IND vs SL: ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಶ್ರೀಲಂಕಾ ಇಲೆವೆನ್ ತಂಡ ಪ್ರಕಟ

India vs Sri Lanka Practice Match: ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ, ಆಗಸ್ಟ್ 7 ರಿಂದ ಕೊಲಂಬೊದಲ್ಲಿ ಟೀಂ ಇಂಡಿಯಾ ಮೂರು ದಿನಗಳ ಅಭ್ಯಾಸ ಪಂದ್ಯ ಆಡಲಿದೆ. ಈ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ಇಲೆವೆನ್ ತಂಡವನ್ನು ಎದುರಿಸಲಿದ್ದು, ಇದೀಗ ಸೋನಲ್ ದಿನುಷಾ ನಾಯಕತ್ವದ ಶ್ರೀಲಂಕಾ ಇಲೆವೆನ್ ತಂಡವನ್ನು ಪ್ರಕಟಿಸಲಾಗಿದೆ. ನಿಶಾನ್ ಮದುಷ್ಕ, ಲಹಿರು ಕುಮಾರರಂತಹ ಪ್ರಮುಖ ಆಟಗಾರರು ತಂಡದಲ್ಲಿದ್ದಾರೆ.

IND vs SL: ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಶ್ರೀಲಂಕಾ ಇಲೆವೆನ್ ತಂಡ ಪ್ರಕಟ
Ind Vs Sl

Updated on: Aug 06, 2026 | 10:39 PM

ಆಗಸ್ಟ್ 15 ರಿಂದ ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ತಂಡ ಮೂರು ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ಅಭ್ಯಾಸ ಪಂದ್ಯ ಆಗಸ್ಟ್ 7 ರಿಂದ ಅಂದರೆ ನಾಳೆಯಿಂದ ಕೊಲಂಬೊದ NCC ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಈ ಪಂದ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ಇಲೆವೆನ್ ತಂಡವನ್ನು ಎದುರಿಸಲಿದೆ. ಇದೀಗ ಅಭ್ಯಾಸ ಪಂದ್ಯಕ್ಕೆ ಶ್ರೀಲಂಕಾ ಇಲೆವೆನ್ ತಂಡವನ್ನು ಪ್ರಕಟಿಸಲಾಗಿದೆ.

ಶ್ರೀಲಂಕಾ ಇಲೆವೆನ್ ತಂಡ ಪ್ರಕಟ

ಶ್ರೀಲಂಕಾ ಕ್ರಿಕೆಟ್ ಇಲೆವೆನ್ ತಂಡದ ನಾಯಕತ್ವವನ್ನು 25 ವರ್ಷದ ಸೋನಲ್ ದಿನುಷಾ ಅವರಿಗೆ ವಹಿಸಲಾಗಿದೆ. ಕಳೆದ ಜೂನ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ತವರು ಟೆಸ್ಟ್ ಸರಣಿಯಲ್ಲಿ ದಿನುಷಾ ಶ್ರೀಲಂಕಾ ಪರ ಪಾದಾರ್ಪಣೆ ಮಾಡಿದ್ದರು. ಮೂರು ಟೆಸ್ಟ್‌ಗಳಲ್ಲಿ 46.50 ರ ಸರಾಸರಿಯಲ್ಲಿ ರನ್ ಗಳಿಸಿದ ದಿನುಷಾ ಬೌಲಿಂಗ್​ನಲ್ಲೂ ಆರು ವಿಕೆಟ್‌ಗಳನ್ನು ಕಬಳಿಸಿದ್ದರು.

ಹಾಗೆಯೇ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಶ್ರೀಲಂಕಾ ತಂಡದ ಭಾಗವಾಗಿದ್ದ ನಿಶಾನ್ ಮದುಷ್ಕ ಕೂಡ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸಲಿದ್ದಾರೆ. ನಿಶಾನ್ ಮದುಷ್ಕ ತಮ್ಮ ಮೂರು ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಎಂಟು ಏಕದಿನ ಮತ್ತು 12 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇವರ ಜೊತೆಗೆ ವೇಗದ ಬೌಲರ್‌ಗಳಾದ ಲಹಿರು ಕುಮಾರ್, ವಿಶ್ವ ಫೆರ್ನಾಂಡೊ ಮತ್ತು ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ರಮೇಶ್ ಮೆಂಡಿಸ್ ಕೂಡ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ತಂಡದ ಭಾಗವಾಗಿದ್ದಾರೆ.

IND vs SL: ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಟೀಂ ಇಂಡಿಯಾಕ್ಕಾಗುವ ಲಾಭವೇನು?

ಉಭಯ ತಂಡಗಳು

ಶ್ರೀಲಂಕಾ ಕ್ರಿಕೆಟ್ ಇಲೆವೆನ್ ತಂಡ: ನಿಶಾನ್ ಮದುಷ್ಕ, ರವಿಂದು ರಶಾಂತ, ಪಸಿಂದು ಸೂರಿಯಬಂಡಾರ, ಪವನ್ ರತ್ನಾಯಕೆ, ಅಹಾನ್ ವಿಕ್ರಮಸಿಂಘೆ, ಸೋನಾಲ್ ದಿನುಶಾ (ನಾಯಕ), ಅಂಜಲ ಬಂಡಾರ (ವಿಕೆಟ್ ಕೀಪರ್), ನಿಪುನ್ ದನಂಜಯ, ಲಹಿರು ಕುಮಾರ, ವಿಶ್ವ ಫೆರ್ನಾಂಡೋ, ಅಸಂಕ ಮನೋಜ್, ಇಸಿತಾ ವಿಜೆಸುಂದರ, ರಮೇಶ್ ಮೆಂಡಿಸ್, ಕೇಸರ ನುವಂತ, ದಿಲುಂ ಸುದೀರ.

ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಾಯಿ ಸುದರ್ಶನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us