IND-W vs SL-W: ಟಾಸ್ ಗೆದ್ದ ಟೀಂ ಇಂಡಿಯಾ; ತಂಡದಲ್ಲಿ 1 ಬದಲಾವಣೆ

India vs Sri Lanka Women 2nd T20: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ 2-0 ಅಂತರಕ್ಕೆ ಹೆಚ್ಚಿಸಲು ನೋಡುತ್ತಿದೆ. ದೀಪ್ತಿ ಶರ್ಮಾ ಅನಾರೋಗ್ಯದಿಂದ ಹೊರಗುಳಿದಿದ್ದು, ಸ್ನೇಹ ರಾಣಾ ಸ್ಥಾನ ಪಡೆದಿದ್ದಾರೆ. ಹರ್ಮನ್​ಪ್ರೀತ್ ಕೌರ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದಾರೆ.

IND-W vs SL-W: ಟಾಸ್ ಗೆದ್ದ ಟೀಂ ಇಂಡಿಯಾ; ತಂಡದಲ್ಲಿ 1 ಬದಲಾವಣೆ
Ind W Vs Slw

Updated on: Dec 23, 2025 | 6:41 PM

ಭಾರತ ಮತ್ತು ಶ್ರೀಲಂಕಾ ಮಹಿಳಾ (India vs Sri Lanka Women) ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ (Visakhapatnam) ನಡೆಯುತ್ತಿದೆ. ಈ ಸರಣಿಯಲ್ಲಿ ಆತಿಥೇಯ ಭಾರತ 1-0 ಅಂತರದ ಮುನ್ನಡೆ ಸಾಧಿಸಿದ್ದು ಇದೀಗ ಈ ಪಂದ್ಯವನ್ನು ಗೆಲ್ಲುವ ಮೂಲಕ ಈ ಮುನ್ನಡೆಯನ್ನು 2-0 ಅಂತರಕ್ಕೆ ಕೊಂಡೊಯ್ಯಲು ಹರ್ಮನ್​ಪ್ರೀತ್ ಕೌರ್ ಪಡೆ ನೋಡುತ್ತಿದೆ. ಉಭಯ ತಂಡಗಳ ನಡುವೆ ಇದೇ ವಿಶಾಖಪಟ್ಟಣನಲ್ಲಿ ಮೊದಲ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ ಕೇವಲ 126 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತದ ಪರ ಜೆಮಿಮಾ 44 ಎಸೆತಗಳಲ್ಲಿ 69 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಟಾಸ್ ಗೆದ್ದ ಟೀಂ ಇಂಡಿಯಾ

ಸತತ ಎರಡನೇ ಪಂದ್ಯದಲ್ಲೂ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್‌ ಮಾಡಲಿದೆ. ಆದಾಗ್ಯೂ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ತಂಡದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಅನಾರೋಗ್ಯ ಕಾರಣದಿಂದಾಗಿ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಯಾಗಿ ಸ್ನೇಹ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತ ಲಂಕಾ ತಂಡ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಟಗಾರ್ತಿಯರನ್ನೇ ಕಣಕ್ಕಿಳಿಸುತ್ತಿದೆ.

ಉಭಯ ತಂಡಗಳು

ಭಾರತ ತಂಡದ ಪ್ಲೇಯಿಂಗ್ 11: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಅಮಂಜೋತ್ ಕೌರ್, ಅರುಂಧತಿ ರೆಡ್ಡಿ, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ಶ್ರೀ ಚರಣಿ.

ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ನೀಲಾಕ್ಷಿಕಾ ಸಿಲ್ವಾ, ಕೌಶಿನಿ ನುತ್ತಯಂಗನಾ (ವಿಕೆಟ್ ಕೀಪರ್), ಕವಿಶಾ ದಿಲ್ಹಾರಿ, ಮಲ್ಕಿ ಮುದಾರ, ಇನೋಕಾ ರಣವೀರ, ಕಾವ್ಯಾ ಕವಿಂದಿ, ಶಶಿನಿ ಗಿಮ್ಹಾನಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 pm, Tue, 23 December 25