India vs Sri Lanka 3rd ODI: 3ನೇ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ 3 ಬದಲಾವಣೆ ಸಾಧ್ಯತೆ

| Updated By: ಝಾಹಿರ್ ಯೂಸುಫ್

Updated on: Jan 14, 2023 | 10:24 PM

India vs Sri Lanka 3rd ODI Probable Playing 11: ಗಾಯದ ಕಾರಣ ಕಳೆದ ಪಂದ್ಯದಿಂದ ಹೊರಗುಳಿದಿದ್ದ ಯುಜ್ವೇಂದ್ರ ಚಹಾಲ್ ಈ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ಕುಲ್ದೀಪ್ ಯಾದವ್ 3ನೇ ಪಂದ್ಯದಲ್ಲೂ ಕಾಣಿಸಿಕೊಳ್ಳಲಿದ್ದಾರೆ.

India vs Sri Lanka 3rd ODI: 3ನೇ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ 3 ಬದಲಾವಣೆ ಸಾಧ್ಯತೆ
Team India
Follow us on

India vs Sri Lanka 3rd ODI: ಭಾರತ-ಶ್ರೀಲಂಕಾ ನಡುವಣ 3ನೇ ಏಕದಿನ ಪಂದ್ಯವು ಭಾನುವಾರ (ಜ.15) ತಿರುವನಂತಪುರದಲ್ಲಿ ನಡೆಯಲಿದೆ. 3 ಪಂದ್ಯಗಳ ಸರಣಿಯನ್ನು ಈಗಾಗಲೇ 2-0 ಗೆದ್ದಿರುವ ಟೀಮ್ ಇಂಡಿಯಾಗೆ ಇದು ಔಪಚಾರಿಕ ಪಂದ್ಯವಾಗಿದೆ. ಹೀಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಖಚಿತ ಎಂದೇ ಹೇಳಬಹುದು. ಅದರಂತೆ ಮೊದಲೆರಡು ಪಂದ್ಯಗಳಲ್ಲಿ ಹೊರಗುಳಿದ ಆಟಗಾರರಿಗೆ 3ನೇ ಪಂದ್ಯದಲ್ಲಿ ಅವಕಾಶ ಸಿಗಲಿದೆ.

ಈ ಪಟ್ಟಿಯಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಹೆಸರು ಮುಂಚೂಣಿಯಲ್ಲಿದೆ. ಈ ಇಬ್ಬರು ಉತ್ತಮ ಫಾರ್ಮ್​​ನಲ್ಲಿದ್ದು. ಇದಾಗ್ಯೂ ಮೊದಲೆರಡು ಪಂದ್ಯಗಳಲ್ಲಿ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಅಂತಿಮ ಪಂದ್ಯದಲ್ಲಿ ಶುಭ್​ಮನ್ ಗಿಲ್ ಸ್ಥಾನದಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟರ್​ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಮತ್ತೊಂದೆಡೆ ಮೊದಲೆರಡು ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ಶ್ರೇಯಸ್ ಅಯ್ಯರ್ ಬದಲಿಗೆ ಸೂರ್ಯಕುಮಾರ್ ಯಾದವ್ ಸ್ಥಾನ ಪಡೆಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಈ ಎರಡು ಬದಲಾವಣೆ ಖಚಿತ ಎಂದೇ ಹೇಳಬಹುದು.

ಇದನ್ನೂ ಓದಿ
IPL 2023: ಐಪಿಎಲ್​ನಿಂದ ಹೊರಬಿದ್ದ ರಿಷಭ್ ಪಂತ್​ಗೆ ಸಿಗಲಿದೆ 21 ಕೋಟಿ ರೂ.
Suryakumar Yadav: ರಾಹುಲ್ ದಾಖಲೆ ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸೂರ್ಯ
Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Virat Kohli – Rohit Sharma: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ-ರೋಹಿತ್​ಗಿಲ್ಲ ಚಾನ್ಸ್​?

ಇದನ್ನೂ ಓದಿ: Virat Kohli – Rohit Sharma: ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಟಿ20 ಕೆರಿಯರ್ ಅಂತ್ಯ?

ಇನ್ನು ಗಾಯದ ಕಾರಣ ಕಳೆದ ಪಂದ್ಯದಿಂದ ಹೊರಗುಳಿದಿದ್ದ ಯುಜ್ವೇಂದ್ರ ಚಹಾಲ್ ಈ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ಕುಲ್ದೀಪ್ ಯಾದವ್ 3ನೇ ಪಂದ್ಯದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಜ್ವರದಿಂದ ಚೇತರಿಸಿಕೊಂಡಿದ್ದರೆ ಅರ್ಷದೀಪ್ ಸಿಂಗ್ ಮೊಹಮ್ಮದ್ ಶಮಿ ಸ್ಥಾನದಲ್ಲಿ ಕಣಕ್ಕಿಳಿಯಬಹುದು. ಈ ಮೂರು ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಮೂರನೇ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್ ರೂಪಿಸಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್​ ಈ ಕೆಳಗಿನಂತಿರಲಿದೆ…

  • ರೋಹಿತ್ ಶರ್ಮಾ
  • ಇಶಾನ್ ಕಿಶನ್
  • ವಿರಾಟ್ ಕೊಹ್ಲಿ
  • ಸೂರ್ಯಕುಮಾರ್ ಯಾದವ್
  • ಕೆಎಲ್ ರಾಹುಲ್
  • ಹಾರ್ದಿಕ್ ಪಾಂಡ್ಯ
  • ಅಕ್ಷರ್ ಪಟೇಲ್
  • ಅರ್ಷದೀಪ್ ಸಿಂಗ್
  • ಮೊಹಮ್ಮದ್ ಸಿರಾಜ್
  • ಕುಲ್ದೀಪ್ ಯಾದವ್
  • ಉಮ್ರಾನ್ ಮಲಿಕ್

 

ಟೀಮ್ ಇಂಡಿಯಾ ಏಕದಿನ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.