AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Sri Lanka 3rd T20: ಮೂವರು ಸ್ಪಿನ್ನರ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

Team India Playing 11: ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.

India vs Sri Lanka 3rd T20: ಮೂವರು ಸ್ಪಿನ್ನರ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ
India vs Sri Lanka 3rd T20
TV9 Web
| Edited By: |

Updated on:Jul 29, 2021 | 7:38 PM

Share

ಕೊಲಂಬೋದ ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಣ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. 3 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಬಲಗೊಂಡಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ.

ಮೊದಲ ಪಂದ್ಯದಲ್ಲಿ 38 ರನ್​ಗಳ ಭರ್ಜರಿ ಜಯದೊಂದಿಗೆ ಶುಭಾರಂಭ ಮಾಡಿದ್ದ ಭಾರತ, 2ನೇ ಪಂದ್ಯದಲ್ಲಿ ವಿರೋಚಿತ ಹೋರಾಟದೊಂದಿಗೆ 4 ವಿಕೆಟ್​ಗಳ ಸೋಲನುಭವಿಸಿತು. ಇನ್ನು ಟೀಮ್ ಇಂಡಿಯಾ ಒಂದು ಬದಲಾವಣೆ ಮಾಡಲಾಗಿದ್ದು, ಗಾಯಗೊಂಡಿರುವ ನವದೀಪ್ ಸೈನಿ ಸ್ಥಾನದಲ್ಲಿ ಯುವ ವೇಗಿ ಸಂದೀಪ್ ವಾರಿಯರ್ ಪದಾರ್ಪಣೆ ಮಾಡಲಿದ್ದಾರೆ.

ಪ್ರಮುಖ ಆಟಗಾರ ಅಲಭ್ಯತೆಯ ನಡುವೆ ಟೀಮ್ ಇಂಡಿಯಾದಲ್ಲಿ ಯುವ ಆಟಗಾರರು ಸ್ಥಾನ ಪಡೆದಿದ್ದು, ಅದರಂತೆ ಆರಂಭಿಕರಾಗಿ ಶಿಖರ್ ಧವನ್ ಹಾಗೂ ರುತುರಾಜ್ ಗಾಯಕ್ವಾಡ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಇಂದು ಕೂಡ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಆಡಲಿದ್ದು, ಐದನೇ ಕ್ರಮಾಂಕದಲ್ಲಿ ನಿತೀಶ್ ರಾಣಾ ಬ್ಯಾಟ್ ಬೀಸಲಿದ್ದಾರೆ.

ಇನ್ನು ಬೌಲಿಂಗ್ ವಿಭಾಗವನ್ನು ಭುವನೇಶ್ವರ್ ಕುಮಾರ್ ಮುನ್ನಡೆಸಲಿದ್ದು, ಅವರಿಗೆ ಸಾಥ್ ನೀಡಲು ತಂಡದಲ್ಲಿ ಚೇತನ್ ಸಕರಿಯಾ, ಸಂದೀಪ್ ವಾರಿಯರ್ ಇದ್ದಾರೆ. ಹಾಗೆಯೇ ಇಂದು ಕೂಡ ಟೀಮ್ ಇಂಡಿಯಾ ಮೂವರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯುತ್ತಿರುವುದು ಮತ್ತೊಂದು ವಿಶೇಷ. ಅದರಂತೆ ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಹಾಗೂ ರಾಹುಲ್ ಚಹರ್ ಸ್ಪಿನ್ ಮೋಡಿ ಮಾಡಲಿದ್ದಾರೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ (Team India Playing 11) ಹೀಗಿದೆ: ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ಸಂದೀಪ್ ವಾರಿಯರ್, ಚೇತನ್ ಸಕರಿಯಾ, ರಾಹುಲ್ ಚಹರ್

ಟೀಮ್ ಇಂಡಿಯಾ ಆಲ್​ರೌಂಡರ್ ಕೃನಾಲ್ ಪಾಂಡ್ಯ ಅವರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿಅವರ ಜೊತೆ ನೇರ ಸಂಪರ್ಕ ಹೊಂದಿದ್ದ ಆಟಗಾರರನ್ನು ಐಸೋಲೇಷನ್​ಗೆ ಒಳಪಡಿಸಲಾಗಿದೆ. ಹೀಗಾಗಿ 2ನೇ ಹಾಗೂ 3ನೇ ಪಂದ್ಯದಲ್ಲಿ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಮನೀಶ್ ಪಾಂಡೆ ಮತ್ತು ಇಶಾನ್ ಕಿಶನ್ ಕಣಕ್ಕಿಳಿಯುತ್ತಿಲ್ಲ.

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(India vs Sri Lanka 3rd T20 Playing 11)

Published On - 7:36 pm, Thu, 29 July 21

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ