IND vs SL ODI Series 2023: ಭಾರತ-ಶ್ರೀಲಂಕಾ ಏಕದಿನ ಸರಣಿ ವೇಳಾಪಟ್ಟಿ ಮತ್ತು ಉಭಯ ತಂಡಗಳು ಹೀಗಿವೆ

India vs Sri Lanka ODI Series Full Schedule: ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಗೌಹಾಟಿಯಲ್ಲಿ ನಡೆಯಲಿದ್ದು,  2ನೇ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನ ಆತಿಥ್ಯವಹಿಸಲಿದೆ.

IND vs SL ODI Series 2023: ಭಾರತ-ಶ್ರೀಲಂಕಾ ಏಕದಿನ ಸರಣಿ ವೇಳಾಪಟ್ಟಿ ಮತ್ತು ಉಭಯ ತಂಡಗಳು ಹೀಗಿವೆ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 08, 2023 | 9:57 PM

India vs Sri Lanka ODI Series 2023: ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇದೀಗ ಏಕದಿನ ಸರಣಿಗಾಗಿ ಸಜ್ಜಾಗುತ್ತಿದೆ. ಮೂರು ಪಂದ್ಯಗಳ ಈ ಸರಣಿಯು ಜನವರಿ 10 ರಿಂದ ಶುರುವಾಗಲಿದೆ.  ಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ಭಾರತ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ಜಸ್​ಪ್ರೀತ್ ಬುಮ್ರಾ ಈ ಸರಣಿಯ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ವಿಶೇಷ ಎಂದರೆ ಈ ಸರಣಿಯೊಂದಿಗೆ ಟೀಮ್ ಇಂಡಿಯಾದ ಏಕದಿನ ವಿಶ್ವಕಪ್​ ಅಭಿಯಾನ ಆರಂಭವಾಗಲಿದೆ. ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಪೂರ್ವಭಾವಿಯಾಗಿ ಭಾರತ ತಂಡವು ಒಟ್ಟು 35 ಪಂದ್ಯಗಳನ್ನು ಆಡಲಿದೆ. ಇದರ ಮೊದಲ ಭಾಗವಾಗಿ ಇದೀಗ ಲಂಕಾ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಹೀಗಾಗಿಯೇ 2023ರ ಮೊದಲ ಏಕದಿನ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಮಹತ್ವದೆನಿಸಿಕೊಂಡಿದೆ.

ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಗೌಹಾಟಿಯಲ್ಲಿ ನಡೆಯಲಿದ್ದು,  2ನೇ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನ ಆತಿಥ್ಯವಹಿಸಲಿದೆ. ಹಾಗೆಯೇ ಮೂರನೇ ಪಂದ್ಯವು ತಿರುವನಂತಪುರದ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆಯಲಿದೆ.

ಇನ್ನು ಟೀಮ್ ಇಂಡಿಯಾ ಏಕದಿನ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಹಿರಿಯ ಆಟಗಾರರ ಕಂಬ್ಯಾಕ್ ಹಿನ್ನೆಲೆಯಲ್ಲಿ ಟಿ20 ತಂಡದಲ್ಲಿದ್ದ ಕೆಲ ಆಟಗಾರರು ಏಕದಿನ ಸರಣಿಗೆ ಆಯ್ಕೆಯಾಗಿಲ್ಲ.

ಇದನ್ನೂ ಓದಿ
Image
Suryakumar Yadav: ರಾಹುಲ್ ದಾಖಲೆ ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸೂರ್ಯ
Image
Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Image
Virat Kohli – Rohit Sharma: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ-ರೋಹಿತ್​ಗಿಲ್ಲ ಚಾನ್ಸ್​?
Image
VIDEO: ಔಟಾ-ನಾಟೌಟಾ? ಹೊಸ ವಿವಾದಕ್ಕೆ ಕಾರಣವಾದ ವಿಚಿತ್ರ ಕ್ಯಾಚ್

ಅದರಂತೆ ಏಕದಿನ ತಂಡದಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ, ಶುಭ್​ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ಗಳಾಗಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಇದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಟೀಮ್ ಇಂಡಿಯಾದಲ್ಲಿದ್ದಾರೆ. ಅದೇ ರೀತಿ ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್ ಹಾಗೂ ಯುಜ್ವೇಂದ್ರ ಚಹಾಲ್ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲಿಂಗ್​ ವಿಭಾಗದಲ್ಲಿ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಹಾಗೂ ಅರ್ಷದೀಪ್ ಸಿಂಗ್ ಆಯ್ಕೆಯಾಗಿದ್ದಾರೆ.

ಒಟ್ಟಿನಲ್ಲಿ ಮುಂಬರುವ ಏಕದಿನ ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಬಿಸಿಸಿಐ ಬಲಿಷ್ಠ ಪಡೆಯನ್ನೇ ರೂಪಿಸಿದ್ದು, ಈ ತಂಡವು ಶ್ರೀಲಂಕಾ ವಿರುದ್ಧ ಹೇಗೆ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಏಕದಿನ ಸರಣಿ ವೇಳಾಪಟ್ಟಿ:

  • ಜನವರಿ 10: ಮೊದಲ ಏಕದಿನ ಪಂದ್ಯ (ಸ್ಥಳ- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗೌಹಾಟಿ)
  • ಜನವರಿ 12: ಎರಡನೇ ಏಕದಿನ ಪಂದ್ಯ (ಸ್ಥಳ- ಈಡನ್ ಗಾರ್ಡನ್ಸ್, ಕೋಲ್ಕತ್ತಾ)
  • ಜನವರಿ 15: ಮೂರನೇ ಏಕದಿನ ಪಂದ್ಯ (ಗ್ರೀನ್‌ಫೀಲ್ಡ್ ಸ್ಟೇಡಿಯಂ, ತಿರುವನಂತಪುರಂ)

ಶ್ರೀಲಂಕಾ ಏಕದಿನ ತಂಡ:

ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೊ, ಸಧೀರ ಸಮರವಿಕ್ರಮ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕಾ, ಧನಂಜಯ್ ಡಿಸಿಲ್ವ, ವನಿಂದು ಹಸರಂಗ, ಮಹೀಶ್ ತೀಕ್ಷಣ , ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ದಿಲ್ಶಾನ್ ಮಧುಶಂಕ, ಕಸುನ್ ರಜಿತ, ನುವಾನಿಡು ಫೆರ್ನಾಂಡೋ, ದುನಿತ್ ವೆಲಾಲಗೆ, ಪ್ರಮೋದ್ ಮದುಶನ್.

ಟೀಮ್ ಇಂಡಿಯಾ ಏಕದಿನ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

Published On - 7:30 pm, Sun, 8 January 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ