India vs Sri Lanka T20: ಚುಟುಕು ಕದನಕ್ಕೆ ಧವನ್ ಪಡೆ ಸಜ್ಜು: ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ

India vs Sri Lanka t20 predicted playing 11: ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹಾಗೆಯೇ ವೇಗಿಗಳಾಗಿ ಭುವನೇಶ್ವರ್ ಕುಮಾರ್ ಮತ್ತು ದೀಪಕ್ ಚಹರ್ ಕಣಕ್ಕಿಳಿಯುವುದು ಬಹುತೇಕ ಖಚಿತ.

India vs Sri Lanka T20: ಚುಟುಕು ಕದನಕ್ಕೆ ಧವನ್ ಪಡೆ ಸಜ್ಜು: ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ
ಟೀಂ ಇಂಡಿಯಾ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 25, 2021 | 2:16 PM

ಶ್ರೀಲಂಕಾ ವಿರುದ್ದದ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲ ಪಂದ್ಯವನ್ನು ಭಾರತ 7 ವಿಕೆಟ್​ಗಳಿಂದ ಗೆದ್ದುಕೊಂಡರೆ, 2ನೇ ಪಂದ್ಯದಲ್ಲಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಮೂರನೇ ಪಂದ್ಯದಲ್ಲಿ ಲಂಕಾ 3 ವಿಕೆಟ್​​ಗಳ ರೋಚಕ ಜಯ ತನ್ನದಾಗಿಸಿಕೊಂಡಿತು. ಶಿಖರ್ ಧವನ್ ನೇತೃತ್ವದಲ್ಲಿ ಏಕದಿನ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಯುವ ಪಡೆ ಇದೀಗ ಟಿ20 ಸರಣಿಗೆ ಸಜ್ಜಾಗುತ್ತಿದೆ. ಭಾನುವಾರದಿಂದ ಶ್ರೀಲಂಕಾ ವಿರುದ್ದದ ಚುಟುಕು ಕದನಕ್ಕೆ ಚಾಲನೆ ಸಿಗಲಿದೆ. ಆರ್​.ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಲಿದೆ ಎಂಬುದೇ ಸದ್ಯದ ಕುತೂಹಲ. ಏಕೆಂದರೆಏಕದಿನ ಸರಣಿ ಮೂಲಕ ಟೀಮ್ ಇಂಡಿಯಾ ಪರ 7 ಆಟಗಾರರು ಪದಾರ್ಪಣೆ ಮಾಡಿದ್ದರು. ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಪದಾರ್ಪಣೆ ಮಾಡಿದರೆ, 3ನೇ ಏಕದಿನದಲ್ಲಿ ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ಚೇತನ್ ಸಕರಿಯಾ, ರಾಹುಲ್ ಚಹರ್ ಹಾಗೂ ಕನ್ನಡಿಗ ಕೃಷ್ಣಪ್ಪ ಗೌತಮ್ ಟೀಮ್ ಇಂಡಿಯಾ ಪರ ಅವಕಾಶ ಪಡೆದಿದ್ದರು. ಇದಾಗ್ಯೂ ರುತುರಾಜ್ ಗಾಯಕ್ವಾಡ್, ದೇವದತ್ ಪಡಿಕ್ಕಲ್, ವರುಣ್ ಚಕ್ರವರ್ತಿಗೆ ಟೀಮ್ ಇಂಡಿಯಾ ಪರ ಆಡುವ ಭಾಗ್ಯ ದೊರೆತಿರಲಿಲ್ಲ.

ಹೀಗಾಗಿಯೇ ಈ ಮೂವರಲ್ಲಿ ಟಿ20 ಸರಣಿಯಲ್ಲಿ ಯಾರಿಗೆ ಅವಕಾಶ ದೊರೆಯಲಿದೆ ಎಂಬ ಚರ್ಚೆ ಶುರುವಾಗಿದೆ. ಪ್ರಸ್ತುತ ತಂಡದಲ್ಲಿ ಚೈನಾಮನ್ ಸ್ಪಿನ್ನರ್​ಗಳಾಗಿ ಯುಜುವೇಂದ್ರ ಚಹಲ್ ಹಾಗೂ ಕುಲ್ದೀಪ್ ಯಾದವ್ ಇದ್ದಾರೆ. ಆದರೆ ಟಿ20 ಕ್ರಿಕೆಟ್​ನಲ್ಲಿ ಒಂದೇ ಶೈಲಿಯ ಇಬ್ಬರು ಬೌಲರುಗಳನ್ನು ಕಣಕ್ಕಿಳಿಸುವುದರಿಂದ ಹೆಚ್ಚಿನ ಪ್ರಯೋಜನವಾಗಲ್ಲ ಎಂಬುದು ಟೀಮ್ ಇಂಡಿಯಾ ಲೆಕ್ಕಚಾರ. ಅದರಲ್ಲೂ ಕೊನೆಯ ಏಕದಿನ ಪಂದ್ಯದದಲ್ಲಿ ಸ್ಪಿನ್ನರ್​ಗಳೇ ಮೇಲುಗೈ ಸಾಧಿಸಿದ್ದರು. ಹೀಗಾಗಿ ಆಫ್-ಬ್ರೇಕ್, ಕ್ಯಾರಮ್ ಬಾಲ್ ಎಸೆಯುವ ಸಾಮರ್ಥ್ಯ ಹೊಂದಿರುವ ವರುಣ್ ಚಕ್ರವರ್ತಿಗೆ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಅಂದರೆ ಕುಲ್ದೀಪ್ ಯಾದವ್ ಸ್ಥಾನದಲ್ಲಿ ವರುಣ್ ಕಣಕ್ಕಿಳಿಯಬಹುದು. ಇದರ ಹೊರತಾಗಿ ಟಿ20 ತಂಡದಿಂದ ಮನೀಶ್ ಪಾಂಡೆಯನ್ನು ಕೈ ಬಿಡುವ ಸಾಧ್ಯತೆ ಕೂಡ ಹೆಚ್ಚಿದೆ. ಪಾಂಡೆ ಕಳೆದ ಮೂರು ಏಕದಿನ ಪಂದ್ಯಗಳಿಂದ ಗಳಿಸಿದ್ದು ಕೇವಲ 74 ರನ್​ ಮಾತ್ರ. ಆದರೆ ಅಂತಿಮ ಏಕದಿನ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಅವಕಾಶ ಪಡೆದಿದ್ದ ಸಂಜು ಸ್ಯಾಮ್ಸನ್ 46 ರನ್ ಬಾರಿಸುವ ಮೂಲಕ ಗಮನ ಸೆಳೆದಿದ್ದರು. ಹೀಗಾಗಿ ಪಾಂಡೆ ಸ್ಥಾನದಲ್ಲಿ ಟಿ20ಯಲ್ಲಿ ಸ್ಯಾಮ್ಸನ್​ ಕಣಕ್ಕಿಳಿಯಬಹುದು.

ಇನ್ನು ಆರಂಭಿಕ ಜೋಡಿಯಾಗಿ ಶಿಖರ್ ಧವನ್ ಹಾಗೂ ಪೃಥ್ವಿ ಶಾ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ ಎನ್ನಬಹುದು. ಮೂರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಇಶಾನ್ ಕಿಶನ್ ಸ್ಥಾನ ಪಡೆಯಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ. ಇನ್ನು ಐದನೇ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹಾಗೆಯೇ ವೇಗಿಗಳಾಗಿ ಭುವನೇಶ್ವರ್ ಕುಮಾರ್ ಮತ್ತು ದೀಪಕ್ ಚಹರ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಇನ್ನು ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಲ್ ಚಹಲ್ ಹಾಗೂ ವರುಣ್ ಚಕ್ರವರ್ತಿ ಅವಕಾಶಗಿಟ್ಟಿಸಿಕೊಳ್ಳಲಿದ್ದಾರೆ.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಪೃಥ್ವಿ ಶಾ , ಶಿಖರ್ ಧವನ್ (ನಾಯಕ) , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ , ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ ,ಕೃನಾಲ್ ಪಾಂಡ್ಯ , ದೀಪಕ್ ಚಹರ್ , ಭುವನೇಶ್ವರ್ ಕುಮಾರ್ , ಯುಜ್ವೇಂದ್ರ ಚಹಲ್ , ವರುಣ್ ಚಕ್ರವರ್ತಿ.

ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಇಂದು (ಜುಲೈ) ನಡೆಯಲಿದ್ದು, ಎರಡನೇ ಪಂದ್ಯ ಜುಲೈ 27 ರಂದು ಆಯೋಜಿಸಲಿದೆ. ಹಾಗೆಯೇ ಅಂತಿಮ ಟಿ20 ಪಂದ್ಯವನ್ನು ಜುಲೈ 29 ರಂದು ನಡೆಯಲಿದೆ. ಈ ಎಲ್ಲಾ ಪಂದ್ಯಗಳು ಕೊಲಂಬೊದ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾತ್ರಿ 8 ಗಂಟೆಯಿಂದ ಸೋನಿ ಟೆನ್ 1, ಸೋನಿ ಟೆನ್ 3, ಸೋನಿ ಟೆನ್ 4 ಹಾಗೂ ಸೋನಿ ಸಿಕ್ಸ್‌ ಚಾನೆಲ್‌ಗಳಲ್ಲಿ ಪಂದ್ಯಗಳ ನೇರಪ್ರಸಾರವನ್ನು ವೀಕ್ಷಿಸಬಹುದು.

ಇದನ್ನೂ ಓದಿ: MS Dhoni: ಧೋನಿ ಕೋಚ್ ಆಗಲಿದ್ದಾರೆ: ಮಾಜಿ ಕ್ರಿಕೆಟಿಗನ ಭವಿಷ್ಯ..!

ಇದನ್ನೂ ಓದಿ: India vs Sri Lanka T20 Schedule: ಟಿ20 ಕದನಕ್ಕೆ ಟೀಮ್ ಇಂಡಿಯಾ ಸಜ್ಜು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

(india vs sri lanka t20 predicted playing 11)

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ