AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL 2ನೇ ಟೆಸ್ಟ್ ಪಂದ್ಯ ಯಾವಾಗ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

India vs Sri Lanka 2nd Test: ಭಾರತ ಮತ್ತು ಶ್ರೀಲಂಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಆಗಸ್ಟ್ 23 ರಿಂದ ಕೊಲೊಂಬೋದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ಆರಂಭವಾಗಲಿದೆ. ಸರಣಿಯಲ್ಲಿ 1-0 ಮುನ್ನಡೆಯಲ್ಲಿರುವ ಭಾರತ ತಂಡವು ಈ ಪಂದ್ಯವನ್ನು ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿ ಜಯಿಸಲಿದೆ.

IND vs SL 2ನೇ ಟೆಸ್ಟ್ ಪಂದ್ಯ ಯಾವಾಗ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
IND vs SLImage Credit source: BCCI
ಝಾಹಿರ್ ಯೂಸುಫ್
|

Updated on:Aug 22, 2026 | 12:18 PM

Share

ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 165 ರನ್‌ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ಟೀಮ್ ಇಂಡಿಯಾ, ಇದೀಗ ಶ್ರೀಲಂಕಾ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದೆ. ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಉತ್ಸಾಹದಲ್ಲಿ ಭಾರತ ತಂಡವಿದ್ದರೆ, ಇತ್ತ ತವರಿನಲ್ಲಿ ಮಾನ ಉಳಿಸಿಕೊಳ್ಳಲು ಶ್ರೀಲಂಕಾ ತಂಡ ಹೋರಾಡಬೇಕಿದೆ.

ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವು ಆಗಸ್ಟ್ 23 ರಿಂದ ಆಗಸ್ಟ್ 27 ರವರೆಗೆ ಕೊಲೊಂಬೋದ ಐತಿಹಾಸಿಕ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯಲಿದೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಶ್ರೀಲಂಕಾ ನಡುವಣ 2ನೇ ಟೆಸ್ಟ್ ಪಂದ್ಯವು ಭಾರತೀಯ ಕಾಲಮಾನ (IST) ಬೆಳಿಗ್ಗೆ 10:00 ಗಂಟೆಗೆ ಪ್ರಾರಂಭವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ ಬೆಳಿಗ್ಗೆ 9:30 ಕ್ಕೆ ನಡೆಯಲಿದೆ.

ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು?

  • ಟಿವಿ ನೇರ ಪ್ರಸಾರ: ಭಾರತದಲ್ಲಿ ಈ ಪಂದ್ಯವನ್ನು ‘ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್’ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
  • ಡಿಜಿಟಲ್ ಲೈವ್ ಸ್ಟ್ರೀಮಿಂಗ್: ಮೊಬೈಲ್ ಅಥವಾ ಲ್ಯಾಪ್‌ಟಾಪ್‌ಗಳಲ್ಲಿ ಪಂದ್ಯವನ್ನು ಲೈವ್ ಆಗಿ ವೀಕ್ಷಿಸಲು ಬಯಸುವವರು ‘ಸೋನಿ ಲಿವ್’ (SonyLIV) ಆ್ಯಪ್ ಹಾಗೂ ವೆಬ್‌ಸೈಟ್ ಮೂಲಕ ವೀಕ್ಷಿಸಬಹುದು.

ಪಿಚ್ ಮತ್ತು ಹವಾಮಾನ ವರದಿ:

ಕೊಲೊಂಬೋದ ಎಸ್‌ಎಸ್‌ಸಿ ಮೈದಾನವು ಸಾಂಪ್ರದಾಯಿಕವಾಗಿ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ನೀಡುತ್ತದೆ. ಆದರೆ ಪಂದ್ಯದ ನಾಲ್ಕನೇ ಮತ್ತು ಐದನೇ ದಿನಗಳಲ್ಲಿ ಸ್ಪಿನ್ನರ್‌ಗಳು ಪ್ರಮುಖ ಪಾತ್ರ ವಹಿಸಲಿದ್ದಾರೆ. ಪ್ರಸ್ತುತ ಹವಾಮಾನ ಮುನ್ಸೂಚನೆಯ ಪ್ರಕಾರ ಪಂದ್ಯದ ಕೆಲವು ದಿನಗಳಂದು ಮಳೆಯ ಅಡಚಣೆ ಉಂಟಾಗುವ ಸಾಧ್ಯತೆಯೂ ಇದೆ.

ಉಭಯ ತಂಡಗಳು ಈ ಕೆಳಗಿನಂತಿವೆ:

ಶ್ರೀಲಂಕಾ ಟೆಸ್ಟ್ ತಂಡ: ಧನಂಜಯ ಡಿ ಸಿಲ್ವಾ (ನಾಯಕ), ಲಹಿರು ಉದಾರ, ಕಮಿಲ್ ಮಿಶ್ರಾ, ಪಸಿಂದು ಸೂರಿಯಬಂಡಾರ, ಕಮಿಂದು ಮೆಂಡಿಸ್, ಸಹನ್ ಅರಾಚ್ಚಿಗೆ, ಸೋನಲ್ ದಿನುಶಾ, ನಿರೋಶನ್ ಡಿಕ್ವೆಲ್ಲಾ, ಕೇಶರ ನುವಂತ, ಪ್ರಭಾತ್ ಜಯಸೂರ್ಯ, ಮಿಲನ್ ರತ್ನಾಯಕೆ, ಲಹಿರು ಕುಮಾರ, ಅಸಿತಾ ಫೆರ್ನಾಂಡೋ, ವಿಶ್ವ ಫೆರ್ನಾಂಡೋ.

ಇದನ್ನೂ ಓದಿ: ಸ್ವಂತ ದಾಖಲೆ ಮುಂದೆ ಸೋತ ಮಿಚೆಲ್ ಸ್ಟಾರ್ಕ್​

ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ, ಸರ್ಫರಾಝ್ ಖಾನ್.

Published On - 12:00 pm, Sat, 22 August 26

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ