Rohit Sharma: ರೋಹಿತ್ ಶರ್ಮಾ ಸಿಕ್ಸ್​ಗೆ ಆಸ್ಪತ್ರೆ ಸೇರಿದ ಅಭಿಮಾನಿ

India vs Sri Lanka 2nd Test : ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ 92 ರನ್​ಗಳಿಸಿದರೆ, ರಿಷಭ್ ಪಂತ್ 39 ಹಾಗೂ ಹನುಮ ವಿಹಾರಿ 31 ರನ್​ ಬಾರಿಸಿದರು. ಇನ್ನು ಮೊದಲ ಇನಿಂಗ್ಸ್​ನಲ್ಲಿ ಶ್ರೀಲಂಕಾ ತಂಡವು ಕೇವಲ 109 ರನ್​ಗಳಿಗೆ ಆಲೌಟ್ ಆಗಿದೆ.

Rohit Sharma: ರೋಹಿತ್ ಶರ್ಮಾ ಸಿಕ್ಸ್​ಗೆ ಆಸ್ಪತ್ರೆ ಸೇರಿದ ಅಭಿಮಾನಿ
Rohit Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 13, 2022 | 2:36 PM

ಬೆಂಗಳೂರಿನಲ್ಲಿ ನಡೆಯುತ್ತಿರುವ ಡೇ-ನೈಟ್ ಟೆಸ್ಟ್ (India vs Sri Lanka 2nd Test) ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ (Team India) ನೀರಸ ಪ್ರದರ್ಶನ ನೀಡಿತು. ಶ್ರೇಯಸ್ ಅಯ್ಯರ್ ಅವರ 92 ರನ್​ಗಳ ನೆರವಿನಿಂದ 252 ರನ್​ಗಳಿಸಿ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲೇ ಆಲೌಟ್ ಆಗಿತ್ತು. ಇತ್ತ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಬ್ಯಾಟ್​​ನಿಂದ ಕೂಡ ನಿರೀಕ್ಷಿತ ಆಟ ಮೂಡಿ ಬಂದಿರಲಿಲ್ಲ. ಹಿಟ್​ಮ್ಯಾನ್ ಕೇವಲ 15 ರನ್​ಗಳಿಸಿ ನಿರ್ಗಮಿಸಿದ್ದರು. ಆದರೆ ಈ 15 ರನ್​ನಲ್ಲಿ ರೋಹಿತ್ ಶರ್ಮಾ 1 ಸಿಕ್ಸ್ ಹಾಗೂ 1 ಫೋರ್ ಬಾರಿಸಿದ್ದರು. ಈ ಒಂದು ಸಿಕ್ಸ್ ಸ್ಟೇಡಿಯಂನಲ್ಲಿ ಕುಳಿತಿದ್ದ ಅಭಿಮಾನಿ ಪಾಲಿಗೆ ಕಂಟಕವಾಗಿದ್ದು ವಿಪರ್ಯಾಸ.

ಎರಡನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಚಿನ್ನಸ್ವಾಮಿ ಕ್ರೀಡಾಂಗಣ ಕಿಕ್ಕಿರಿದು ತುಂಬಿತ್ತು. ತಮ್ಮ ಸ್ಟಾರ್ ಬ್ಯಾಟ್ಸ್‌ಮನ್‌ಗಳನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದರು. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 6ನೇ ಓವರ್‌ನ ಕೊನೆಯ ಎಸೆತದಲ್ಲಿ ಮಿಡ್ ವಿಕೆಟ್ ಕಡೆಗೆ ಭರ್ಜರಿ ಸಿಕ್ಸರ್ ಬಾರಿಸಿದರು. ಈ ಸಿಕ್ಸ್​ ಹೋಗಿ ಬಿದ್ದಿದ್ದು ಡಿ ಕಾರ್ಪೊರೇಟ್ ಬಾಕ್ಸ್ ನಲ್ಲಿ ಕುಳಿತಿದ್ದ 22 ವರ್ಷದ ಅಭಿಮಾನಿಯೊಬ್ಬನ ಮೂಗಿಗೆ. ಚೆಂಡು ಬಿದ್ದ ರಭಸಕ್ಕೆ ಮೂಗಿಗೆ ಆಳವಾದ ಗಾಯವಾಗಿದ್ದು, ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಎಕ್ಸ್‌ರೇ ತೆಗೆದ ನಂತರ ಅವರ ಮೂಗಿನಲ್ಲಿ ಮೂಳೆ ಮುರಿತ ಆಗಿರುವುದು ಕಂಡು ಬಂದಿದೆ.

ಈ ಬಗ್ಗೆ ಮಾತನಾಡಿರುವ ಬೆಂಗಳೂರಿನ ಹೊಸ್ಮಾಟ್ ಆಸ್ಪತ್ರೆಯ ವೈದ್ಯ ಡಾ.ಅಜಿತ್ ಬೆನೆಡಿಕ್ಟ್ ರಯಾನ್, ‘ಎಕ್ಸರೆಯಲ್ಲಿ ಮೂಗಿನ ಮೂಳೆ ಮುರಿದಿರುವುದು ಕಂಡು ಬಂದಿದೆ. ಹಾಗೆಯೇ ಗಾಯವಾದ ಭಾಗಗಳಿಗೆ ಹೊಲಿಗೆಗಳನ್ನೂ ಹಾಕಲಾಗಿದೆ ಎಂದು ತಿಳಿಸಿದ್ದಾರೆ. ಒಟ್ಟಿನಲ್ಲಿ ಪಂದ್ಯವನ್ನು ವೀಕ್ಷಿಸುತ್ತಾ ಮೈಮರೆತಿದ್ದ ಅಭಿಮಾನಿ ಇದೀಗ ಮೂಗು ಮುರಿತಕ್ಕೊಳಗಾಗಿದ್ದಾರೆ.

ಮೊದಲ ದಿನದಾಟ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಈ ಡೇ-ನೈಟ್​ ಪಂದ್ಯದ ಮೊದಲ ದಿನವೇ ಭಾರತ ತಂಡವು ಕೇವಲ 252 ರನ್‌ಗಳಿಗೆ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ 92 ರನ್​ಗಳಿಸಿದರೆ, ರಿಷಭ್ ಪಂತ್ 39 ಹಾಗೂ ಹನುಮ ವಿಹಾರಿ 31 ರನ್​ ಬಾರಿಸಿದರು. ಇನ್ನು ಮೊದಲ ಇನಿಂಗ್ಸ್​ನಲ್ಲಿ ಶ್ರೀಲಂಕಾ ತಂಡವು ಕೇವಲ 109 ರನ್​ಗಳಿಗೆ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿದರೆ, ಅಶ್ವಿನ್ ಹಾಗೂ ಶಮಿ ತಲಾ 2 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್