ಭಾರತ- ಲಂಕಾ ಫೈಟ್; ವಾಂಖೆಡೆ ಮೈದಾನದಲ್ಲಿ ಮರುಕಳಿಸುತ್ತಾ ಇತಿಹಾಸ? ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
IND vs SL, ICC World Cup 2023 Live Streaming: 2023ರ ವಿಶ್ವಕಪ್‌ನಲ್ಲಿ ಭಾರತದ ಏಳನೇ ಪಂದ್ಯ ಶ್ರೀಲಂಕಾ ವಿರುದ್ಧ ನಾಳೆ ಅಂದರೆ ನವೆಂಬರ್ 2 ರಂದು ನಡೆಯಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
2023ರ ವಿಶ್ವಕಪ್‌ನಲ್ಲಿ (ICC World Cup 2023) ಭಾರತದ ಏಳನೇ ಪಂದ್ಯ ಶ್ರೀಲಂಕಾ ವಿರುದ್ಧ (India vs Sri Lanka) ನಾಳೆ ಅಂದರೆ ನವೆಂಬರ್ 2 ರಂದು ನಡೆಯಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಇದೇ ಮೈದಾನದಲ್ಲಿ ಎಂಎಸ್ ಧೋನಿ (MS Dhoni) ನಾಯಕತ್ವದಲ್ಲಿ ಟೀಂ ಇಂಡಿಯಾ ಬರೋಬ್ಬರಿ 12 ವರ್ಷಗಳ ಹಿಂದೆ 2011 ರ ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ 28 ವರ್ಷಗಳ ನಂತರ ವಿಶ್ವಕಪ್ ಎತ್ತಿ ಹಿಡಿದಿತ್ತು. ಮತ್ತೊಮ್ಮೆ ಎರಡೂ ತಂಡಗಳು ಈ ಮೈದಾನದಲ್ಲಿ ಏಕದಿನ ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಲಿವೆ. ಆದರೆ 12 ವರ್ಷಗಳ ಹಿಂದಿನ ತಂಡದಷ್ಟು ಲಂಕಾ ತಂಡ ಬಲಿಷ್ಠವಾಗಿಲ್ಲ. ಹೀಗಾಗಿ ನಾಳಿನ ಪಂದ್ಯದಲ್ಲೂ ಟೀಂ ಇಂಡಿಯಾವೇ ಗೆಲುವಿನ ಫೆವರೇಟ್ ಎನಿಸಿಕೊಂಡಿದೆ.
2023ರ ವಿಶ್ವಕಪ್‌ನಲ್ಲಿ ರೋಹಿತ್ ಪಡೆಯ ಅಜೇಯ ಓಟ ಮುಂದುವರೆದಿದೆ. ಟೀಂ ಇಂಡಿಯಾ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 6ರಲ್ಲಿ ಜಯ ಸಾಧಿಸಿದೆ. ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳನ್ನು ಸೋಲಿಸಿದ ಭಾರತ ತಂಡ ಇದೀಗ ಮುಂಬೈ ತಲುಪಿದೆ. ಇದೀಗ ಶ್ರೀಲಂಕಾ ವಿರುದ್ಧವೂ ಗೆಲುವಿನ ಓಟ ಮುಂದುವರಿಸಲು ಭಾರತ ಬಯಸಿದೆ. ಮತ್ತೊಂದೆಡೆ, ಅಫ್ಘಾನಿಸ್ತಾನ ವಿರುದ್ಧ ಸೋತ ನಂತರ, ಶ್ರೀಲಂಕಾ ಮತ್ತೆ ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ರಯತ್ನಿಸಲಿದೆ. ಆದರೆ ಭಾರತದ ನೆಲದಲ್ಲಿ ಬಲಿಷ್ಠವಾಗಿ ಕಾಣುತ್ತಿರುವ ಟೀಂ ಇಂಡಿಯಾವನ್ನು ಮಣಿಸುವುದು ಸಿಂಹಳಿಯರಿಗೆ ಸುಲಭದ ಕೆಲಸವಲ್ಲ.
ವಾಂಖೆಡೆಯಲ್ಲಿ ಅನಾವರಣಗೊಳ್ಳುತ್ತಿರುವ ಸಚಿನ್ ತೆಂಡೂಲ್ಕರ್ ಪ್ರತಿಮೆಯ ವಿಶೇಷತೆಗಳೇನು ಗೊತ್ತಾ?
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲ್ಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ನವೆಂಬರ್ 2 ರ ಗುರುವಾರ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಪಂದ್ಯದ ಟಾಸ್ 1:30ಕ್ಕೆ ನಡೆಯಲ್ಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲ್ಲಿದೆ?
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯವನ್ನು ಎಲ್ಲಿ ವೀಕ್ಷಿಸಬೇಕು?
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಇರಲಿದೆ. ಇದರ ಹೊರತಾಗಿ, ನೀವು ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ