IND vs SL: ತಂಡದಲ್ಲಿ ಒಂದು ಬದಲಾವಣೆ? ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಹೇಗಿರಲಿದೆ ಟೀಂ ಇಂಡಿಯಾ?

IND vs SL T20 Playing 11: ಎರಡನೇ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಉತ್ತಮ ಪ್ರದರ್ಶನ ನೀಡಲಿಲ್ಲ. ಶಿವ ಮಾವಿ ಮತ್ತು ಉಮ್ರಾನ್ ಮಲಿಕ್ ಕೂಡ ಹೆಚ್ಚು ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಇದಲ್ಲದೇ ಟೀಂ ಇಂಡಿಯಾದ ಅಗ್ರ ಕ್ರಮಾಂಕ ಕೂಡ ವಿಫಲವಾಗಿತ್ತು.

IND vs SL: ತಂಡದಲ್ಲಿ ಒಂದು ಬದಲಾವಣೆ? ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಹೇಗಿರಲಿದೆ ಟೀಂ ಇಂಡಿಯಾ?
ಟೀಂ ಇಂಡಿಯಾ
Follow us
TV9 Web
| Updated By: ಪೃಥ್ವಿಶಂಕರ

Updated on:Jan 06, 2023 | 4:59 PM

ತವರಿನಲ್ಲಿ ನಡೆಯುತ್ತಿರುವ ಟಿ20 ಸರಣಿಯಲ್ಲಿ ಟೀಂ ಇಂಡಿಯಾ (Team India) ಸರಣಿ ಸೋಲುವ ಭೀತಿಯಲ್ಲಿದೆ. ಭಾರತ ತಂಡ ಪ್ರಸ್ತುತ ಶ್ರೀಲಂಕಾ ವಿರುದ್ಧ (Team India and Sri Lanka) ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಈಗಾಗಲೇ ಎರಡು ಪಂದ್ಯಗಳು ಮುಗಿದಿದ್ದು, ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿವೆ. ಹೀಗಾಗಿ ಸರಣಿಯ ಕೊನೆಯ ಹಾಗೂ ನಿರ್ಣಾಯಕ ಪಂದ್ಯ ಶನಿವಾರ ರಾಜ್‌ಕೋಟ್‌ನಲ್ಲಿ ನಡೆಯಲಿದ್ದು ಈ ಪಂದ್ಯವನ್ನು ಗೆಲ್ಲುವ ತಂಡವು ಸರಣಿಯ ವಿಜೇತ ಎನಿಸಿಕೊಳ್ಳಲಿದೆ. ಒಂದು ವೇಳೆ ಶ್ರೀಲಂಕಾ ಸರಣಿ ಗೆದ್ದರೆ ಟೀಂ ಇಂಡಿಯಾಗೆ ದೊಡ್ಡ ಹೊಡೆತ ಬೀಳಲಿದೆ.

ಸರಣಿಯ ಮೊದಲ ಪಂದ್ಯವನ್ನು ರೋಚಕವಾಗಿ ಗೆದ್ದು ಬೀಗಿದ್ದ ಭಾರತ ಎರಡನೇ ಪಂದ್ಯದಲ್ಲಿಯೂ ಉತ್ತಮ ಹೋರಾಟ ನಡೆಸಿದರೂ ಗೆಲ್ಲಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಆರು ವಿಕೆಟ್ ಕಳೆದುಕೊಂಡು 206 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ್ದ ಟೀಂ ಇಂಡಿಯಾ ಪೂರ್ಣ 20 ಓವರ್‌ಗಳನ್ನು ಆಡಿ ಎಂಟು ವಿಕೆಟ್‌ಗಳನ್ನು ಕಳೆದುಕೊಂಡು 190 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ 16 ರನ್‌ಗಳಿಂದ ಪಂದ್ಯವನ್ನು ಕಳೆದುಕೊಂಡಿತು. ಹೀಗಾಗಿ ಮೂರನೇ ಪಂದ್ಯವನ್ನು ಗೆಲ್ಲುವುದು ಹಾರ್ದಿಕ್ ಪಡೆಗೆ ಅನಿವಾರ್ಯವಾಗಿದೆ. ಅಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ತನ್ನ ಪ್ಲೇಯಿಂಗ್-11 ನಲ್ಲಿ ಏನಾದರೂ ಬದಲಾವಣೆಗಳನ್ನು ಮಾಡುತ್ತದೆಯೇ ಅಥವಾ ಇಲ್ಲವೇ ಎಂಬುದು ಕುತೂಹಲಕಾರಿಯಾಗಿದೆ.

IND vs SL: ಭಾರತ- ಲಂಕಾ ಪಂದ್ಯಕ್ಕೆ ಹಾವುಗಳ ಕಾಟ..! ಎನ್​ಜಿಒ ಮೊರೆ ಹೋದ ಎಸಿಎ

ಬದಲಾಗಲಿದೆಯೇ ಟೀಂ ಇಂಡಿಯಾ?

ಎರಡನೇ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಉತ್ತಮ ಪ್ರದರ್ಶನ ನೀಡಲಿಲ್ಲ. ಶಿವ ಮಾವಿ ಮತ್ತು ಉಮ್ರಾನ್ ಮಲಿಕ್ ಕೂಡ ಹೆಚ್ಚು ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಇದಲ್ಲದೇ ಟೀಂ ಇಂಡಿಯಾದ ಅಗ್ರ ಕ್ರಮಾಂಕ ಕೂಡ ವಿಫಲವಾಗಿತ್ತು. ಆರಂಭಿಕರಾಗಿ ಇಶಾನ್ ಕಿಶನ್, ಶುಭಮನ್ ಗಿಲ್ ಹಾಗೂ ರಾಹುಲ್ ತ್ರಿಪಾಠಿ ಅವರಿಗೆ ವಿಶೇಷ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಣೆಯ ಸಾಧ್ಯತೆಗಳು ಹೆಚ್ಚಿದ್ದು, ಬದಲಾವಣೆಯ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. ಆದರೆ ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆ ಆಗುವ ನಿರೀಕ್ಷೆಗಳಿವೆ. ಹರ್ಷಲ್ ಪಟೇಲ್ ಪ್ಲೇಯಿಂಗ್ -11 ಗೆ ಮರಳುವ ಸಾಧ್ಯತೆಗಳಿವೆ. ಆದರೆ ಹರ್ಷಲ್​ಗಾಗಿ ಪಾಂಡ್ಯ ಯಾರನ್ನು ಹೊರಗಿಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಆದರೆ ಇಶಾನ್ ಮತ್ತು ಗಿಲ್ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಬೇಕಿದೆ. ಬ್ಯಾಟಿಂಗ್​ನಲ್ಲಿ ಬದಲಾವಣೆ ಸಾಧ್ಯತೆ ಇಲ್ಲ. ಇನ್ನುಳಿದಂತೆ ದ್ರಾವಿಡ್ ಒಂದು ಪಂದ್ಯದ ಪ್ರದರ್ಶನದ ಆಧಾರದ ಮೇಲೆ ರಾಹುಲ್ ತ್ರಿಪಾಠಿ ಅವರನ್ನು ಹೊರಗಿಡುವ ಸಾಹಸಕ್ಕೆ ಕೈ ಹಾಕುವ ಸಾಧ್ಯತೆ ಕಡಿಮೆ ಇದೆ.

ಅದೇ ತಂಡವನ್ನು ಶ್ರೀಲಂಕಾ ಕಣಕ್ಕಿಳಿಸಲಿದೆ

ಶನಕ ನಾಯಕತ್ವದಲ್ಲಿ ಶ್ರೀಲಂಕಾ ತಂಡ ಅಮೋಘ ಆಟ ಪ್ರದರ್ಶಿಸಿ ಭಾರತಕ್ಕೆ ಉತ್ತಮ ಹೋರಾಟ ನೀಡಿದೆ. ಹೀಗಾಗಿ ಶನಕ ಗೆಲುವಿನ ಸಂಯೋಜನೆಯನ್ನು ಬದಲಾಯಿಸಲು ಹೋಗುವುದಿಲ್ಲ ಆದ್ದರಿಂದ ಶ್ರೀಲಂಕಾದ ಪ್ಲೇಯಿಂಗ್-11 ನಲ್ಲಿ ಬದಲಾವಣೆಯ ನಿರೀಕ್ಷೆಯಿಲ್ಲ.

ಟೀಂ ಇಂಡಿಯಾ

ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್, ಶುಭಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಅಕ್ಷರ್ ಪಟೇಲ್, ಶಿವಂ ಮಾವಿ / ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಅರ್ಷ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

ಶ್ರೀಲಂಕಾ ತಂಡ

ದನುಸಾ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಭಾನುಕ ರಾಜಪಕ್ಸೆ, ಚರಿತ ಅಸಲಂಕಾ, ಧನಂಜಯ್ ಡಿ ಸಿಲ್ವಾ, ವನಿಂದು ಹಸರಂಗ, ಚಾಮಿಕ ಕರುಣರತ್ನೆ, ಮಹಿಷ್ ತೀಕ್ಷಣ, ಕಸುನ್ ರಚಿತಾ, ದಿಲ್ಶನ್ ಮಧುಶಂಕ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Fri, 6 January 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ