
2011ರ ಏಕದಿನ ವಿಶ್ವಕಪ್ನ ಫೈನಲಿಸ್ಟ್ ತಂಡಗಳಾದ ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳು ಇಂದು 2023ರ ವಿಶ್ವಕಪ್‌ನಲ್ಲಿ (ICC World Cup 2023) ಅದೇ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿವೆ. ಅಂದು ನಡೆದ ಫೈನಲ್ ಪಂದ್ಯದಲ್ಲಿ ಲಂಕಾ ತಂಡವನ್ನು ಮಣಿಸಿ, ಬರೋಬ್ಬರಿ 28 ವರ್ಷಗಳ ನಂತರ ವಿಶ್ವಕಪ್ ಎತ್ತಿ ಹಿಡಿದಿದ್ದ ಟೀಂ ಇಂಡಿಯಾ (Team India) ಇದೀಗ ಮತ್ತೊಮ್ಮೆ ಲಂಕಾ ತಂಡವನ್ನು ಮಣಿಸಿ ಅಧಿಕೃತವಾಗಿ ಸೆಮಿಫೈನಲ್ಗೆ ಟಿಕೆಟ್ ಖಚಿತಪಡಿಸಿಕೊಳ್ಳುವ ತವಕದಲ್ಲಿದೆ. ಇನ್ನೊಂದೆಡೆ ಈ ಬಾರಿಯ ವಿಶ್ವಕಪ್ನಿಂದ ಭಾಗಶಃ ಹೊರಬಿದ್ದಿರುವ ಶ್ರೀಲಂಕಾ ತಂಡ ಬಲಿಷ್ಠ ಭಾರತವನ್ನು ಸೋಲಿಸಲು ಪ್ರಯತ್ನಿಸುತ್ತಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಶ್ರೀಲಂಕಾ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಜೊತೆಗೆ, ಎರಡೂ ತಂಡಗಳು ತಮ್ಮ ತಮ್ಮ ಪ್ಲೇಯಿಂಗ್ ಇಲೆವೆನ್ ಅನ್ನು ಸಹ ಪ್ರಕಟಿಸಿವೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿರುವ ಶ್ರೀಲಂಕಾ ತಂಡ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಒಂದು ಬದಲಾವಣೆ ಮಾಡಿದೆ. ಆಲ್ರೌಂಡರ್ ಅಕಿಲಾ ದನಂಜಯ ಬದಲು ದುಸಾನ್ ಹೇಮಂತ ಅವರನ್ನು ಕಣಕ್ಕಿಳಿಸಿದೆ. ಮತ್ತೊಂದೆಡೆ, ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮುಂಬೈನ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುವುದರಿಂದ ಟೀಂ ಇಂಡಿಯಾದಲ್ಲಿ ಒಬ್ಬ ಅಧಿಕ ಸ್ಪಿನ್ನರ್ ಇಂದು ಕಣಕ್ಕಿಳಿಯಲಿದ್ದಾರೆ ಎಂದು ಎಲ್ಲರೂ ಊಹಿಸಿದ್ದರು. ಆದರೆ ರೋಹಿತ್ ಶರ್ಮಾ ತಮ್ಮ ಗೆಲುವಿನ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಮಾಡುವ ಮನಸ್ಸು ಮಾಡಿಲ್ಲ.
ಭಾರತದ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
🚨 Toss and Team Update 🚨
Sri Lanka win the toss and elect to bowl first.
A look at #TeamIndia‘s Playing XI 👌👌
Follow the match ▶️ https://t.co/rKxnidWn0v#CWC23 | #MenInBlue | #INDvSL pic.twitter.com/aI5l9xm4p4
— BCCI (@BCCI) November 2, 2023
ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ದುಸಾನ್ ಹೇಮಂತ, ಏಂಜೆಲೊ ಮ್ಯಾಥ್ಯೂಸ್, ದುಷ್ಮಂತ ಚಮೀರ, ಮಹಿಷ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:14 pm, Thu, 2 November 23