IND vs SL: 33 ವರ್ಷದ ಆಟಗಾರ ಪಾದಾರ್ಪಣೆ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Sri Lanka 2nd Test: ಭಾರತ ಮತ್ತು ಶ್ರೀಲಂಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಕೊಲೊಂಬೋದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ಆರಂಭವಾಗಿದೆ. ಸರಣಿಯಲ್ಲಿ 1-0 ಮುನ್ನಡೆಯಲ್ಲಿರುವ ಭಾರತ ತಂಡವು ಈ ಪಂದ್ಯವನ್ನು ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿ ಜಯಿಸಲಿದೆ.

IND vs SL: 33 ವರ್ಷದ ಆಟಗಾರ ಪಾದಾರ್ಪಣೆ: ಹೀಗಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Image Credit source: BCCI

Updated on: Aug 23, 2026 | 9:36 AM

ಭಾರತ ಮತ್ತು ಶ್ರೀಲಂಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಶುರುವಾಗಿದೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕಳೆದ ಮ್ಯಾಚ್​​ನಲ್ಲಿ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ಅವರನ್ನು ಪ್ಲೇಯಿಂಗ್ ಇಲೆವೆನ್​​ನಿಂದ ಕೈ ಬಿಡಲಾಗಿದೆ.

ಕುಲ್ದೀಪ್ ಯಾದವ್ ಬದಲಿಗೆ ಈ ಬಾರಿ 33 ವರ್ಷದ ಸರಾನ್ಶ್ ಜೈನ್​ಗೆ ಚೊಚ್ಚಲ ಬಾರಿಗೆ ಆಡುವ ಬಳಗದಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ಒಂದು ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಧ್ರುವ್ ಜುರೆಲ್, ಸರಾನ್ಶ್ ಜೈನ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಶ್ರೀಲಂಕಾ (ಪ್ಲೇಯಿಂಗ್ XI): ಲಹಿರು ಉದಾರ, ಕಮಿಲ್ ಮಿಶ್ರಾ, ಪಸಿಂದು ಸೂರಿಯಬಂಡಾರ, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವಾ(ನಾಯಕ), ಸೋನಾಲ್ ದಿನುಶಾ, ನಿರೋಶನ್ ಡಿಕ್ವೆಲ್ಲಾ(ವಿಕೆಟ್ ಕೀಪರ್), ಕೇಶರ ನುವಾಂತ, ಪ್ರಭಾತ್ ಜಯಸೂರ್ಯ, ಲಹಿರು ಕುಮಾರ, ಅಸಿತ ಫೆರ್ನಾಂಡೊ.

ಕ್ಲೀನ್ ಸ್ವೀಪ್ ಮೇಲೆ ಕಣ್ಣು:

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದರೆ 2-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳಬಹುದು. ಅಂದರೆ ಶ್ರೀಲಂಕಾ ಪಾಲಿಗೆ ಈ ದ್ವಿತೀಯ ಟೆಸ್ಟ್ ‘ಮಾಡು ಇಲ್ಲವೇ ಮಡಿ’ ಪಂದ್ಯವಾಗಿದೆ. ಆದರೆ, ಇತ್ತ ಸರಣಿ ವಶಪಡಿಸಿಕೊಳ್ಳಲು ಭಾರತ ತಂಡಕ್ಕೆ ಗೆಲುವು ಅಥವಾ ಡ್ರಾ ಸಾಧಿಸಿದರೆ ಸಾಕು. ಹೀಗಾಗಿ ಕೊಲಂಬೊ ಟೆಸ್ಟ್‌ನಲ್ಲಿ ಸರಣಿ ಸಮಬಲಗೊಳಿಸಲು ಶ್ರೀಲಂಕಾ ತಂಡ ಭಾರತಕ್ಕೆ ಭರ್ಜರಿ ಪೈಪೋಟಿ ನೀಡುವುದು ಖಚಿತ.

ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಾನ್ಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ, ಸರ್ಫರಾಝ್ ಖಾನ್.

ಇದನ್ನೂ ಓದಿ: 70 ಕೋಟಿ ರೂ. ನಷ್ಟ: ಟೀಮ್ ಇಂಡಿಯಾ ಕಣಕ್ಕಿಳಿದರೆ 500 ಕೋಟಿ ರೂ. ಲಾಭ!

ಶ್ರೀಲಂಕಾ ಟೆಸ್ಟ್ ತಂಡ: ಧನಂಜಯ ಡಿ ಸಿಲ್ವಾ (ನಾಯಕ), ಲಹಿರು ಉದಾರ, ಕಮಿಲ್ ಮಿಶ್ರಾ, ಪಸಿಂದು ಸೂರಿಯಬಂಡಾರ, ಕಮಿಂದು ಮೆಂಡಿಸ್, ಸಹನ್ ಅರಾಚ್ಚಿಗೆ, ಸೋನಲ್ ದಿನುಶಾ, ನಿರೋಶನ್ ಡಿಕ್ವೆಲ್ಲಾ, ಕೇಶರ ನುವಂತ, ಪ್ರಭಾತ್ ಜಯಸೂರ್ಯ, ಮಿಲನ್ ರತ್ನಾಯಕೆ, ಲಹಿರು ಕುಮಾರ, ಅಸಿತಾ ಫೆರ್ನಾಂಡೋ, ವಿಶ್ವ ಫೆರ್ನಾಂಡೋ.

Loading...
Unable to load recommendations.
Follow Us