
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ತಂಡದ ಗೆಲುವಿನ ಓಟ ಮುಂದುವರೆದಿದೆ. ಆಡಿರುವ ಆರು ಪಂದ್ಯಗಳ ಪೈಕಿ ಆರರಲ್ಲೂ ಜಯ ಸಾಧಿಸಿ 12 ಅಂಕದೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ವಿಶೇಷ ಎಂದರೆ ಈ ಬಾರಿಯ ವಿಶ್ವಕಪ್ನಲ್ಲಿ ಒಂದೇ ಒಂದು ಸೋಲನ್ನು ಕಾಣದ ಏಕೈಕ ತಂಡ ಎಂದರೆ ಅದು ಟೀಮ್ ಇಂಡಿಯಾ. ಭಾನುವಾರ ಲಕ್ನೋದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ಭಾರತ 100 ರನ್ಗಳ ಜಯ ಸಾಧಿಸಿತು. ಈ ಮೂಲಕ ಟೀಮ್ ಇಂಡಿಯಾ ಬಹುತೇಕ ಸೆಮಿ ಫೈನಲ್ಗೆ ಪ್ರವೇಶಿಸಿದೆ. ಇನ್ನೊಂದು ಪಂದ್ಯ ಗೆದ್ದರೆ ಇದು ಖಚಿತವಾಗಲಿದೆ. ಹಾಗಾದರೆ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?.
ವಿಶ್ವಕಪ್ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?
ವಿಶ್ವಕಪ್ನಲ್ಲಿ ಭಾರತ ಮುಂದಿನ ಪಂದ್ಯವನ್ನು ಶ್ರೀಲಂಕಾ ವಿರುದ್ಧ ಆಡಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ನವೆಂಬರ್ 2 ರಂದು (ಗುರುವಾರ) ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
ಗೆದ್ದರೂ ಸಂತಸಗೊಳ್ಳದ ರೋಹಿತ್ ಶರ್ಮಾ: ಪೋಸ್ಟ್ ಮ್ಯಾಚ್ನಲ್ಲಿ ಏನು ಹೇಳಿದ್ರು ನೋಡಿ
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ಶ್ರೀಲಂಕಾ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ಶ್ರೀಲಂಕಾ: ಪಾತುಮ್ ನಿಸಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ/ವಿಕೆಟ್ ಕೀಪರ್) ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ್ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತಿಕ್ಷಣ, ಕಸುನ್ ರಜಿತಾ, ದುಷ್ಮಂತ ಚಮೀರಾ, ದಿಲ್ಶನ್ ಮಧುಶಂಕ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ