ಅಭ್ಯಾಸ ಪಂದ್ಯದಲ್ಲಿ ಹಾರ್ದಿಕ್ ಆರ್ಭಟ: ಧವನ್ ತಂಡದ ವಿರುದ್ಧ ಸಿಕ್ಸರ್​ಗಳ ಸುರಿಮಳೆ: ವಿಡಿಯೋ

ನಿನ್ನೆ ಗುರುವಾರದಂದು ಶ್ರೀಲಂಕಾದಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಶಿಖರ್ ಧವನ್ XI ತಂಡದ ವಿರುದ್ಧ ಭುವನೇಶ್ವರ್ ಕುಮಾರ್ XI ಟೀಮ್ ಭರ್ಜರಿ ಗೆಲುವು ಸಾಧಿಸಿದೆ.

ಅಭ್ಯಾಸ ಪಂದ್ಯದಲ್ಲಿ ಹಾರ್ದಿಕ್ ಆರ್ಭಟ: ಧವನ್ ತಂಡದ ವಿರುದ್ಧ ಸಿಕ್ಸರ್​ಗಳ ಸುರಿಮಳೆ: ವಿಡಿಯೋ
ಹಾರ್ದಿಕ್ ಪಾಂಡ್ಯ (ಫೈಲ್ ಚಿತ್ರ)
Follow us
TV9 Web
| Updated By: shivaprasad.hs

Updated on:Jul 09, 2021 | 12:49 PM

ಏಕದಿನ ಹಾಗೂ ಟಿ-20 ಸರಣಿಗಾಗಿ ಲಂಕಾನ್ನರ ನಾಡಿನಲ್ಲಿ ಬೀಡುಬಿಟ್ಟಿರುವ ಭಾರತ ಕ್ರಿಕೆಟ್ ತಂಡ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ. ಇದೇ ಜುಲೈ 13 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಅರ್ಧಕ್ಕೆ ನಿಂತ ಐಪಿಎಲ್ ಬಳಿಕ ಯಾವುದೇ ಪಂದ್ಯವನ್ನು ಆಡದ ಶಿಖರ್ ಧವನ್ ನೇತೃತ್ವದ ಈ ತಂಡಕ್ಕೆ ಅಭ್ಯಾಸ ಪಂದ್ಯ ಆಯೋಜಿಸಿಲ್ಲ. ಇದಕ್ಕಾಗಿ ತಮ್ಮದೇ ತಂಡವನ್ನು ಎರಡು ಭಾಗಗಳನ್ನಾಗಿ ಮಾಡಿ ಪ್ರ್ಯಾಕ್ಟೀಸ್ ಮ್ಯಾಚ್ ಆಡುತ್ತಿದೆ.

ನಿನ್ನೆ ಗುರುವಾರದಂದು ನಡೆದ ಅಭ್ಯಾಸ ಪಂದ್ಯದಲ್ಲಿ ಶಿಖರ್ ಧವನ್ XI ತಂಡದ ವಿರುದ್ಧ ಭುವನೇಶ್ವರ್ ಕುಮಾರ್ XI ಟೀಮ್ ಭರ್ಜರಿ ಗೆಲುವು ಸಾಧಿಸಿದೆ. ಭುವಿ ತಂಡದ ಸದಸ್ಯರಾಗಿದ್ದ ಹಾರ್ದಿಕ್ ಪಾಂಡ್ಯ, ಪೃಥ್ವಿ ಶಾ, ಸೂರ್ಯ ಕುಮಾರ್ ಯಾದವ್ ಮೈದಾನದ ಮೂಲೆಮೂಲೆಗೆ ಚೆಂಡನ್ನು ಅಟ್ಟಿ ಪರಾಕ್ರಮ ಮೆರೆದಿದ್ದಾರೆ. ಅದರಲ್ಲೂ ಹಾರ್ದಿಕ್ ಬ್ಯಾಟ್​ನಿಂದ ಸಿಕ್ಸರ್​ಗಳ ಆರ್ಭಟ ಜೋರಾಗಿಯೇ ಇತ್ತು.

ಭುವಿ ಹಾಗೂ ಧವನ್ ತಂಡದ ನಡುವಣ ಅಭ್ಯಾಸ ಪಂದ್ಯದ ವಿಡಿಯೋವನ್ನು ಶ್ರೀಲಂಕಾ ಕ್ರಿಕೆಟ್ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ಹಂಚಿಕೊಂಡಿದೆ. ಎರಡು ನಿಮಿಷ ಮೂವತ್ತು ಸೆಕೆಂಡ್​ನಷ್ಟಿರುವ ಈ ವಿಡಿಯೋದಲ್ಲಿ ಪಾಂಡ್ಯ, ಶಾ ಸಿಕ್ಸರ್​ಗಳ ಮಳೆ ಸುರಿಸಿದ್ದಾರೆ. ಸದ್ಯ ಈ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ.

ಇದರ ಜೊತೆಗೆ ಭಾರತೀಯ ಬೌಲರ್​ಗಳ ದಾಳಿಯ ವಿಡಿಯೋವನ್ನು ಲಂಕಾ ಕ್ರಿಕೆಟ್ ಶೇರ್ ಮಾಡಿದೆ. ಇದರಲ್ಲಿ ಕಳಪೆ ಫಾರ್ಮ್​ನಲ್ಲಿದ್ದ ಕುಲ್ದೀಪ್ ಯಾದವ್ 3 ವಿಕೆಟ್ ಕಿತ್ತು ಮಿಂಚಿದ್ದಾರೆ. ಜೊತೆಗೆ ನವ್​ದೀಪ್ ಸೈನಿ ಹಾಗೂ ಯಜುವೇಂದ್ರ ಚಹಾಲ್ ಎರಡು ವಿಕೆಟ್ ಪಡೆದಿದ್ದಾರೆ. ಚೇತನ್ ಸಕರಿಯ ಮತ್ತು ದೀಪಕ್ ಚಹಾರ್ ತಲಾ 1 ವಿಕೆಟ್ ತಮ್ಮದಾಗಿಸಿದ್ದಾರೆ. ಸೈನಿ ಅವರು ದೇವದತ್ ಪಡಿಕ್ಕಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಎರಡು ಪ್ರಮುಖ ವಿಕೆಟ್ ಕಿತ್ತರು.

ಶ್ರೀಲಂಕಾ ವಿರುದ್ಧ ಭಾರತ ತಂಡ ಒಟ್ಟು 6 ಪಂದ್ಯಗಳನ್ನು ಆಡಲಿದೆ. ಇದರಲ್ಲಿ ಮೂರು ಏಕದಿನ ಹಾಗೂ ಮೂರು ಟಿ-20 ಪಂದ್ಯಗಳು ಸೇರಿವೆ. ಮೊದಲ ಏಕದಿನ ಪಂದ್ಯ ಜುಲೈ 13 ರಂದು ನಡೆಯಲಿದೆ. ಎರಡನೇ ಪಂದ್ಯ ಜುಲೈ 16 ಹಾಗೂ ಅಂತಿಮ ಮೂರನೇ ಏಕದಿನ ಜುಲೈ 18ಕ್ಕೆ ನಿಗದಿ ಮಾಡಲಾಗಿದೆ. ಭಾರತೀಯ ಕಾಲಮಾನದ ಪ್ರಕಾರ ಏಕದಿನ ಪಂದ್ಯ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದೆ.

ಇನ್ನೂ ಜುಲೈ 21 ರಂದು ಮೊದಲ ಟಿ-20 ಪಂದ್ಯ ನಡೆಯಲಿದ್ದು, ಜುಲೈ 23ಕ್ಕೆ ಎರಡನೇ ಹಾಗೂ ಜುಲೈ 25 ರಂದು ಮೂರನೇ ಟಿ-20 ಪಂದ್ಯ ಆಯೋಜಿಸಲಾಗಿದೆ. ಇದು ಸಂಜೆ 7 ಗಂಟೆಗೆ ಶುರುವಾಗಲಿದೆ. ಎಲ್ಲಾ ಏಕದಿನ ಹಾಗೂ ಟಿ-20 ಪಂದ್ಯ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿದೆ.

ಭಾರತ ತಂಡ: ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣ, ಇಶಾನ್ ಕಿಶನ್ (ವಿಕೆಟ್ ಕೀಪರ್). ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಜುವೇಂದ್ರ ಚಹಾಲ್, ರಾಹುಲ್ ಚಹಾರ್, ಕೆ. ಗೌತಮ್, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪ- ನಾಯಕ), ದೀಪಕ್ ಚಹಾರ್, ನವ್​ದೀಪ್ ಸೈನಿ, ಚೇತನ್ ಸಕರಿಯ.

( India vs Srilanka Hardik Pandya smash sixes Indias intra-squad match here is the video)

Published On - 12:47 pm, Fri, 9 July 21

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ