AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಿನಗಳ ಅಭ್ಯಾಸ ಪಂದ್ಯ: ಭಾರತದ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟ

India vs Sri Lanka: ಭಾರತ ತಂಡವು ಕೊನೆಯ ಬಾರಿ ಶ್ರೀಲಂಕಾ ನೆಲದಲ್ಲಿ ಟೆಸ್ಟ್ ಸರಣಿ ಆಡಿದ್ದು 2017 ರಲ್ಲಿ. ಇದೀಗ ಬರೋಬ್ಬರಿ 9 ವರ್ಷಗಳ ದೀರ್ಘ ಬಿಡುವಿನ ಬಳಿಕ ಟೀಮ್ ಇಂಡಿಯಾ ಲಂಕಾದಲ್ಲಿ ರೆಡ್ ಬಾಲ್ ಕ್ರಿಕೆಟ್ ಆಡಲು ಸಜ್ಜಾಗುತ್ತಿದೆ. ಅದೂ ಸಹ ಶುಭ್‌ಮನ್ ಗಿಲ್ ಮುಂದಾಳತ್ವದ ಯುವ ಪಡೆಯೊಂದಿಗೆ. ಹೀಗಾಗಿಯೇ ಮುಂಬರುವ ಟೆಸ್ಟ್ ಸರಣಿ ಎಲ್ಲರಲ್ಲೂ ಭಾರಿ ಕುತೂಹಲ ಮೂಡಿಸಿದೆ.

4 ದಿನಗಳ ಅಭ್ಯಾಸ ಪಂದ್ಯ: ಭಾರತದ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟ
Team India
ಝಾಹಿರ್ ಯೂಸುಫ್
|

Updated on: Jul 21, 2026 | 2:22 PM

Share

ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 7 ರಿಂದ ಆರಂಭವಾಗಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೊದಲು 4 ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದ್ದು, ಇದಾದ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಖಚಿತಪಡಿಸಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನ ದೃಷ್ಟಿಯಿಂದ ಟೀಮ್ ಇಂಡಿಯಾ ಪಾಲಿಗೆ ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಈ ಸರಣಿಯಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಫೈನಲ್​ ರೇಸ್​ನಲ್ಲಿ ಉಳಿಯಲಿದೆ.

ಟೀಮ್ ಇಂಡಿಯಾ ಫೈನಲ್ ಲೆಕ್ಕಾಚಾರ:

ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ಒಟ್ಟು 18 ಪಂದ್ಯಗಳನ್ನು ಆಡಬೇಕಾಗಿದ್ದು, ಅದರಲ್ಲಿ ಈಗಾಗಲೇ 9 ಪಂದ್ಯಗಳನ್ನು ಮುಗಿಸಿದೆ. ಉಳಿದಿರುವ 9 ಪಂದ್ಯಗಳು ಭಾರತದ ಭವಿಷ್ಯವನ್ನು ನಿರ್ಧರಿಸಲಿವೆ.

  • ಶ್ರೀಲಂಕಾ ಪ್ರವಾಸ (ವಿದೇಶಿ ಸರಣಿ): 2 ಟೆಸ್ಟ್ ಪಂದ್ಯಗಳು.
  • ನ್ಯೂಝಿಲೆಂಡ್ ಪ್ರವಾಸ (ವಿದೇಶಿ ಸರಣಿ): 2 ಟೆಸ್ಟ್ ಪಂದ್ಯಗಳು.
  • ಆಸ್ಟ್ರೇಲಿಯಾ ವಿರುದ್ಧ (ತವರಿನ ಸರಣಿ): 5 ಟೆಸ್ಟ್ ಪಂದ್ಯಗಳು.

ಅಂದರೆ ಟೀಮ್ ಇಂಡಿಯಾ ಮುಂದಿನ 9 ಪಂದ್ಯಗಳಲ್ಲಿ 8 ಗೆಲುವು ಸಾಧಿಸಿದರೆ ಫೈನಲ್​ಗೇರುವುದು ಖಚಿತ. ಒಂದು ವೇಳೆ 7 ಅಥವಾ 6 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಇತರೆ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ.

ಭಾರತ ತಂಡದ ಮುಂದಿನ ಎದುರಾಳಿಗಳು ಶ್ರೀಲಂಕಾ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ. ಇಲ್ಲಿ ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳನ್ನು ಪರಿಗಣನೆಗೆ ತೆಗೆದುಕೊಂಡರೆ ಶ್ರೀಲಂಕಾ ದುರ್ಬಲ ತಂಡ ಎನ್ನಬಹುದು.

ಹೀಗಾಗಿಯೇ ಶ್ರೀಲಂಕಾ ವಿರುದ್ಧದ 2 ಮ್ಯಾಚ್​ಗಳಲ್ಲೂ ಭಾರತ ತಂಡ ಗೆಲ್ಲಲೇಬೇಕು. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​ನಲ್ಲಿ ಉಳಿಯಬಹುದು.

ಸರಣಿ ಯಾವಾಗ ಶುರು?

ಆಗಸ್ಟ್ 4 ರಂದು ಕೊಲಂಬೋ ತಲುಪಲಿರುವ ಟೀಮ್ ಇಂಡಿಯಾ, ಮೊದಲ ಟೆಸ್ಟ್‌ಗೂ ಮುನ್ನ ಸ್ಥಳೀಯ ಲಂಕಾ ಬೋರ್ಡ್ XI ವಿರುದ್ಧ 4 ದಿನಗಳ ಸುದೀರ್ಘ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದಾದ ಬಳಿಕ 2 ಟೆಸ್ಟ್ ಮ್ಯಾಚ್​ಗಳಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…

ಭಾರತ ಮತ್ತು ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ:

ದಿನಾಂಕ ಪಂದ್ಯದ ವಿವರ ಕ್ರೀಡಾಂಗಣ
ಆಗಸ್ಟ್ 7 – 10, 2026 4 ದಿನಗಳ ಅಭ್ಯಾಸ ಪಂದ್ಯ ಎನ್‌ಸಿಸಿ ಮೈದಾನ, ಕೊಲಂಬೋ
ಆಗಸ್ಟ್ 15 – 19, 2026 ಮೊದಲನೇ ಟೆಸ್ಟ್ ಪಂದ್ಯ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣ, ಗಾಲೆ
ಆಗಸ್ಟ್ 23 – 27, 2026 ಎರಡನೇ ಟೆಸ್ಟ್ ಪಂದ್ಯ ಎಸ್‌ಎಸ್‌ಸಿ ಮೈದಾನ, ಕೊಲಂಬೋ

ಇದನ್ನೂ ಓದಿ: ರೋಹಿತ್-ಕೊಹ್ಲಿಯನ್ನು ಕೈಬಿಡುವ ಧೈರ್ಯ ಮಾಡಬೇಡಿ: ಅಶ್ವಿನ್ ಎಚ್ಚರಿಕೆ

ಈ ಸರಣಿಯ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ 8 ಮ್ಯಾಚ್​ಗಳ ಸರಣಿ ಆಡಲಿದೆ. ಈ ಸರಣಿ ಸೆಪ್ಟೆಂಬರ್ 26 ರಿಂದ ಶುರುವಾಗಲಿದ್ದು,  3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಾಗುತ್ತದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ