ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಈ ಚಾನೆಲ್​ನಲ್ಲಿ ನೇರ ಪ್ರಸಾರ

2026ರ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳು ಸಜ್ಜಾಗಿವೆ. ಎರಡೂ ತಂಡಗಳು ಅಜೇಯವಾಗಿ ಫೈನಲ್ ಪ್ರವೇಶಿಸಿದ್ದು, ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿವೆ. ಕಳೆದ ಬಾರಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ಕಾತುರದಲ್ಲಿದೆ. ಸೆಪ್ಟೆಂಬರ್ 13ರಂದು ದುಬೈನಲ್ಲಿ ರಾತ್ರಿ 8 ಗಂಟೆಗೆ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಮತ್ತು ಸೋನಿ ಲಿವ್‌ನಲ್ಲಿ ವೀಕ್ಷಿಸಬಹುದು.

ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಈ ಚಾನೆಲ್​ನಲ್ಲಿ ನೇರ ಪ್ರಸಾರ
ಭಾರತ Vs ಶ್ರೀಲಂಕಾ

Updated on: Sep 12, 2026 | 10:48 PM

2026 ರ ಮಹಿಳಾ ಏಷ್ಯಾಕಪ್‌ ಫೈನಲ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡ, ಶ್ರೀಲಂಕಾ ಮಹಿಳಾ ತಂಡವನ್ನು ಎದುರಿಸಲಿದೆ. ಒಂದೆಡೆ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಬಾಂಗ್ಲಾದೇಶವನ್ನು ಸೋಲಿಸಿ ಫೈನಲ್​ಗೇರಿದ್ದರೆ, ಇನ್ನೊಂದೆಡೆ ಶ್ರೀಲಂಕಾ ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್‌ಗೆ ಮುನ್ನಡೆದಿದೆ. ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳು ಅಜೇಯವಾಗಿ ಫೈನಲ್​ಗೇರಿರುವುದರಿಂದ ಯಾವ ತಂಡಕ್ಕೆ ಚಾಂಪಿಯನ್ ಪಟ್ಟ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಭಾರತ ತಂಡ ಸತತ 10ನೇ ಬಾರಿಗೆ ಫೈನಲ್‌ ಆಡಲಿದ್ದರೆ, ಮತ್ತೊಂದೆಡೆ, ಶ್ರೀಲಂಕಾ ಕೂಡ 7ನೇ ಬಾರಿಗೆ ಫೈನಲ್‌ನಲ್ಲಿ ಆಡುತ್ತಿದೆ. ಇದರಲ್ಲಿ ಭಾರತ 7 ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರೆ, ಶ್ರೀಲಂಕಾ ಒಮ್ಮೆ ಟ್ರೋಫಿ ಎತ್ತಿ ಹಿಡಿದಿದೆ. ಆದಾಗ್ಯೂ ಕಳೆದ ಆವೃತ್ತಿಯಲ್ಲಿ ಇದೇ ಶ್ರೀಲಂಕಾ, ಭಾರತವನ್ನು ಮಣಿಸಿ ಟ್ರೋಫಿ ಗೆದ್ದಿತ್ತು. ಹೀಗಾಗಿ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಟೀಂ ಇಂಡಿಯಾಕ್ಕಿದೆ. ಹಾಗಿದ್ದರೆ ಈ ಸೇಡಿನ ಸಮರ ಯಾವಾಗ, ಎಲ್ಲಿ ಎಷ್ಟು ಗಂಟೆಗೆ ಆರಂಭವಾಗಲಿದೆ ಎಂಬುದನ್ನು ನೋಡೋಣ.

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ಸೆಪ್ಟೆಂಬರ್ 13 ರ ಭಾನುವಾರದಂದು ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಪ್ರಾರಂಭವಾಗಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸುವುದು?

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲಿವ್ ಅಪ್ಲಿಕೇಶನ್ ಬಳಸಿ ನಿಮ್ಮ ಮೊಬೈಲ್​ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಕೊನೆಯಲ್ಲಿ ಎಡವಿದ ಪಾಕಿಸ್ತಾನ; ಏಷ್ಯಾಕಪ್‌ ಫೈನಲ್​ಗೇರಿದ ಶ್ರೀಲಂಕಾ

ಉಭಯ ತಂಡಗಳು

ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಭಾರತಿ ಫುಲ್‌ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್, ಜಿ ಕಮಲಿನಿ, ಅರುಂಧತಿ ರೆಡ್ಡಿ, ಪ್ರೇಮಾ ರಾವತ್, ರಾಧಾ ಯಾದವ್, ಶ್ರೀ ಚರಣಿ, ರೇಣುಕಾ ಠಾಕೂರ್, ನಂದಿನಿ ಶರ್ಮಾ, ಕ್ರಾಂತಿ ಗೌಡ್, ಪ್ರತಿಕಾ ರಾವಲ್.

ಶ್ರೀಲಂಕಾ ಮಹಿಳಾ ತಂಡ: ಚಾಮರಿ ಅಟಾಪಟು (ನಾಯಕಿ), ಮಿಥಾಲಿ ಅಯೋಧ್ಯಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ವಿಶ್ಮಿ ಗುಣರತ್ನೆ, ಕಾವ್ಯಾ ಕವಿಂದಿ, ಸಂಜನಾ ಕವಿಂದಿ, ಸುಗಂದಿಕಾ ಕುಮಾರಿ, ನಿಮಾಶಾ ಮೀಪಗೆ, ಕೌಶಿನಿ ನುತ್ಯಂಗನ, ಹಾಸಿನಿ ಪೆರೇರಾ, ಚಾಮುದಿ ಪ್ರಬೋದ, ಹರ್ಷಿತಾ ಸಮರವಿಕ್ರಮ, ನೀಲಾಕ್ಷಿಕಾ ಸಿಲ್ವ, ಚೇತನ ವಿಮುಕ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us