ಶ್ರೀಲಂಕಾ ವಿರುದ್ಧದ ಟಿ20 ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಮೊದಲ ಪಂದ್ಯದಲ್ಲಿ 43 ರನ್ಗಳ ಜಯ ಸಾಧಿಸಿದ್ದ ಭಾರತ ತಂಡವು, ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್ಗಳ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಸೂಪರ್ ಓವರ್ನಲ್ಲಿ ಗೆಲುವು ದಾಖಲಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.
ಇದೀಗ ಭಾರತ ತಂಡವು ಆಗಸ್ಟ್ 2 ರಿಂದ ಶುರುವಾಗಲಿರುವ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕಂಬ್ಯಾಕ್ ಮಾಡಲಿದ್ದಾರೆ. ಅಂದರೆ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರು ಯಾವುದೇ ಪಂದ್ಯವಾಡಿಲ್ಲ. ಇದೀಗ ಲಂಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಮತ್ತೆ ಮೈದಾನಕ್ಕೆ ಇಳಿಯಲು ರೆಡಿಯಾಗುತ್ತಿದ್ದಾರೆ.
ಇನ್ನು ಏಕದಿನ ವಿಶ್ವಕಪ್ 2023ರ ಬಳಿಕ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಕೂಡ ಈ ಸರಣಿಯ ಮೂಲಕ ಪುನರಾಗಮನ ಮಾಡುತ್ತಿರುವುದು ವಿಶೇಷ. ಅದರಂತೆ ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್ , ಖಲೀಲ್ ಅಹ್ಮದ್, ಹರ್ಷಿತ್ ರಾಣಾ.
ಇದನ್ನೂ ಓದಿ: IPL 2025: RCB ತಂಡದಿಂದ ಗ್ಲೆನ್ ಮ್ಯಾಕ್ಸ್ವೆಲ್ ಔಟ್?
ಶ್ರೀಲಂಕಾ ಏಕದಿನ ತಂಡ: ಚರಿತ್ ಅಸಲಂಕಾ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಕಮಿಂದು ಮೆಂಡಿಸ್, ಜೆನಿತ್ ಲಿಯಾಂಗೆ, ನಿಶಾನ್ ಮಧುಶಂಕ, ವನಿಂದು ಹಸರಂಗ, ದುನಿತ್ ವೆಲ್ಲಲಗೆ, ಚಾಮಿಕ ಕರುಣಾರತ್ನ, ಮಹೀಶ್ ತೀಕ್ಷಣ, ಅಕಿಲ ದನಂಜಯ, ದಿಲ್ಶಾನ್ ಮಧುಶಂಕ, ಮಥೀಶ ಪತಿರಾನ, ಅಸಿತ ಫೆರ್ನಾಂಡೋ.
Published On - 7:47 am, Wed, 31 July 24