IND vs SL, 3rd T20I, LIVE Streaming: ಸರಣಿ ನಿರ್ಧಾರಕ ಪಂದ್ಯ ಯಾವ ಚಾನೆಲ್ನಲ್ಲಿ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ವಿವರ
IND vs SL, 3rd T20I, LIVE Streaming: ರಾಜ್‌ಕೋಟ್‌ನಲ್ಲಿ ನಡೆಯಲಿರುವ ಕೊನೆಯ ಪಂದ್ಯದೊಂದಿಗೆ ಸರಣಿ ವಿಜೇತರನ್ನು ನಿರ್ಧರಿಸಲಾಗುತ್ತದೆ. ಈ ಪಂದ್ಯವನ್ನು ಯಾರೇ ಗೆದ್ದರೂ ಅವರ ಕೈಗೆ ಸರಣಿ ಸೇರಲಿದೆ.
ಭಾರತ ಮತ್ತು ಶ್ರೀಲಂಕಾ (Team India and Sri Lanka) ನಡುವೆ ನಡೆಯುತ್ತಿರುವ ಟಿ20 ಸರಣಿ ರೋಚಕ ಘಟ್ಟಕ್ಕೆ ಬಂದು ನಿಂತಿದೆ. ಮುಂಬೈನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ಎರಡು ರನ್‌ಗಳ ಜಯ ಸಾಧಿಸಿತ್ತು. ಅದೇ ಸಮಯದಲ್ಲಿ ಪುಣೆಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಶ್ರೀಲಂಕಾ 16 ರನ್‌ಗಳಿಂದ ಗೆದ್ದಿತ್ತು. ಈಗ ರಾಜ್‌ಕೋಟ್‌ನಲ್ಲಿ (rajkot stadium) ನಡೆಯಲಿರುವ ಕೊನೆಯ ಪಂದ್ಯದೊಂದಿಗೆ ಸರಣಿ ವಿಜೇತರನ್ನು ನಿರ್ಧರಿಸಲಾಗುತ್ತದೆ. ಈ ಪಂದ್ಯವನ್ನು ಯಾರೇ ಗೆದ್ದರೂ ಅವರ ಕೈಗೆ ಸರಣಿ ಸೇರಲಿದೆ. ಈ ಸರಣಿಯ ಎರಡೂ ಪಂದ್ಯಗಳು ರೋಚಕವಾಗಿದ್ದಿದ್ದರಿಂದ ಈಗ ಕೊನೆಯ ಪಂದ್ಯದ ಮೇಲೆಯೂ ಅದೇ ನಿರೀಕ್ಷೆಯನ್ನು ಅಭಿಮಾನಿಗಳು ಹೊಂದಿದ್ದಾರೆ.
ಎರಡೂ ಪಂದ್ಯಗಳಲ್ಲಿ ಭಾರತ ತಂಡದ ಬೌಲಿಂಗ್ ವಿಶೇಷವೇನೂ ಆಗಿರಲಿಲ್ಲ. ಅದರಲ್ಲೂ ಪುಣೆಯಲ್ಲಿ ನಡೆದ ಎರಡನೇ ಟಿ20ಯಲ್ಲಿ ಭಾರತದ ಬೌಲರ್‌ಗಳು ದುಬಾರಿ ಪಧದ ಅರ್ಥಕ್ಕೆ ತಕ್ಕಂತ್ತೆ ಪ್ರದರ್ಶನ ನೀಡಿದ್ದರು. ಈ ಪಂದ್ಯದಲ್ಲಿ ಶ್ರೀಲಂಕಾ 206 ರನ್ ಗಳಿಸಿದ್ದೇ ಇದಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಭಾರತ ಸರಣಿಯನ್ನು ಗೆಲ್ಲಬೇಕಾದರೆ, ಈ ಪಂದ್ಯದಲ್ಲಿ ತಂಡದ ಬೌಲಿಂಗ್ ವಿಭಾಗ ಸುಧಾರಿಸಲೇಬೇಕಾಗಿದೆ. ಹಾಗೆಯೇ ತಂಡದ ಟಾಪ್ ಆರ್ಡರ್ ಕೂಡ ಉತ್ತಮ ಬ್ಯಾಟಿಂಗ್ ಮಾಡಬೇಕಿದೆ.
IND vs SL: ತಂಡದಲ್ಲಿ ಒಂದು ಬದಲಾವಣೆ? ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಹೇಗಿರಲಿದೆ ಟೀಂ ಇಂಡಿಯಾ?
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ20 ಪಂದ್ಯ ಯಾವಾಗ?
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ20 ಪಂದ್ಯ ಜನವರಿ 7 ರಂದು (ಶನಿವಾರ) ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಈ ಪಂದ್ಯ ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಹಾಗೂ ಶ್ರೀಲಂಕಾ ನಡುವಿನ 3ನೇ ಟಿ20 ಪಂದ್ಯ ಯಾವಾಗ ಆರಂಭವಾಗಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ಈ ಪಂದ್ಯ ರಾತ್ರಿ 07:00 ಗಂಟೆಗೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಟಿ20 ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಶ್ರೀಲಂಕಾ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಭಾಷೆಯ ಚಾನಲ್‌ಗಳಲ್ಲಿ ನೋಡಬಹುದು.
ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಟಿ20 ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು. ಇದಲ್ಲದೆ, ಪಂದ್ಯದ ಲೈವ್ ನವೀಕರಣಗಳನ್ನು tv9Kannada.com ನಲ್ಲಿ ಸಹ ಓದಬಹುದಾಗಿದೆ.
ಉಭಯ ತಂಡಗಳು
ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ ಮತ್ತು ಮುಖೇಶ್ ಕುಮಾರ್.
ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಸದೀರ ಸಮರವಿಕ್ರಮ, ಕುಸಾಲ್ ಮೆಂಡಿಸ್, ಭಾನುಕಾ ರಾಜಪಕ್ಸೆ, ಚರಿತ್ ಅಸಲಂಕಾ, ಧನಂಜಯ್ ಡಿಸಿಲ್ವಾ, ವನಿಂದು ಹಸರಂಗ, ಅಶೇನ್ ಬಂಡಾರ, ಮಹಿಷ್ ಟೀಕ್ಷಣ, ಚಾಮಿಕಾ ಕರುಣರತ್ನೆ, ದಿಲ್ಶನ್ ಮಧುಶಂಕ, ಕಸುನ್ ರಜಿತ, ದುನಿತ್ ವೆಲಾಲಗೆ, ಪ್ರಮೋದ್ ಮದುಶನ್, ಲಹಿರು ಕುಮಾರ, ನುವಾನ್ ತುಷಾರ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:45 am, Sat, 7 January 23