India vs Sri Lanka T20: ಲಂಕನ್ನರ ಮಿಂಚಿನ ಬೌಲಿಂಗ್: ಸಾಧಾರಣ ಸವಾಲು ನೀಡಿದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Jul 28, 2021 | 9:37 PM

ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ನವದೀಪ್ ಸೈನಿ, ಚೇತನ್ ಸಕಾರಿಯಾ, ರಾಹುಲ್ ಚಹರ್

India vs Sri Lanka T20: ಲಂಕನ್ನರ ಮಿಂಚಿನ ಬೌಲಿಂಗ್: ಸಾಧಾರಣ ಸವಾಲು ನೀಡಿದ ಟೀಮ್ ಇಂಡಿಯಾ
India vs Sri Lanka T20
Follow us on

ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಭಾರತ ಶ್ರೀಲಂಕಾಗೆ 133 ರನ್​ಗಳ ಟಾರ್ಗೆಟ್ ನೀಡಿದೆ. ಪ್ರಮುಖ ಆಟಗಾರರ ಅಲಭ್ಯತೆಯೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಅದರಂತೆ ಇನಿಂಗ್ಸ್​ ಆರಂಭಿಸಿದ ಶಿಖರ್ ಧವನ್-ರುತುರಾಜ್ ಗಾಯಕ್ವಾಡ್ ಭಾರತಕ್ಕೆ ಉತ್ತಮ ಭಾರತ ಒದಗಿಸಿದರು. ಎಚ್ಚರಿಕೆಯೊಂದಿಗೆ ಬ್ಯಾಟ್ ಬೀಸಿದ ಈ ಜೋಡಿ ಮೊದಲ ವಿಕೆಟ್​ಗೆ 49 ರನ್​ ಕಲೆಹಾಕಿತು. ಈ ವೇಳೆ ಶನಕಾ ಎಸೆತದಲ್ಲಿ ಮಿನೋದ್​ಗೆ ಕ್ಯಾಚ್ ನೀಡಿ ರುತುರಾಜ್ (21) ನಿರ್ಗಮಿಸಿದರು.

ಆ ಬಳಿಕ ಕಣಕ್ಕಿಳಿದ ಕನ್ನಡಿಗ ದೇವದತ್ ಪಡಿಕ್ಕಲ್ ನಾಯಕನಿಗೆ ಉತ್ತಮ ಸಾಥ್ ನೀಡಿದರು. ಆದರೆ ತಂಡದ ಮೊತ್ತ 81 ಆಗಿದ್ದ ವೇಳೆ ಧನಂಜಯ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ಶಿಖರ್ ಧವನ್ (40) ನಿರ್ಗಮಿಸಿದರು. ಇನ್ನು 1 ಸಿಕ್ಸ್ ಹಾಗೂ 1 ಬೌಂಡರಿ ಬಾರಿಸಿ ಭರವಸೆ ಮೂಡಿಸಿದ್ದ ಪಡಿಕ್ಕಲ್ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. 23 ಎಸೆತಗಳಲ್ಲಿ 29 ರನ್ ಬಾರಿಸಿ ಹಸರಂಗ ಎಸೆತದಲ್ಲಿ ಕ್ಲೀನ್ ಬೌಲ್ಡ್ ನಿರಾಸೆ ಮೂಡಿಸಿದರು. ಇದರ ಬೆನ್ನಲ್ಲೇ 7 ರನ್​ಗಳಿಸಿ ಸಂಜು ಸ್ಯಾಮ್ಸನ್ ಕೂಡ ಧನಂಜಯ ಬೌಲ್ಡ್ ಆಗಿ ಹೊರನಡೆದರು.

ಈ ಹಂತದಲ್ಲಿ ಜೊತೆಗೂಡಿದ ನಿತೀಶ್ ರಾಣಾ ಹಾಗೂ ಭುವನೇಶ್ವರ್ ಕುಮಾರ್ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಇನ್ನು ಕೊನೆಯ ಓವರ್​ನಲ್ಲಿ 9 ರನ್​ಗಳಿಸಿದ್ದ ನಿತೀಶ್ ರಾಣಾ ವಿಕೆಟ್ ಒಪ್ಪಿಸಿದರೆ, ಅನುಭವಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡಿದ ಭುವನೇಶ್ವರ್ ಕುಮಾರ್ 13 ರನ್​ ಕಲೆಹಾಕಿ ನಿಗದಿತ 20 ಓವರ್​ನಲ್ಲಿ ತಂಡದ ಮೊತ್ತವನ್ನು 5 ವಿಕೆಟ್​ ನಷ್ಟಕ್ಕೆ 132 ಕ್ಕೆ ತಂದು ನಿಲ್ಲಿಸಿದರು.

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದ್ದು, ಈ ಪಂದ್ಯದಲ್ಲಿ ಗೆದ್ದರೆ ಸರಣಿ ವಶವಾಗಲಿದೆ. ಅತ್ತ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ತವಕದಲ್ಲಿದೆ ಶ್ರೀಲಂಕಾ.

2ನೇ ಟಿ20 ಪಂದ್ಯದ ವೇಳೆ ಕಣಕ್ಕಿಳಿದ ಟೀಮ್ ಇಂಡಿಯಾ ಹೀಗಿದೆ:
ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ನವದೀಪ್ ಸೈನಿ, ಚೇತನ್ ಸಕಾರಿಯಾ, ರಾಹುಲ್ ಚಹರ್

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

 

Published On - 9:37 pm, Wed, 28 July 21