AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕೊಹ್ಲಿ, ರೋಹಿತ್ ಇಲ್ಲದ ಲಂಕಾ ಪ್ರವಾಸಕ್ಕೆ ಧವನ್ ಅಲ್ಲ ಈ ಆಟಗಾರ ಕ್ಯಾಪ್ಟನ್ ಆಗಬೇಕಿತ್ತಂತೆ

ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದಾಗ ಒಂದಿಷ್ಟು ಮಾತುಗಳು ಕೇಳಿಬಂದಿದ್ದವು. ಇತ್ತ ಬಿಸಿಸಿಐ ಕೂಡ ಧವನ್​ರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಿದ್ದಕ್ಕೆ ಯಾವುದೇ ಕಾರಣವನ್ನೂ ತಿಳಿಸಿಲ್ಲ.

IND vs SL: ಕೊಹ್ಲಿ, ರೋಹಿತ್ ಇಲ್ಲದ ಲಂಕಾ ಪ್ರವಾಸಕ್ಕೆ ಧವನ್ ಅಲ್ಲ ಈ ಆಟಗಾರ ಕ್ಯಾಪ್ಟನ್ ಆಗಬೇಕಿತ್ತಂತೆ
Shikhar Dhawan
TV9 Web
| Updated By: Vinay Bhat|

Updated on: Jul 14, 2021 | 1:52 PM

Share

ಭಾರತ ಕ್ರಿಕೆಟ್ ತಂಡ (Indian Crcket Team) ಶ್ರೀಲಂಕಾ ವಿರುದ್ಧ ಏಕದಿನ ಮತ್ತು ಟಿ-20 ಸರಣಿಯನ್ನು ಆಡಲು ಲಂಕಾನ್ನರ ನಾಡಿಗೆ ತೆರಳಿದೆ. ಇದೇ ಜುಲೈ 18 ರಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ಟೀಮ್ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ (Virat Kohli), ಉಪ ನಾಯಕ ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಭಾರತದ ಯುವ ಪಡೆ ಶಿಖರ್ ಧವನ್ (Shikhar Dhawan) ನೇತೃತ್ವದಲ್ಲಿ ಸೆಣೆಸಾಟ ನಡೆಸಲಿದೆ.

ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದಾಗ ಒಂದಿಷ್ಟು ಮಾತುಗಳು ಕೇಳಿಬಂದಿದ್ದವು. ಇತ್ತ ಬಿಸಿಸಿಐ ಕೂಡ ಧವನ್​ರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಿದ್ದಕ್ಕೆ ಯಾವುದೇ ಕಾರಣವನ್ನೂ ತಿಳಿಸಿಲ್ಲ. ಸದ್ಯ ಇದೇ ವಿಚಾರ ಮತ್ತೆ ಸದ್ದು ಮಾಡುತ್ತಿದ್ದು, ಲಂಕಾ ಪ್ರವಾಸಕ್ಕೆ ಧವನ್ ಬದಲು ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕನಾಗಬೇಕಿತ್ತು ಎಂದು ಪಾಂಡ್ಯ ಅವರ ಬಾಲ್ಯದ ಕೋಚ್ ಜಿತೇಂದ್ರ ಸಿಂಗ್ ಹೇಳಿದ್ದಾರೆ.

“ಹಾರ್ದಿಕ್ ಪಾಂಡ್ಯರನ್ನು ಶ್ರೀಲಂಕಾ ಪ್ರವಾಸಕ್ಕೆ ನಾಯಕನಾಗಿ ಆಯ್ಕೆ ಮಾಡದಿರುವುದು ನಿಜಕ್ಕೂ ಆಶ್ಚರ್ಯ ಮೂಡಿಸಿತು. ಮುಂದಿನ 5-6 ವರ್ಷಗಳ ವರೆಗೆ ಹಾರ್ದಿಕ ಕ್ರಿಕೆಟ್ ಆಡುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ನಾಯಕನ ಸ್ಥಾನಕ್ಕೆ ಅವರು ಉತ್ತಮ ಆಯ್ಕೆ. ಅವರಲ್ಲಿ ಹೊಸ ಹೊಸ ಆಲೋಚನೆಗಳಿವೆ, ಸಾಕಷ್ಟು ಎನರ್ಜಿಯಿದೆ. ವೈಟ್ ಬಾಲ್ ಕ್ರಿಕೆಟ್​ಗೆ ಅವರನ್ನು ನಾಯಕನನ್ನಾಗಿ ಮಾಡುವುದು ಉತ್ತಮ ನಿರ್ಧಾರ” ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಆಲ್​ರೌಂಡರ್ ಹಾರ್ದಿಕ್ ಭಾರತ ಪರ 11 ಟೆಸ್ಟ್​, 60 ಏಕದಿನ ಮತ್ತು 48 ಟಿ-20 ಪಂದ್ಯಗಳನ್ನು ಆಡಿದ್ದಾರೆ. ಆದರೆ, ಕಳೆದ ಎರಡು ಐಪಿಎಲ್ ಆವೃತ್ತಿಯಿಂದ ಪಾಂಡ್ಯ ಸಿಂಗಲ್ ಓವರ್ ಬೌಲಿಂಗ್ ಮಾಡಲಿಲ್ಲ. ಭಾರತ ಪರವೂ ಖಾಯಂ ಬೌಲರ್​ ಆಗಿ ಆಟವಾಡಿಲ್ಲ.

ಸದ್ಯದ ಶ್ರೀಲಂಕಾ ಪ್ರವಾಸದಲ್ಲಿ ಧವನ್, ಭುವನೇಶ್ವರ್ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಅತಿ ಹೆಚ್ಚು ಅನುಭವವುಳ್ಳ ಆಟಗಾರರಾಗಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಗಾಗಿ ಆಂಗ್ಲರ ನಾಡಿಗೆ ತೆರಳಿದ್ದಾರೆ.

ಧವನ್ ನೇತೃತ್ವದ ಟೀಮ್ ಇಂಡಿಯಾ ಜುಲೈ 18 ರಿಂದ ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ತಮ್ಮ ಶ್ರೀಲಂಕಾ ಪ್ರವಾಸವನ್ನು ಆರಂಭಿಸಲಿದೆ. ನಂತರ ಜುಲೈ 25 ರಿಂದ ಜುಲೈ 29 ರವರೆಗೆ ಮೂರು ಪಂದ್ಯಗಳ ಟಿ 20 ಸರಣಿಯನ್ನು ಆಡಲಿದೆ. ಏಕದಿನ ಮತ್ತು ಟಿ 20 ಐ ಸರಣಿಯ ಎಲ್ಲಾ ಪಂದ್ಯಗಳು ಪ್ರಸಿದ್ಧ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ICC World Test Championship ಮುಂದಿನ ಆವೃತ್ತಿ ವೇಳಾಪಟ್ಟಿ ಪ್ರಕಟ: ಭಾರತದ ಮೊದಲ ಎದುರಾಳಿ ಈ ತಂಡ

Tokyo Olympic: ಒಲಿಂಪಿಕ್ಸ್​ನಿಂದ ಮರಳಿದ ಬಳಿಕ ನಾವು ಒಟ್ಟಿಗೆ ಐಸ್​ಕ್ರೀಂ ತಿನ್ನೊಣ: ಪಿವಿ ಸಿಂಧು ಜೊತೆ ಮೋದಿ ಮಾತುಕತೆ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?