AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಪಂದ್ಯ ಆರಂಭಕ್ಕೂ ಮುನ್ನ ಶ್ರೀಲಂಕಾದ ರಾಷ್ಟ್ರಗೀತೆ ಹಾಡಿದ ಹಾರ್ದಿಕ್ ಪಾಂಡ್ಯ: ವಿಡಿಯೋ ವೈರಲ್

Hardik Pandya: ನೆಟ್ಟಿಗರು ಹಾರ್ದಿಕ್ ಅವರ ಈ ನಡೆಯನ್ನು ಮೆಚ್ಚಿಕೊಂಡಿದ್ದಾರೆ. ದೇಶ ದೇಶಗಳ ಬಗ್ಗೆ ಪ್ರೀತಿ, ಗೌರವ ಇರಬೇಕು ಎಂದಿರುವ ಫ್ಯಾನ್ಸ್ ಪಾಂಡ್ಯ ನಡೆಗೆ ಸಲಾಂ ಎಂದಿದ್ದಾರೆ.

IND vs SL: ಪಂದ್ಯ ಆರಂಭಕ್ಕೂ ಮುನ್ನ ಶ್ರೀಲಂಕಾದ ರಾಷ್ಟ್ರಗೀತೆ ಹಾಡಿದ ಹಾರ್ದಿಕ್ ಪಾಂಡ್ಯ: ವಿಡಿಯೋ ವೈರಲ್
Hardik Pandya
TV9 Web
| Edited By: |

Updated on: Jul 26, 2021 | 8:30 AM

Share

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟೀಮ್ ಇಂಡಿಯಾ 38 ರನ್​ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ಇದರ ನಡುವೆ ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಾಮಾನ್ಯವಾಗಿ ಟಾಸ್ ಆದ ಬಳಿಕ ಇನ್ನಿಂಗ್ಸ್ ಆರಂಭಿಸುವ ಮುನ್ನ ಉಭಯ ತಂಡಗಳ ಆಟಗಾರರು ರಾಷ್ಟ್ರಗೀತೆ ಹಾಡಿ ಗೌರವ ಸೂಚಿಸಲಾಗುತ್ತದೆ. ಈ ವೇಳೆ ಶ್ರೀಲಂಕಾದ ರಾಷ್ಟ್ರಗೀತೆ ಪ್ರಸಾರವಾದಾಗ ಹಾರ್ದಿಕ್ ಪಾಂಡ್ಯ ಅವರು ಕೂಡ ಲಂಕಾ ಆಟಗಾರರ ಜೊತೆ ಧ್ವನಿಗೂಡಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನೆಟ್ಟಿಗರು ಹಾರ್ದಿಕ್ ಅವರ ಈ ನಡೆಯನ್ನು ಮೆಚ್ಚಿಕೊಂಡಿದ್ದಾರೆ. ದೇಶ ದೇಶಗಳ ಬಗ್ಗೆ ಪ್ರೀತಿ, ಗೌರವ ಇರಬೇಕು ಎಂದಿರುವ ಫ್ಯಾನ್ಸ್ ಪಾಂಡ್ಯ ನಡೆಗೆ ಸಲಾಂ ಎಂದಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಪೃಥ್ವಿ ಶಾ ವಿಕೆಟ್ ಕಳೆದುಕೊಂಡಿತು. ಬಳಿಕ ನಾಯಕ ಶಿಖರ್ ಧವನ್ (46) ಹಾಗೂ ಸಂಜು ಸ್ಯಾಮ್ಸನ್ (27) ಕೊಂಚ ರನ್ ಕಲೆಹಾಕಿದರು. ನಂತರದಲ್ಲಿ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ನಡೆಸಿ ಲಂಕಾ ಬೌಲರ್​​ಗಳ ಬೆವರಿಳಿಸಿದರು.

ಕೇವಲ 34 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್ ಬಾರಿಸಿದ ಸೂರ್ಯಕುಮಾರ್ 50 ರನ್​ಗೆ ಔಟ್ ಆದರು. ಹಾರ್ದಿಕ್ ಪಾಂಡ್ಯ 10 ಹಾಗೂ ಇಶಾನ್ ಕಿಶನ್ ಅಜೇಯ 20 ರನ್ ಬಾರಿಸಿದರು. ಭಾರತ ನಿಗದಿತ 20 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು.

ಸವಾಲಿನ ಗುರಿ ಬೆನ್ನಟ್ಟಿದ ಶ್ರೀಲಂಕಾ ಉತ್ತಮ ಆರಂಭ ಪಡೆದುಕೊಂಡಿತಾದರೂ ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತ ಕಂಡಿತು. ಭುವನೇಶ್ವರ್ ಕುಮಾರ್ ಬೌಲಿಂಗ್ ದಾಳಿಗೆ ಲಂಕಾ ಆಲೌಟ್ ಆಗಬೇಕಾಯಿತು. ಲಂಕಾ ಪರ ಚರಿತ್ ಅಸಲಂಕಾ 26 ಎಸೆತಗಳಲ್ಲಿ 3 ಬೌಂಡರಿ ಸಿಕ್ಸರ್ ಸಿಡಿಸಿ 44 ರನ್ ಬಾರಿಸಿದರೆ, ಆವಿಶ್ಕಾ ಫೆರ್ನಾಂಡೊ 26 ರನ್ ಗಳಿಸಿದರು.

ಅಂತಿಮವಾಗಿ ಶ್ರೀಲಂಕಾ 18.3 ಓವರ್​ನಲ್ಲಿ ಕೇವಲ 126 ರನ್​ಗೆ ಸರ್ವಪತನ ಕಂಡಿತು. ಭಾರತ ಪರ ಭುವನೇಶ್ವರ್ ಕುಮಾರ್ 4 ಹಾಗೂ ದೀಪಕ್ ಚಹಾರ್ 2 ವಿಕೆಟ್ ಕಿತ್ತರು. ಎರಡನೇ ಟಿ-20 ಪಂದ್ಯ ಮಂಗಳವಾರ ಜುಲೈ 27 ರಂದು ನಡೆಯಲಿದೆ.

Bhuvneshwar Kumar: ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಭುವನೇಶ್ವರ್ ಆಯ್ಕೆಯಾಗದಿರಲು ಇದುವೇ ಅಸಲಿ ಕಾರಣ

IPL 2021 RCB Schedule: ಕೊಹ್ಲಿ ಪಡೆಯ ಎದುರಾಳಿಗಳು ಯಾರು? ಇಲ್ಲಿದೆ RCBಯ ಸಂಪೂರ್ಣ ವೇಳಾಪಟ್ಟಿ

(India vs Sri lanka Hardik Pandya singing Sri Lankan national anthem during 1st T20I Video Viral)

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ