
ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಮಂಗಳವಾರ ತಿರುವನಂತಪುರದಲ್ಲಿ ನಡೆಯಲಿದೆ. ಭಾರತ ತಂಡ ಈಗಾಗಲೇ ಸರಣಿಯನ್ನು ಗೆದ್ದಿದ್ದು, ಐದನೇ ಟಿ20ಪಂದ್ಯವನ್ನು ಗೆಲ್ಲುವ ಮೂಲಕ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಇದು ಭಾರತೀಯ ತಂಡದ ವರ್ಷದ ಕೊನೆಯ ಪಂದ್ಯವಾಗಿದ್ದು, ತಂಡವು ವರ್ಷವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಇತ್ತ ಸರಣಿಯ ಕೊನೆಯ ಪಂದ್ಯವನ್ನಾದರೂ ಗೆದ್ದು, ಈ ಪ್ರವಾಸವನ್ನು ಗೆಲುವಿನೊಂದಿಗೆ ಅಂತ್ಯಗೊಳಿಸುವ ಇರಾದೆಯಲ್ಲಿ ಲಂಕಾ ತಂಡವಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಈ ಸರಣಿಯು ಮುಂದಿನ ವರ್ಷ ಜೂನ್-ಜುಲೈನಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ ಸಿದ್ಧತೆಯ ಪ್ರಮುಖ ಭಾಗವಾಗಿದೆ. ಶ್ರೀಲಂಕಾ ವಿರುದ್ಧದ ಪ್ರಸ್ತುತ ಸರಣಿಯ ನಂತರ, ಭಾರತ ತಂಡವು ವಿಶ್ವಕಪ್‌ಗೆ ಮೊದಲು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಲ್ಲಿ ತಲಾ ಮೂರು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದನೇ ಟಿ20 ಪಂದ್ಯ ಡಿಸೆಂಬರ್ 30 ರಂದು ನಡೆಯಲಿದೆ.
ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ಐದನೇ ಟಿ20 ಪಂದ್ಯ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದನೇ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡದ ನಡುವಿನ ಐದನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.
ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್ ಬಳಸಿ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದನೇ ಟಿ20 ಪಂದ್ಯವನ್ನು ನಿಮ್ಮ ಮೊಬೈಲ್ ಫೋನ್‌ನಲ್ಲಿ ವೀಕ್ಷಿಸಬಹುದು.
ಭಾರತ ತಂಡ: ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್, ಶ್ರೀ ಚರಣಿ, ಜಿ ಕಮಲಿನಿ, ಹರ್ಲೀನ್ ಡಿಯೋಲ್, ಅರುಂಧಾ ರೆಡ್ಡಿ, ಸ್ನೇಹ್ ರೆಡ್ಡಿ.
ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ನೀಲಾಕ್ಷಿಕಾ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ಕೌಶಿನಿ ನುತ್ಯಾಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಶಶಿನಿ ಗಿಮ್ಹಾನಿ, ನಿಮೇಶ್ ಮದುಶಾನಿ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂದಿ, ಮಾಲ್ಕಿ ಮಾದರ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ