IND vs SL: ಮೊಹಾಲಿ ಮೈದಾನದಲ್ಲಿ ವಿಶ್ವ ದಾಖಲೆ; ಕಪಿಲ್ ದೇವ್ ದಾಖಲೆ ಮುರಿದ ಅಶ್ವಿನ್!

R Ashwin: ಫಾಲೋ-ಆನ್ ನಂತರ ಶ್ರೀಲಂಕಾದ ಎರಡನೇ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಮೂರು ವಿಕೆಟ್ ಪಡೆದ ತಕ್ಷಣ, ಅವರು ಟೆಸ್ಟ್‌ನಲ್ಲಿ ಭಾರತದ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಈ ಸಾಧನೆಯೊಂದಿಗೆ, ಅಶ್ವಿನ್ ವಿಶ್ವ ಚಾಂಪಿಯನ್ ನಾಯಕ ಮತ್ತು ಅನುಭವಿ ಆಟಗಾರ ಕಪಿಲ್ ದೇವ್ ಅವರನ್ನು ಹಿಂದಿಕ್ಕಿದ್ದಾರೆ.

IND vs SL: ಮೊಹಾಲಿ ಮೈದಾನದಲ್ಲಿ ವಿಶ್ವ ದಾಖಲೆ; ಕಪಿಲ್ ದೇವ್ ದಾಖಲೆ ಮುರಿದ ಅಶ್ವಿನ್!
ಆರ್​. ಅಶ್ವಿನ್
Follow us
TV9 Web
| Updated By: ಪೃಥ್ವಿಶಂಕರ

Updated on:Mar 06, 2022 | 3:11 PM

ಮೊಹಾಲಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ ಬೌಲರ್ ಆರ್ ಅಶ್ವಿನ್ (R Ashwin) ದೊಡ್ಡ ದಾಖಲೆ ಮಾಡಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಎರಡು ವಿಕೆಟ್ ಪಡೆದರು. ಫಾಲೋ-ಆನ್ ನಂತರ ಶ್ರೀಲಂಕಾದ ಎರಡನೇ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಮೂರು ವಿಕೆಟ್ ಪಡೆದ ತಕ್ಷಣ, ಅವರು ಟೆಸ್ಟ್‌ನಲ್ಲಿ ಭಾರತದ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಈ ಸಾಧನೆಯೊಂದಿಗೆ, ಅಶ್ವಿನ್ ವಿಶ್ವ ಚಾಂಪಿಯನ್ ನಾಯಕ ಮತ್ತು ಅನುಭವಿ ಆಟಗಾರ ಕಪಿಲ್ ದೇವ್ ಅವರನ್ನು ಹಿಂದಿಕ್ಕಿದ್ದಾರೆ.

ಕುಂಬ್ಳೆ 132 ಪಂದ್ಯಗಳಲ್ಲಿ 619 ವಿಕೆಟ್ ಪಡೆದಿದ್ದಾರೆ. ಈ ಅವಧಿಯಲ್ಲಿ ಅವರು 8 ಬಾರಿ ಹತ್ತು ವಿಕೆಟ್ ಪಡೆದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ ಕುಂಬ್ಳೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ, ಕಪಿಲ್ ದೇವ್ 131 ಪಂದ್ಯಗಳಲ್ಲಿ 434 ವಿಕೆಟ್ ಪಡೆದಿದ್ದಾರೆ. ಅವರು ವಿಶ್ವ ಕ್ರಿಕೆಟ್‌ನಲ್ಲಿ 9ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಕಪಿಲ್ ದೇವ್ ಅವರನ್ನು ಹಿಂದಿಕ್ಕಿ ಅಶ್ವಿನ್ ಈಗ ಎಂಟನೇ ಸ್ಥಾನಕ್ಕೆ ಏರಿದ್ದಾರೆ.

ಮೊದಲು ರಿಚರ್ಡ್ ಹ್ಯಾಡ್ಲೀ ರೆಕಾರ್ಡ್​ ಬ್ರೇಕ್ ಶ್ರೀಲಂಕಾದ ಆರಂಭಿಕ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ತಿರಿಮನ್ನೆ ಮತ್ತು ಧನಂಜಯ್ ಡಿ ಸಿಲ್ವಾ ಅವರ ವಿಕೆಟ್‌ಗಳನ್ನು ಪಡೆದರು. ಈ ಟೆಸ್ಟ್‌ಗೂ ಮುನ್ನ ಅಶ್ವಿನ್ 430 ವಿಕೆಟ್‌ಗಳನ್ನು ಪಡೆದಿದ್ದರು. ಮೊಹಾಲಿಯಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದ ನಂತರ, ಅವರು ನ್ಯೂಜಿಲೆಂಡ್‌ನ ದಂತಕಥೆ ರಿಚರ್ಡ್ ಹ್ಯಾಡ್ಲಿಯವರನ್ನು ಹಿಂದಿಕ್ಕಿದ್ದರು.ಹ್ಯಾಡ್ಲಿಯವರು ತಮ್ಮ ಹೆಸರಿಗೆ 432 ವಿಕೆಟ್‌ಗಳನ್ನು ಹೊಂದಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಮತ್ತೊಮ್ಮೆ ತಿರಿಮನೆಯನ್ನು ಬಲಿಪಶು ಮಾಡಿದರು. ಇದಾದ ಬಳಿಕ ಪಟುಮ್ ನಿಸಂಕಾ ಅವರನ್ನು ಔಟ್ ಮಾಡುವ ಮೂಲಕ ಕಪಿಲ್ ದೇವ್ ಅವರನ್ನು ಸರಿಗಟ್ಟಿದರು.

ಕಪಿಲ್ ದೇವ್ ದಾಖಲೆ ಅಶ್ವಿನ್ ಪಾಲು ಶ್ರೀಲಂಕಾದ ಆರಂಭಿಕ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ತಿರಿಮನ್ನೆ ಮತ್ತು ಧನಂಜಯ್ ಡಿ ಸಿಲ್ವಾ ಅವರ ವಿಕೆಟ್‌ಗಳನ್ನು ಪಡೆದರು. ಎರಡನೇ ಇನ್ನಿಂಗ್ಸ್‌ನಲ್ಲಿ ಮತ್ತೊಮ್ಮೆ ತಿರಿಮನೆಯನ್ನು ಬಲಿಪಶು ಮಾಡಿದರು. ಇದಾದ ಬಳಿಕ ಪಟುಮ್ ನಿಸಂಕಾ ಅವರನ್ನು ಔಟ್ ಮಾಡುವ ಮೂಲಕ ಕಪಿಲ್ ದೇವ್ ಅವರನ್ನು ಸರಿಗಟ್ಟಿದರು. 35ನೇ ಓವರ್‌ನಲ್ಲಿ ಚರಿತ್ ಅಸ್ಲಂಕಾ, ಅಶ್ವಿನ್ ಎಸೆತದಲ್ಲಿ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದರು. ಈ ವಿಕೆಟ್‌ನೊಂದಿಗೆ ಅಶ್ವಿನ್ ತಮ್ಮ 435 ಬೇಟೆಗಳನ್ನು ಪೂರ್ಣಗೊಳಿಸಿದರು. ಈ ವಿಕೆಟ್ ಜೊತೆಗೆ ಅಶ್ವಿನ್ ಕಪಿಲ್ ದೇವ್‌ ಅವರನ್ನು ಹಿಂದಿಕ್ಕಿದರು. ಕಪಿಲ್ ದೇವ್ 131 ಟೆಸ್ಟ್ ಪಂದ್ಯಗಳಲ್ಲಿ 434 ವಿಕೆಟ್ ಪಡೆದಿದ್ದಾರೆ. ಅದೇ ಸಮಯದಲ್ಲಿ, ಆರ್ ಅಶ್ವಿನ್ ಕೇವಲ 85 ನೇ ಟೆಸ್ಟ್ನಲ್ಲಿ ಈ ಸಾಧನೆ ಮಾಡಿದ್ದಾರೆ. ಅಶ್ವಿನ್ ಇದುವರೆಗೆ 30 ಬಾರಿ 5 ಮತ್ತು 7 ಬಾರಿ 10 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ:IND vs SL: ಮೊಹಾಲಿ ಟೆಸ್ಟ್​ನಲ್ಲಿ ಕಿವೀಸ್ ದಂತಕಥೆ ಹ್ಯಾಡ್ಲಿ ದಾಖಲೆ ಮುರಿದ ಅಶ್ವಿನ್!

Published On - 3:05 pm, Sun, 6 March 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್