AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Sri Lanka T20: ಅಂತಿಮ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಐವರ ಸೇರ್ಪಡೆ

ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್

India vs Sri Lanka T20: ಅಂತಿಮ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಐವರ ಸೇರ್ಪಡೆ
ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್
TV9 Web
| Updated By: ಝಾಹಿರ್ ಯೂಸುಫ್|

Updated on: Jul 28, 2021 | 9:13 PM

Share

ಭಾರತ-ಶ್ರೀಲಂಕಾ (India vs Sri Lanka) ನಡುವಣ ಟಿ20 ಸರಣಿಯಿಂದ ಟೀಮ್ ಇಂಡಿಯಾದ 8 ಆಟಗಾರರು ಹೊರಗುಳಿಯಲಿದ್ದಾರೆ. ಟೀಮ್ ಇಂಡಿಯಾ (Team India) ಆಟಗಾರ ಕೃನಾಲ್ ಪಾಂಡ್ಯ ಕೊರೋನಾ ಸೋಂಕಿಗೆ ಒಳಗಾಗುತ್ತಿದ್ದಂತೆ ತಂಡದ ಎಲ್ಲಾ ಆಟಗಾರರನ್ನು ಐಸೊಲೇಷನ್​ಗೆ ಒಳಪಡಿಸಲಾಗಿತ್ತು. ಅಲ್ಲದೆ ಮಂಗಳವಾರ ನಡೆಯಬೇಕಿದ್ದ ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿತ್ತು. ಇನ್ನು ಕೃನಾಲ್ (Krunal Pandya) ಜೊತೆ ನೇರ ಸಂಪರ್ಕ ಹೊಂದಿದ್ದ 8 ಆಟಗಾರರನ್ನು ಐಸೋಲೇಷನ್​ಗೆ ಒಳಪಡಿಸಲಾಗಿದೆ. ಹೀಗಾಗಿ 3ನೇ ಟಿ20 ಪಂದ್ಯಕ್ಕೂ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಮನೀಶ್ ಪಾಂಡೆ, ಇಶಾನ್ ಕಿಶನ್ ಅಲಭ್ಯರಾಗಲಿದ್ದಾರೆ.

ಹೀಗಾಗಿ 2ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಐವರು ಮೀಸಲು ಆಟಗಾರರನ್ನು ಸೇರ್ಪಡೆಗೊಳಿಸಲಾಗಿದೆ. ಪ್ರಸ್ತುತ ತಂಡದಲ್ಲಿ ನೆಟ್​ ಬೌಲರುಗಳಾಗಿದ್ದ ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಸಾಯಿ ಕಿಶೋರ್, ಅರ್ಷ್‌ದೀಪ್ ಸಿಂಗ್ ಮತ್ತು ಸಿಮಾರ್ಜಿತ್ ಸಿಂಗ್ ಇದೀಗ ಟೀಮ್ ಇಂಡಿಯಾದ ಭಾಗವಾಗಿದ್ದಾರೆ.

ಈ ಬಗ್ಗೆ ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಟೀಮ್ ಇಂಡಿಯಾ ಮಾನೇಜ್ಮೆಂಟ್ ಕೋರಿಕೆ ಮೇರೆಗೆ ಮೀಸಲು ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ. ಅದರಂತೆ ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಸಾಯಿ ಕಿಶೋರ್, ಅರ್ಷ್‌ದೀಪ್ ಸಿಂಗ್ ಮತ್ತು ಸಿಮಾರ್ಜಿತ್ ಸಿಂಗ್ ತಂಡದ ಭಾಗವಾಗಿದ್ದು, ಮುಂದಿನ ಟಿ20 ಪಂದ್ಯದ ವೇಳೆ ಟೀಮ್ ಇಂಡಿಯಾದ ಭಾಗವಾಗಬಹುದಾಗಿದೆ.

ಇನ್ನು ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕೊರೋನಾ ಐಸೊಲೇಷನ್​ನಲ್ಲಿರುವ ಕಾರಣ 2ನೇ ಟಿ20 ಪಂದ್ಯದಲ್ಲಿ ನಾಲ್ವರು ಹೊಸಮುಖಗಳು ಸ್ಥಾನ ಪಡೆದಿದ್ದಾರೆ. ಅದರಂತೆ ಕನ್ನಡಿಗ ದೇವದತ್ ಪಡಿಕ್ಕಲ್ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ್ದಾರೆ. ಹಾಗೆಯೇ ಅವರ ಜೊತೆ ರುತುರಾಜ್ ಗಾಯಕ್ವಾಡ್, ನಿತೀಶ್ ರಾಣಾ ಹಾಗೂ ಚೇತನ್ ಸಕರಿಯಾ ಕೂಡ ಚೊಚ್ಚಲ ಅವಕಾಶ ಪಡೆದಿದ್ದಾರೆ.

2ನೇ ಟಿ20 ಪಂದ್ಯದ ವೇಳೆ ಕಣಕ್ಕಿಳಿದ ಟೀಮ್ ಇಂಡಿಯಾ ಹೀಗಿದೆ: ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ನವದೀಪ್ ಸೈನಿ, ಚೇತನ್ ಸಕಾರಿಯಾ, ರಾಹುಲ್ ಚಹರ್

ಟೀಮ್ ಇಂಡಿಯಾ ಸಂಪೂರ್ಣ ತಂಡ: ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ನವದೀಪ್ ಸೈನಿ, ಚೇತನ್ ಸಕಾರಿಯಾ, ರಾಹುಲ್ ಚಹರ್, ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಸಾಯಿ ಕಿಶೋರ್, ಅರ್ಷ್‌ದೀಪ್ ಸಿಂಗ್ ಮತ್ತು ಸಿಮಾರ್ಜಿತ್ ಸಿಂಗ್

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(India vs Sri Lanka  T20: Additions to India’s squad in Sri Lanka for last two T20Is)

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ