ಸಾಧ್ಯತೆ ಶೇ. 64 ರಷ್ಟಿದೆ. ಅಲ್ಲದೆ ಬೆಳಿಗ್ಗೆ ಮತ್ತು ಮಧ್ಯಾಹ್ನ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಎರಡನೇ ದಿನದಂದು ಮಳೆಯಾಗುವ ಸಾಧ್ಯತೆ ಶೇ. 96 ರಷ್ಟಿದೆ. ಹಾಗೆಯೇ ಮೂರನೇ ದಿನದಂದು ಮಳೆಯಾಗುವ ಸಾಧ್ಯತೆ ಶೇ. 91 ರಷ್ಟಿದೆ. ಉಳಿದ ಎರಡು ದಿನವೂ ಮಳೆಯಾಗುವ ಸಾಧ್ಯತೆ ಶೇ. 91 ರಷ್ಟಿದೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯ ನಡೆಯುವುದು ಸಾಕಷ್ಟು ಅನುಮಾನವಾಗಿದೆ.

IND vs SL: 2ನೇ ಟೆಸ್ಟ್​​ಗೂ ಮುನ್ನ ಶ್ರೀಲಂಕಾ ತಂಡದಲ್ಲಿ 2 ಬದಲಾವಣೆ

ಸರಣಿಯಲ್ಲಿ ಭಾರತದ ಮುನ್ನಡೆ

ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿ 165 ರನ್‌ಗಳಿಂದ ಜಯಗಳಿಸಿತು. ದೇವದತ್ ಪಡಿಕ್ಕಲ್ ಬ್ಯಾಟಿಂಗ್‌ನಲ್ಲಿ ಭಾರತ ಪರ ಅದ್ಭುತ ಪ್ರದರ್ಶನ ನೀಡಿ 167 ರನ್ ಕಲೆಹಾಕಿದರೆ, ಕೆಎಲ್ ರಾಹುಲ್ 82 ರನ್‌ಗಳ ಕೊಡುಗೆ ನೀಡಿದರು. ರಿಷಭ್ ಪಂತ್ ಮತ್ತು ಧ್ರುವ್ ಜುರೆಲ್ ಕೂಡ ಅರ್ಧಶತಕಗಳ ಇನ್ನಿಂಗ್ಸ್ ಆಡಿದರು. ಇತ್ತ ಬೌಲಿಂಗ್‌ನಲ್ಲಿ ಮಿಂಚಿದ ಮಾನವ್ ಸುತಾರ್ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್‌ಗಳನ್ನು ಕಬಳಿಸಿದರು. ಅಂತಿಮವಾಗಿ ನಾಲ್ಕನೇ ಇನ್ನಿಂಗ್ಸ್‌ನಲ್ಲಿ 372 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ 202 ರನ್‌ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Sat, 22 August 26

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ