IND vs SL, 3rd ODI Live Streaming: ರೋಹಿತ್ ಬಳಗಕ್ಕೆ ಕ್ಲೀನ್‌ಸ್ವೀಪ್ ಗುರಿ; 3ನೇ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ?
IND vs SL, 3rd ODI Live Streaming: ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ನೆರವಾಗುವುದಕ್ಕೆ ಹೆಸರುವಾಸಿಯಾಗಿದೆ. ಹೀಗಾಗಿ ಉಭಯ ತಂಡಗಳ ಸ್ಪಿನ್ನರ್‌ಗಳಿಗೆ ಇಲ್ಲಿ ಹೆಚ್ಚಿನ ಲಾಭವಾಗಲಿದೆ.
ಭಾರತ ಮತ್ತು ಶ್ರೀಲಂಕಾ (India Vs Sri Lanka) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಜನವರಿ 15 ರಂದು ತಿರುವನಂತಪುರಂನಲ್ಲಿ ನಡೆಯಲಿದೆ. ಟೀಂ ಇಂಡಿಯಾ (Team India) ಏಕದಿನ ಸರಣಿಯಲ್ಲಿ 2-0 ಅಂತರದ ಅಜೇಯ ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡ ಕ್ಲೀನ್ ಸ್ವೀಪ್ ಮಾಡುವ ಉದ್ದೇಶದಿಂದ ಮೂರನೇ ಪಂದ್ಯಕ್ಕೀಳಿಯಲಿದೆ. ಇನ್ನು ಮೂರನೇ ಪಂದ್ಯ ನಡೆಯಲ್ಲಿರುವ ತಿರುವನಂತಪುರಂನ ಗ್ರೀನ್ ಫೀಲ್ಡ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಹೇಳಬೇಕೆಂದರೆ, ಈ ಕ್ರೀಡಾಂಗಣದಲ್ಲಿ ಕೇವಲ ಒಂದು ಏಕದಿನ ಪಂದ್ಯ ಮಾತ್ರ ನಡೆದಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದಿದ್ದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು.
ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ನೆರವಾಗುವುದಕ್ಕೆ ಹೆಸರುವಾಸಿಯಾಗಿದೆ. ಹೀಗಾಗಿ ಉಭಯ ತಂಡಗಳ ಸ್ಪಿನ್ನರ್‌ಗಳಿಗೆ ಇಲ್ಲಿ ಹೆಚ್ಚಿನ ಲಾಭವಾಗಲಿದೆ. ಅದೇ ಸಮಯದಲ್ಲಿ, ವೇಗದ ಬೌಲರ್‌ಗಳು ಪಂದ್ಯದ ಆರಂಭದಲ್ಲಿ ಪಿಚ್‌ನ ಸ್ವಲ್ಪ ಪ್ರಯೋಜನವನ್ನು ಪಡೆಯಲಿದ್ದಾರೆ. ಈ ಮೈದಾನದ ಪಂದ್ಯದಲ್ಲಿ ಇಬ್ಬನಿಯೂ ಪ್ರಮುಖ ಪಾತ್ರ ವಹಿಸುವುದರಿಂದ ಇಲ್ಲಿ ಮೊದಲು ಟಾಸ್ ಗೆದ್ದು ಬೌಲಿಂಗ್ ಮಾಡುವ ತಂಡ ಹೆಚ್ಚು ಲಾಭ ಪಡೆಯಬಹುದು.
IND vs AUS: ಪೃಥ್ವಿ ಶಾಗೆ ಸಿಕ್ಕ ಅವಕಾಶ ದೇಶಿ ಕ್ರಿಕೆಟ್ನ ರನ್ ಮಷಿನ್ ಸರ್ಫರಾಜ್ ಖಾನ್ಗೆ ಯಾಕಿಲ್ಲ?
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯ ಭಾನುವಾರ (ಜನವರಿ 15) ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ 3 ನೇ ಏಕದಿನ ಪಂದ್ಯ ಎಲ್ಲಿ ನಡೆಯುತ್ತದೆ?
ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಸ್ಟೇಡಿಯಂನಲ್ಲಿ ಭಾರತ ಮತ್ತು ಶ್ರೀಲಂಕಾ 3ನೇ ಏಕದಿನ ಪಂದ್ಯ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಏಕದಿನ ಪಂದ್ಯ ಯಾವಾಗ ಆರಂಭವಾಗುತ್ತದೆ?
ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಏಕದಿನ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಮುನ್ನ 1 ಗಂಟೆಗೆ ಟಾಸ್ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲಭ್ಯವಿರುತ್ತದೆ. ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಶ್ರೀಲಂಕಾ ವಿರುದ್ಧ ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್ , ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಅರ್ಶ್ದೀಪ್ ಸಿಂಗ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:47 pm, Sat, 14 January 23