Ravindra Jadeja: ದಾಖಲೆ ಮೇಲೆ ದಾಖಲೆ ಬರೆದ ರಾಕ್ಸ್ಟಾರ್ ಜಡೇಜಾ..!
India vs Sri Lanka: ಈ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿರುವ ಟೀಮ್ ಇಂಡಿಯಾ ಜಡೇಜಾ ಅವರ ಭರ್ಜರಿ ಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 574 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ.
ಮೊಹಾಲಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ (India vs Sri Lanka 1st Test) ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಹಲವು ದಾಖಲೆಗಳನ್ನು ಕೂಡ ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಅಂತರಾಷ್ಟ್ರೀಯ ವೃತ್ತಿ ಕ್ರಿಕೆಟ್‌ನಲ್ಲಿ ಜಡೇಜಾ 5 ಸಾವಿರ ರನ್ ಪೂರೈಸಿದ್ದಾರೆ. ಮತ್ತೊಂದೆಡೆ ಜಡೇಜಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಕಪಿಲ್ ದೇವ್ ಬಳಿಕ 5 ಸಾವಿರ ರನ್ ಹಾಗೂ 400 ಕ್ಕೂ ಅಧಿಕ ವಿಕೆಟ್ ಪಡೆದ ಭಾರತದ 2ನೇ ಆಟಗಾರ ಎಂಬ ವಿಶೇಷ ದಾಖಲೆಯನ್ನು ಜಡೇಜಾ ನಿರ್ಮಿಸಿದ್ದಾರೆ.
33ರ ಹರೆಯದ ರವೀಂದ್ರ ಜಡೇಜಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡನೇ ಶತಕವಾಗಿದೆ. ಈ ಪಂದ್ಯದ ಮೊದಲು, ಅವರು 57 ಟೆಸ್ಟ್‌ಗಳ 84 ಇನ್ನಿಂಗ್ಸ್‌ಗಳಲ್ಲಿ 34 ರ ಸರಾಸರಿಯಲ್ಲಿ 2195 ರನ್ ಗಳಿಸಿದ್ದರು. ಒಂದು ಶತಕ ಮತ್ತು 17 ಅರ್ಧಶತಕಗಳನ್ನು ಬಾರಿಸಿದ್ದರು. ಜೊತೆಗೆ 232 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇನ್ನು 113 ಏಕದಿನ ಇನ್ನಿಂಗ್ಸ್‌ಗಳಲ್ಲಿ, ಅವರು 33 ರ ಸರಾಸರಿಯಲ್ಲಿ 2411 ರನ್ ಗಳಿಸಿದ್ದರು. ಈ ವೇಳೆ 13 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೇ ವೇಳೆ 188 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇನ್ನು ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 326 ರನ್ ಹಾಗೂ 48 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.
ಇದೀಗ ಶ್ರೀಲಂಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ 228 ಎಸೆತಗಳಲ್ಲಿ 17 ಬೌಂಡರಿ 3 ಸಿಕ್ಸರ್ ಒಳಗೊಂಡಂತೆ ಅಜೇಯ 175 ರನ್ ಬಾರಿಸಿದ್ದಾರೆ. ಈ ಮೂಲಕ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಟೀಮ್ ಇಂಡಿಯಾ ಪರ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ರವಿ ಜಡೇಜಾ ಪಾತ್ರರಾಗಿದ್ದಾರೆ. ಈ ಹಿಂದೆ ಈ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿತ್ತು. ಕಪಿಲ್ ದೇವ್ 1986 ರಲ್ಲಿ ಶ್ರೀಲಂಕಾ ವಿರುದ್ದವೇ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 163 ರನ್ ಬಾರಿಸಿದ್ದು ದಾಖಲೆಯಾಗಿತ್ತು. ಇದೀಗ ಅಜೇಯ 175 ರನ್ ಬಾರಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿರುವ ಟೀಮ್ ಇಂಡಿಯಾ ಜಡೇಜಾ ಅವರ ಭರ್ಜರಿ ಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 574 ರನ್ಗಳಿಸಿ ಡಿಕ್ಲೇರ್ ಘೋಷಿಸಿದೆ.
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(India vs Sri Lanka: Ravindra Jadeja breaks Kapil Dev’s record)