AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Sri lanka: ಅವಿಷ್ಕಾ, ಚರಿತ್ ಅರ್ಧಶತಕ: ಟೀಮ್ ಇಂಡಿಯಾಗೆ ಸ್ಪರ್ಧಾತ್ಮಕ ಸವಾಲು ನೀಡಿದ ಶ್ರೀಲಂಕಾ

ಭಾರತ (ಪ್ಲೇಯಿಂಗ್ ಇಲೆವೆನ್): ಪೃಥ್ವಿ ಶಾ, ಶಿಖರ್ ಧವನ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್

India vs Sri lanka: ಅವಿಷ್ಕಾ, ಚರಿತ್ ಅರ್ಧಶತಕ: ಟೀಮ್ ಇಂಡಿಯಾಗೆ ಸ್ಪರ್ಧಾತ್ಮಕ ಸವಾಲು ನೀಡಿದ ಶ್ರೀಲಂಕಾ
India vs Sri lanka
TV9 Web
| Updated By: Digi Tech Desk|

Updated on:Jul 20, 2021 | 8:06 PM

Share

ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯದಲ್ಲಿ ಲಂಕಾ ತಂಡವು 275 ರನ್ಸ್​ ಕಲೆಹಾಕಿದೆ. ಟಾಸ್ ಗೆದ್ದ ಶ್ರೀಲಂಕಾ ನಾಯಕ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಅವಿಷ್ಕ ಫರ್ನಾಂಡೊ ಹಾಗೂ ಮಿನೋದ್ ಭಾನುಕಾ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್​ಗೆ 77 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು. ಆದರೆ 37 ರನ್​ ಬಾರಿಸಿ ಅರ್ಧಶತಕದತ್ತ ದಾಪುಗಾಲಿಡುತ್ತಿದ್ದ ಮಿನೋದ್​​ಗೆ ಪೆವಿಲಿಯನ್ ಹಾದಿ ತೋರಿಸಿದ ಚಹಲ್ ಭಾರತಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

ಮರು ಎಸೆತದಲ್ಲೇ ಭಾನುಕಾ ರಾಜಪಕ್ಸೆಯನ್ನು ಶೂನ್ಯಕ್ಕೆ ಔಟ್ ಮಾಡಿದ ಚಹಲ್ ಶ್ರೀಲಂಕಾಗೆ ಆಘಾತ ನೀಡಿದರು. ಈ ವೇಳೆ ಧನಂಜಯ ಡಿಸಿಲ್ವಾ ಜೊತೆಗೂಡಿದ ಅವಿಷ್ಕಾ ಫರ್ನಾಂಡೊ ಉತ್ತಮ ಬ್ಯಾಟಿಂಗ್ ನಡೆಸಿದರು. 71 ಎಸೆತಗಳನ್ನು ಎದುರಿಸಿದ ಅವಿಷ್ಕಾ 4 ಬೌಂಡರಿ ಹಾಗೂ 1 ಸಿಕ್ಸರ್​ನೊಂದಿಗೆ 50 ರನ್ ಬಾರಿಸಿದರು. ಅರ್ಧಶತಕದ ಬೆನ್ನಲ್ಲೇ ಭುವನೇಶ್ವರ್ ಕುಮಾರ್ ಓವರ್​ನಲ್ಲಿ ಕೃನಾಲ್ ಪಾಂಡ್ಯಗೆ ಕ್ಯಾಚ್ ನೀಡಿ ಅವಿಷ್ಕಾ ನಿರ್ಗಮಿಸಿದರು.

ಇನ್ನು ತಂಡದ ಮೊತ್ತ 134 ಆಗಿದ್ದ ವೇಳೆ ಮತ್ತೊಮ್ಮೆ ದಾಳಿಗಿಳಿದ ದೀಪಕ್ ಚಹರ್ ಧನಂಜಯ್ ಡಿಸಿಲ್ವಾ (32) ವಿಕೆಟ್ ಪಡೆದು ಭಾರತಕ್ಕೆ 4ನೇ ಯಶಸ್ಸು ತಂದುಕೊಟ್ಟರು. ಇನ್ನು ಲಂಕಾ ನಾಯಕ ದಸುನ್ ಶಕನಾ (16) ರನ್ನು ಕ್ಲೀನ್ ಬೌಲ್ಡ್ ಮಾಡಿದ ಚಹಲ್ ಮತ್ತೊಮ್ಮೆ ಸ್ಪಿನ್ ಮೋಡಿ ತೋರಿಸಿದರು. ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ಚರಿತ್ ಅಸಲಂಕಾ ಟೀಮ್ ಇಂಡಿಯಾ ಬೌಲರುಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದರು. ಅದರಂತೆ 68 ಎಸೆತಗಳನ್ನು ಎದುರಿಸಿದ ಚರಿತ್ 6 ಬೌಂಡರಿಗಳೊಂದಿಗೆ 65 ರನ್ ಬಾರಿಸಿದರು. ಅಲ್ಲದೆ ತಂಡದ ಮೊತ್ತವನ್ನು 250ರ ಗಡಿದಾಟಿಸಿ ಭುವನೇಶ್ವರ್ ಕುಮಾರ್​ಗೆ ವಿಕೆಟ್ ಒಪ್ಪಿಸಿದರು.

ಅಂತಿಮ ಓವರ್​ಗಳ ವೇಳೆ ಬಿರುಸಿನ ಬ್ಯಾಟಿಂಗ್ ನಡೆಸಿದ ಚಮಿಕ ಕರುಣರತ್ನೆ 33 ಎಸೆತಗಳಲ್ಲಿ 44 ರನ್ ಬಾರಿಸುವ ಮೂಲಕ 50 ಓವರ್​ಗಳಲ್ಲಿ ಶ್ರೀಲಂಕಾ ಮೊತ್ತವನ್ನು 9 ವಿಕೆಟ್ ನಷ್ಟಕ್ಕೆ 275ಕ್ಕೆ ತಂದು ನಿಲ್ಲಿಸಿದರು. ಟೀಮ್ ಇಂಡಿಯಾ ಪರ ಯುಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್ ತಲಾ 3 ವಿಕೆಟ್ ಪಡೆದು ಮಿಂಚಿದರೆ, ದೀಪಕ್ ಚಹರ್ 2 ವಿಕೆಟ್ ಕಬಳಿಸಿ ಗಮನ ಸೆಳೆದರು.

ಉಭಯ ತಂಡಗಳು ಹೀಗಿವೆ:-

ಭಾರತ: ಶ್ರೀಲಂಕಾ (ಪ್ಲೇಯಿಂಗ್ ಇಲೆವೆನ್): ಅವಿಷ್ಕಾ ಫರ್ನಾಂಡೊ, ಮಿನೋದ್ ಭನುಕಾ (ವಿಕೆಟ್ ಕೀಪರ್), ಭನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಾಸುನ್ ಶನಕಾ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣರತ್ನೆ, ಕಸುನ್ ರಾಜಿತಾ, ದುಶಮಂತ್ ಚಮೀರಾ, ಲಕ್ಷನ್ ಸನ್ದಕನ್

ಶ್ರೀಲಂಕಾ ಭಾರತ (ಪ್ಲೇಯಿಂಗ್ ಇಲೆವೆನ್): ಪೃಥ್ವಿ ಶಾ, ಶಿಖರ್ ಧವನ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್

ಇದನ್ನೂ ಓದಿ: ಇದಪ್ಪಾ ಸೇಡು ಅಂದ್ರೆ!; ಶ್ರೀಲಂಕಾ ವಿರುದ್ದ ಭಾರತ ಸೋತು ಎಷ್ಟು ವರ್ಷಗಳಾಗಿವೆ ಗೊತ್ತಾ..?

ಇದನ್ನೂ ಓದಿ: ಕೃನಾಲ್ ಪಾಂಡ್ಯ ವರ್ತನೆಯಲ್ಲಿ ಸಖತ್ ಬದಲಾವಣೆ! ಇದು ರಾಹುಲ್ ದ್ರಾವಿಡ್ ಎಫೆಕ್ಟ್ ಎಂದ ನೆಟ್ಟಿಗರು; ವಿಡಿಯೋ

Published On - 7:13 pm, Tue, 20 July 21

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್