AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಟಾಸ್ ಗೆದ್ದ ಲಂಕಾ, ಭಾರತ ಮೊದಲು ಬ್ಯಾಟಿಂಗ್; ಉಭಯ ತಂಡಗಳು ಹೀಗಿವೆ

India vs Sri Lanka Playing XI: ಟೀಂ ಇಂಡಿಯಾ ಇದೀಗ ಮತ್ತೊಮ್ಮೆ ಲಂಕಾ ತಂಡವನ್ನು ಮಣಿಸಿ ಅಧಿಕೃತವಾಗಿ ಸೆಮಿಫೈನಲ್​ಗೆ ಟಿಕೆಟ್ ಖಚಿತಪಡಿಸಿಕೊಳ್ಳುವ ತವಕದಲ್ಲಿದೆ. ಇನ್ನೊಂದೆಡೆ ಈ ಬಾರಿಯ ವಿಶ್ವಕಪ್​ನಿಂದ ಭಾಗಶಃ ಹೊರಬಿದ್ದಿರುವ ಶ್ರೀಲಂಕಾ ತಂಡ ಬಲಿಷ್ಠ ಭಾರತವನ್ನು ಸೋಲಿಸಲು ಪ್ರಯತ್ನಿಸುತ್ತಿದೆ.

IND vs SL: ಟಾಸ್ ಗೆದ್ದ ಲಂಕಾ, ಭಾರತ ಮೊದಲು ಬ್ಯಾಟಿಂಗ್; ಉಭಯ ತಂಡಗಳು ಹೀಗಿವೆ
ಭಾರತ- ಶ್ರೀಲಂಕಾ
ಪೃಥ್ವಿಶಂಕರ
|

Updated on:Nov 02, 2023 | 2:50 PM

Share

2011ರ ಏಕದಿನ ವಿಶ್ವಕಪ್​ನ ಫೈನಲಿಸ್ಟ್ ತಂಡಗಳಾದ ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳು ಇಂದು 2023ರ ವಿಶ್ವಕಪ್‌ನಲ್ಲಿ (ICC World Cup 2023) ಅದೇ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿವೆ. ಅಂದು ನಡೆದ ಫೈನಲ್ ಪಂದ್ಯದಲ್ಲಿ ಲಂಕಾ ತಂಡವನ್ನು ಮಣಿಸಿ, ಬರೋಬ್ಬರಿ 28 ವರ್ಷಗಳ ನಂತರ ವಿಶ್ವಕಪ್ ಎತ್ತಿ ಹಿಡಿದಿದ್ದ ಟೀಂ ಇಂಡಿಯಾ (Team India) ಇದೀಗ ಮತ್ತೊಮ್ಮೆ ಲಂಕಾ ತಂಡವನ್ನು ಮಣಿಸಿ ಅಧಿಕೃತವಾಗಿ ಸೆಮಿಫೈನಲ್​ಗೆ ಟಿಕೆಟ್ ಖಚಿತಪಡಿಸಿಕೊಳ್ಳುವ ತವಕದಲ್ಲಿದೆ. ಇನ್ನೊಂದೆಡೆ ಈ ಬಾರಿಯ ವಿಶ್ವಕಪ್​ನಿಂದ ಭಾಗಶಃ ಹೊರಬಿದ್ದಿರುವ ಶ್ರೀಲಂಕಾ ತಂಡ ಬಲಿಷ್ಠ ಭಾರತವನ್ನು ಸೋಲಿಸಲು ಪ್ರಯತ್ನಿಸುತ್ತಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಶ್ರೀಲಂಕಾ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಜೊತೆಗೆ, ಎರಡೂ ತಂಡಗಳು ತಮ್ಮ ತಮ್ಮ ಪ್ಲೇಯಿಂಗ್ ಇಲೆವೆನ್ ಅನ್ನು ಸಹ ಪ್ರಕಟಿಸಿವೆ.

ಲಂಕಾ ತಂಡದಲ್ಲಿ ಬದಲಾವಣೆ

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿರುವ ಶ್ರೀಲಂಕಾ ತಂಡ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಒಂದು ಬದಲಾವಣೆ ಮಾಡಿದೆ. ಆಲ್​ರೌಂಡರ್ ಅಕಿಲಾ ದನಂಜಯ ಬದಲು ದುಸಾನ್ ಹೇಮಂತ ಅವರನ್ನು ಕಣಕ್ಕಿಳಿಸಿದೆ. ಮತ್ತೊಂದೆಡೆ, ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮುಂಬೈನ ಪಿಚ್‌ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುವುದರಿಂದ ಟೀಂ ಇಂಡಿಯಾದಲ್ಲಿ ಒಬ್ಬ ಅಧಿಕ ಸ್ಪಿನ್ನರ್ ಇಂದು ಕಣಕ್ಕಿಳಿಯಲಿದ್ದಾರೆ ಎಂದು ಎಲ್ಲರೂ ಊಹಿಸಿದ್ದರು. ಆದರೆ ರೋಹಿತ್ ಶರ್ಮಾ ತಮ್ಮ ಗೆಲುವಿನ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಮಾಡುವ ಮನಸ್ಸು ಮಾಡಿಲ್ಲ.

ಉಭಯ ತಂಡಗಳು

ಭಾರತದ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ದುಸಾನ್ ಹೇಮಂತ, ಏಂಜೆಲೊ ಮ್ಯಾಥ್ಯೂಸ್, ದುಷ್ಮಂತ ಚಮೀರ, ಮಹಿಷ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Thu, 2 November 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್