IND vs SL: ಮತ್ತೆ ಟಾಸ್ ಗೆದ್ದ ಲಂಕಾ; ಕನ್ನಡಿಗ ರಾಹುಲ್​ಗೆ ಕೋಕ್! ತಂಡದಲ್ಲಿ 2 ಬದಲಾವಣೆ

|

Updated on: Aug 07, 2024 | 2:19 PM

IND vs SL: ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಶ್ರೀಲಂಕಾ ನಾಯಕ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಕಳೆದ ಎರಡು ಪಂದ್ಯಗಳಂತೆ ಈ ಪಂದ್ಯದಲ್ಲೂ ಭಾರತ ಮೊದಲು ಬೌಲಿಂಗ್ ಮಾಡಬೇಕಾಗಿದೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ.

IND vs SL: ಮತ್ತೆ ಟಾಸ್ ಗೆದ್ದ ಲಂಕಾ; ಕನ್ನಡಿಗ ರಾಹುಲ್​ಗೆ ಕೋಕ್! ತಂಡದಲ್ಲಿ 2 ಬದಲಾವಣೆ
ಭಾರತ- ಶ್ರೀಲಂಕಾ
Follow us on

ಇಂದು ಭಾರತ ಮತ್ತು ಶ್ರೀಲಂಕಾ ನಡುವೆ ಮತ್ತೊಂದು ರೋಚಕ ಪಂದ್ಯ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯ ಇಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಶ್ರೀಲಂಕಾಕ್ಕಿಂತ ಟೀಂ ಇಂಡಿಯಾಗೆ ಈ ಪಂದ್ಯ ಮಹತ್ವದ್ದಾಗಿದೆ. ಏಕೆಂದರೆ ಸರಣಿ ಸೋಲಿನ ಆಘಾತವನ್ನು ತಪ್ಪಿಸಿಕೊಳ್ಳಬೇಕಾದರೆ, ಕೊನೆಯ ಪಂದ್ಯವನ್ನಾದರೂ ಟೀಂ ಇಂಡಿಯಾ ಗೆಲ್ಲಲೇಬೇಕಾಗಿದೆ. ಇನ್ನು ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿರುವ ಆತಿಥೇಯ ಶ್ರೀಲಂಕಾ ಕೊನೆಯ ಪಂದ್ಯವನ್ನು ಗೆದ್ದು ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಇರಾದೆಯಲ್ಲಿದೆ. ಈಗಾಗಲೇ ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಶ್ರೀಲಂಕಾ ನಾಯಕ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಕಳೆದ ಎರಡು ಪಂದ್ಯಗಳಂತೆ ಈ ಪಂದ್ಯದಲ್ಲೂ ಭಾರತ ಮೊದಲು ಬೌಲಿಂಗ್ ಮಾಡಬೇಕಾಗಿದೆ. ಇದರ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ.

ಟೀಂ ಇಂಡಿಯಾದಲ್ಲಿ 2 ಬದಲಾವಣೆ

ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಂಡದಲ್ಲಿ 2 ಬದಲಾವಣೆ ಮಾಡಿದ್ದಾರೆ. ಕೆಎಲ್ ರಾಹುಲ್ ಮತ್ತು ಅರ್ಷದೀಪ್ ಸಿಂಗ್ ಅವರನ್ನು ತಂಡದಿಂದ ಕೈ ಬಿಟ್ಟು ರಿಷಬ್ ಪಂತ್ ಮತ್ತು ರಿಯಾನ್ ಪರಾಗ್ ಅವರಿಗೆ ಅವಕಾಶ ನೀಡಿದ್ದಾರೆ. ಈ ಮೂಲಕ ಒಬ್ಬ ವೇಗದ ಬೌಲರ್ ಜೊತೆಗೆ ಟೀಂ ಇಂಡಿಯಾ 4 ಸ್ಪಿನ್ನರ್​ಗಳನ್ನು ಕಣಕ್ಕಿಳಿಸಿದೆ. ಹಾಗೆಯೇ ಬೌಲಿಂಗ್ ಆಲ್​ರೌಂಡರ್ ಆಗಿ ಶಿವಂ ದುಬೆ ತಂಡದಲ್ಲಿದ್ದಾರೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರಿಯಾನ್ ಪರಾಗ್, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಅವಿಷ್ಕಾ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದಿರ ಸಮರವಿಕ್ರಮ, ಚರಿತ್ ಅಸಲಂಕಾ (ನಾಯಕ), ಜೆನಿತ್ ಲಿಯಾನಗೆ, ಕಮಿಂದು ಮೆಂಡಿಸ್, ದುನಿತ್ ವೆಲಾಲಗೆ, ಮಹಿಷ್ ಟೀಕ್ಷಣ, ಜೆಫ್ರಿ ವಾಂಡರ್ಸೆ, ಅಸಿತ ಫೆರ್ನಾಂಡೋ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Wed, 7 August 24