AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND-W vs SL-W: ಈ ವರ್ಷದ ಕೊನೆಯ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ; ಪಂದ್ಯ ಎಷ್ಟು ಗಂಟೆಗೆ ಆರಂಭ?

India vs Sri Lanka Women's 5th T20: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 5ನೇ ಟಿ20 ಪಂದ್ಯ ತಿರುವನಂತಪುರದಲ್ಲಿ ನಡೆಯಲಿದೆ. ಈಗಾಗಲೇ ಸರಣಿ ಗೆದ್ದಿರುವ ಭಾರತ 5-0 ಕ್ಲೀನ್ ಸ್ವೀಪ್ ಗುರಿ ಹೊಂದಿದೆ. ಇತ್ತ ಶ್ರೀಲಂಕಾ ಕೊನೆಯ ಪಂದ್ಯ ಗೆಲ್ಲಲು ಯತ್ನಿಸಲಿದೆ. ಈ ಸರಣಿಯು ಮುಂಬರುವ T20 ವಿಶ್ವಕಪ್‌ಗೆ ತಂಡಗಳ ಸಿದ್ಧತೆಯ ಪ್ರಮುಖ ಭಾಗವಾಗಿದೆ, ತಂಡಗಳು ವರ್ಷವನ್ನು ಗೆಲುವಿನೊಂದಿಗೆ ಮುಗಿಸಲು ನೋಡುತ್ತಿವೆ.

IND-W vs SL-W: ಈ ವರ್ಷದ ಕೊನೆಯ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ; ಪಂದ್ಯ ಎಷ್ಟು ಗಂಟೆಗೆ ಆರಂಭ?
Ind W Vs Sl W
ಪೃಥ್ವಿಶಂಕರ
|

Updated on: Dec 29, 2025 | 9:07 PM

Share

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಮಂಗಳವಾರ ತಿರುವನಂತಪುರದಲ್ಲಿ ನಡೆಯಲಿದೆ. ಭಾರತ ತಂಡ ಈಗಾಗಲೇ ಸರಣಿಯನ್ನು ಗೆದ್ದಿದ್ದು, ಐದನೇ ಟಿ20ಪಂದ್ಯವನ್ನು ಗೆಲ್ಲುವ ಮೂಲಕ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಇದು ಭಾರತೀಯ ತಂಡದ ವರ್ಷದ ಕೊನೆಯ ಪಂದ್ಯವಾಗಿದ್ದು, ತಂಡವು ವರ್ಷವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಇತ್ತ ಸರಣಿಯ ಕೊನೆಯ ಪಂದ್ಯವನ್ನಾದರೂ ಗೆದ್ದು, ಈ ಪ್ರವಾಸವನ್ನು ಗೆಲುವಿನೊಂದಿಗೆ ಅಂತ್ಯಗೊಳಿಸುವ ಇರಾದೆಯಲ್ಲಿ ಲಂಕಾ ತಂಡವಿದೆ.

ವಿಶ್ವಕಪ್​ ತಯಾರಿಗೆ ಅತ್ಯವಶ್ಯಕ

ಭಾರತ ಮತ್ತು ಶ್ರೀಲಂಕಾ ನಡುವಿನ ಈ ಸರಣಿಯು ಮುಂದಿನ ವರ್ಷ ಜೂನ್-ಜುಲೈನಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ ಸಿದ್ಧತೆಯ ಪ್ರಮುಖ ಭಾಗವಾಗಿದೆ. ಶ್ರೀಲಂಕಾ ವಿರುದ್ಧದ ಪ್ರಸ್ತುತ ಸರಣಿಯ ನಂತರ, ಭಾರತ ತಂಡವು ವಿಶ್ವಕಪ್‌ಗೆ ಮೊದಲು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಲ್ಲಿ ತಲಾ ಮೂರು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದನೇ ಟಿ20 ಪಂದ್ಯ ಡಿಸೆಂಬರ್ 30 ರಂದು ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ಐದನೇ ಟಿ20 ಪಂದ್ಯ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದನೇ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದನೇ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದನೇ ಟಿ20 ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ನೋಡಬಹುದು?

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ಐದನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ಐದನೇ ಟಿ20 ಪಂದ್ಯವನ್ನು ಮೊಬೈಲ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?

ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದನೇ ಟಿ20 ಪಂದ್ಯವನ್ನು ನಿಮ್ಮ ಮೊಬೈಲ್ ಫೋನ್‌ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ಜಿ ಕಮಲಿನಿ, ಹರ್ಲೀನ್ ಡಿಯೋಲ್, ಅರುಂಧಾ ರೆಡ್ಡಿ, ಸ್ನೇಹ್ ರೆಡ್ಡಿ.

ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ನೀಲಾಕ್ಷಿಕಾ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ಕೌಶಿನಿ ನುತ್ಯಾಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಶಶಿನಿ ಗಿಮ್ಹಾನಿ, ನಿಮೇಶ್ ಮದುಶಾನಿ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂದಿ, ಮಾಲ್ಕಿ ಮಾದರ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ಮೋದಿ
ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ಮೋದಿ
ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಹರಿಪ್ರಸಾದ್ ಭೇಟಿ
ಅಧ್ಯಕ್ಷರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಹರಿಪ್ರಸಾದ್ ಭೇಟಿ
ಪ್ರಧಾನಿ ಮೋದಿ ಒಳಿತಿಗಾಗಿ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಅಶೋಕ್​
ಪ್ರಧಾನಿ ಮೋದಿ ಒಳಿತಿಗಾಗಿ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಅಶೋಕ್​
ಮೋದಿ ಪ್ರಧಾನಿಯಾಗಿ 12 ವರ್ಷ: ಬೆಂಗಳೂರಿನಲ್ಲಿ ಸೋಮಣ್ಣ ವಿಶೇಷ ಪೂಜೆ
ಮೋದಿ ಪ್ರಧಾನಿಯಾಗಿ 12 ವರ್ಷ: ಬೆಂಗಳೂರಿನಲ್ಲಿ ಸೋಮಣ್ಣ ವಿಶೇಷ ಪೂಜೆ
ಗ್ಯಾಸ್ ಕಟರ್ ಬಳಸಿ ಎಟಿಎಂ ದರೋಡೆಗೆತ್ನಿಸಿದ ಖದೀಮರು! ಆಮೇಲಾಗಿದ್ದೇ ಬೇರೆ
ಗ್ಯಾಸ್ ಕಟರ್ ಬಳಸಿ ಎಟಿಎಂ ದರೋಡೆಗೆತ್ನಿಸಿದ ಖದೀಮರು! ಆಮೇಲಾಗಿದ್ದೇ ಬೇರೆ
ಒಂದೇ ಓವರ್​ನಲ್ಲಿ 3 ವಿಕೆಟ್​: ಟೀಮ್ ಇಂಡಿಯಾಗೆ ರೋಚಕ ಜಯ
ಒಂದೇ ಓವರ್​ನಲ್ಲಿ 3 ವಿಕೆಟ್​: ಟೀಮ್ ಇಂಡಿಯಾಗೆ ರೋಚಕ ಜಯ
ಹುಟ್ಟು ಹಬ್ಬವನ್ನು ಹೇಗೆ ಆಚರಿಸಬೇಕು ಗೊತ್ತಾ?
ಹುಟ್ಟು ಹಬ್ಬವನ್ನು ಹೇಗೆ ಆಚರಿಸಬೇಕು ಗೊತ್ತಾ?
ಇಂದು ಈ ರಾಶಿಯವರು ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನ ಕೊಡಿ
ಇಂದು ಈ ರಾಶಿಯವರು ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನ ಕೊಡಿ
'ನಮ್ಮ ಶಾಸಕರು ನಾಪತ್ತೆಯಾಗಿದ್ದಾರೆ ಹುಡುಕಿಕೊಡಿ' ಎಂದು ಜನಾಕ್ರೋಶ!
'ನಮ್ಮ ಶಾಸಕರು ನಾಪತ್ತೆಯಾಗಿದ್ದಾರೆ ಹುಡುಕಿಕೊಡಿ' ಎಂದು ಜನಾಕ್ರೋಶ!
‘ಬಲರಾಮನ ದಿನಗಳು ನನ್ನ ಜೀವನದ ಅತಿ ದೊಡ್ಡ ಸಿನಿಮಾ’: ವಿನೋದ್ ಪ್ರಭಾಕರ್
‘ಬಲರಾಮನ ದಿನಗಳು ನನ್ನ ಜೀವನದ ಅತಿ ದೊಡ್ಡ ಸಿನಿಮಾ’: ವಿನೋದ್ ಪ್ರಭಾಕರ್