AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಸೂಪರ್ 4 ಸುತ್ತಿನ ಕೊನೆಯ ಪಂದ್ಯಕ್ಕೆ ಭಾರತ- ಶ್ರೀಲಂಕಾ ಸಜ್ಜು

India vs Sri Lanka Asia Cup Super 4 Clash: ಏಷ್ಯಾಕಪ್ 2025 ರ ಸೂಪರ್ 4 ಹಂತದ ಅಂತಿಮ ಪಂದ್ಯ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಸೆಪ್ಟೆಂಬರ್ 26 ರಂದು ದುಬೈನಲ್ಲಿ ನಡೆಯಲಿದೆ. ಭಾರತ ಈಗಾಗಲೇ ಫೈನಲ್‌ಗೆ ಅರ್ಹತೆ ಪಡೆದಿದ್ದರೆ, ಶ್ರೀಲಂಕಾ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಕೊನೆಗೊಳಿಸಲು ಪ್ರಯತ್ನಿಸುತ್ತದೆ. ಪಂದ್ಯದ ಟಾಸ್ ಸಂಜೆ 7:30 ಕ್ಕೆ ಮತ್ತು ಪಂದ್ಯವು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಸೋನಿ ಸ್ಪೋರ್ಟ್ಸ್ ಮತ್ತು ಸೋನಿ ಲಿವ್‌ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು.

Asia Cup 2025: ಸೂಪರ್ 4 ಸುತ್ತಿನ ಕೊನೆಯ ಪಂದ್ಯಕ್ಕೆ ಭಾರತ- ಶ್ರೀಲಂಕಾ ಸಜ್ಜು
Ind Vs Sl
ಪೃಥ್ವಿಶಂಕರ
|

Updated on:Sep 25, 2025 | 6:51 PM

Share

ಏಷ್ಯಾಕಪ್ 2025 ರ (Asia Cup 2025) ಸೂಪರ್ 4 ಸುತ್ತು ಮುಗಿಯುವ ಹಂತಕ್ಕೆ ಬಂದಿದೆ. ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಪಂದ್ಯದೊಂದಿಗೆ ಸೂಪರ್ 4 ಹಂತಕ್ಕೆ ತೆರೆ ಬೀಳಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಮೊದಲ ಮುಖಾಮುಖಿ ಇದಾಗಿದೆ . ಟೀಂ ಇಂಡಿಯಾ ಈಗಾಗಲೇ ಫೈನಲ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಏತನ್ಮಧ್ಯೆ, ಶ್ರೀಲಂಕಾ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಕೊನೆಗೊಳಿಸಲು ಮೈದಾನಕ್ಕೆ ಇಳಿಯಲಿದೆ. ಏಕೆಂದರೆ ಸೂಪರ್ 4 ಸುತ್ತಿನಲ್ಲಿ ಆಡಿದ ಮೊದಲೆರಡು ಪಂದ್ಯಗಳಲ್ಲಿ ಶ್ರೀಲಂಕಾ ಸೋಲನುಭವಿಸಿದ್ದು ಫೈನಲ್​ಗೇರಲು ಅರ್ಹತೆ ಕಳೆದುಕೊಂಡಿದೆ. ವಾಸ್ತವವಾಗಿ ಟಿ20 ಏಷ್ಯಾಕಪ್‌ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಶ್ರೀಲಂಕಾ ಪ್ರಶಸ್ತಿ ಗೆಲ್ಲುವ ಪ್ರಮುಖ ತಂಡಗಳಲ್ಲಿ ಒಂದಾಗಿತ್ತು. ಆದರೆ ತಂಡದ ಕಳಪೆ ಪ್ರದರ್ಶನ ಚಾಂಪಿಯನ್ ಪಟ್ಟವನ್ನು ಕಳೆದುಕೊಳ್ಳುವಂತೆ ಮಾಡಿತು.

ಭಾರತ ಮತ್ತು ಶ್ರೀಲಂಕಾ ನಡುವಿನ ಸೂಪರ್ 4 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಸೂಪರ್ 4 ಪಂದ್ಯ ಸೆಪ್ಟೆಂಬರ್ 26 ರಂದು ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಸೂಪರ್ 4 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಈ ಸೂಪರ್ 4 ಹಂತದ ಪಂದ್ಯವು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಸೂಪರ್ 4 ಪಂದ್ಯ ಯಾವಾಗ ಆರಂಭವಾಗಲಿದೆ?

ಈ ಪಂದ್ಯದ ಟಾಸ್ ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ನಡೆಯಲಿದೆ. ಪಂದ್ಯವು 30 ನಿಮಿಷಗಳ ನಂತರ, ರಾತ್ರಿ 8 ಗಂಟೆಗೆ ಪ್ರಾರಂಭವಾಗುತ್ತದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಸೂಪರ್ 4 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತದಲ್ಲಿ, ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಟೆನ್ 1, ಸೋನಿ ಸ್ಪೋರ್ಟ್ಸ್ ಟೆನ್ 1 ಎಚ್‌ಡಿ , ಸೋನಿ ಸ್ಪೋರ್ಟ್ಸ್ ಟೆನ್ 5 ಮತ್ತು ಸೋನಿ ಸ್ಪೋರ್ಟ್ಸ್ ಟೆನ್ 5 ಎಚ್‌ಡಿ ಟಿವಿ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಪಂದ್ಯವನ್ನು ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ನೇರ ಪ್ರಸಾರ ಮಾಡಲಾಗುತ್ತದೆ .

Asia Cup 2025: ಬಾಂಗ್ಲಾವನ್ನು ಮಣಿಸಿ ಶ್ರೀಲಂಕಾದ ದಾಖಲೆ ಮುರಿದ ಟೀಂ ಇಂಡಿಯಾ

ಉಭಯ ತಂಡಗಳು

ಶ್ರೀಲಂಕಾ ತಂಡ: ಚರಿತ್ ಅಸಲಂಕಾ (ನಾಯಕ), ಪಾತುಮ್ ನಿಸ್ಸಾಂಕ , ಕುಸಲ್ ಮೆಂಡಿಸ್ , ಕುಸಲ್ ಪೆರೇರಾ , ನುವಾನಿಡು ಫೆರ್ನಾಂಡೋ , ಕಮಿಂದು ಮೆಂಡಿಸ್ , ಕಮಿಲ್ ಮಿಶ್ರಾ , ದಸುನ್ ಶನಕ , ವನಿಂದು ಹಸರಂಗ , ದುನಿತ್ ವೆಲ್ಲಲಾಗೆ , ಚಾಮಿಕ ಕರುಣಾರತ್ನೆ , ಮಹೇಶ ತೀಕ್ಷಣ, ದುಷ್ಮಂತ ಚಮೀರ, ಬಿನೂರ ಫೆರ್ನಾಂಡೋ, ನುವಾನ್ ತುಷಾರ, ಮಥೀಶ ಪತಿರಣ, ಜನಿತ್ ಲಿಯಾನಗೆ.

ಟೀಮ್ ಇಂಡಿಯಾ : ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ ( ಉಪನಾಯಕ ) , ಸಂಜು ಸ್ಯಾಮ್ಸನ್ , ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:50 pm, Thu, 25 September 25

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?